Minister Ramalingareddy ರಾಜ್ಯ ಸರ್ಕಾರದ ಮಹಿಳಾ ಸಬಲೀಕರಣದೆಡೆಗಿನ ಮಹತ್ವಾಕಾಂಕ್ಷೆ ಯೋಜನೆಯಾದ ಶಕ್ತಿ ಯೋಜನೆಯು 500 ಕೋಟಿ ಮಹಿಳಾ ಟಿಕೇಟ್ ಉಚಿತ ಪ್ರಯಾಣ ಮತ್ತೊಂದು ವಿಶ್ವ ದಾಖಲೆಗೆ International Book of Records – World Record of Excellence ಸೇರ್ಪಡೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.
ಈಗಾಗಲೇ Golden Book of World Records ನಲ್ಲಿ ಸೇರ್ಪಡೆಯಾಗಿತ್ತು. ನಾಲ್ಕು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಸಮಸ್ತ ಅಧಿಕಾರಿ/ ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕ ಮುಖಂಡರುಗಳಿಗೆ ಅವರು ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
Minister Ramalingareddy ಶಕ್ತಿ ಯೋಜನೆಯು ರಾಜ್ಯದ ಮಹಿಳೆಯರನ್ನು ಆರ್ಥಿಕ, ಸಾಮಾಜಿಕ ಹಾಗೂ ಔದ್ಯೋಗಿಕವಾಗಿ ಸಬಲರನ್ನಾಗಿಸಿದೆ. ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಅನುಷ್ಠಾನಗೊಳಿಸಿರುವುದು ಶಕ್ತಿ ಯೋಜನೆಯ ಯಶಸ್ಸನ್ನು ಬಿಂಬಿಸಿದ್ದು ಮಹಿಳಾ ಪ್ರಯಾಣಿಕರಿಗೂ ಅಭಿನಂದನೆಗಳನ್ನು ಅವರು ಸಲ್ಲಿಸಿದರು.
