ಶಿವಮೊಗ್ಗದಲ್ಲಿ ಅ.10ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆ
ಶಿವಮೊಗ್ಗ, ಅಕ್ಟೋಬರ್ 6, 2025:
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಸರ್ಕಾರಿ ನಿವೃತ್ತ ನೌಕರರ ಸಂಘ ಹಾಗೂ ಹಿರಿಯ ನಾಗರಿಕರ ಶ್ರೇಯೋಭಿವೃದ್ಧಿಗಾಗಿ ಶ್ರಮಿಸುತ್ತಿರುವ ವಿವಿಧ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಅ.10, 2025 ರಂದು ಬೆಳಗ್ಗೆ 10.30ಕ್ಕೆ ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಆಚರಿಸಲಾಗುತ್ತಿದೆ.
ಈ ವರ್ಷದ ಘೋಷವಾಕ್ಯ
“ಹಿರಿಯ ನಾಗರಿಕರು; ನಮ್ಮ ಆಶೋತ್ತರಗಳು, ನಮ್ಮ ಯೋಗಕ್ಷೇಮ ಮತ್ತು ಹಮ್ಮ ಹಕ್ಕುಗಳನ್ನು ಸ್ಥಳೀಯ ಮತ್ತು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಬಲ್ಲ ಸಶಕ್ತರು” ಎಂಬ ಘೋಷವಾಕ್ಯದಡಿ ಕಾರ್ಯಕ್ರಮ ನಡೆಯಲಿದ್ದು, ಹಿರಿಯ ನಾಗರಿಕರ ಹಕ್ಕುಗಳು, ಭದ್ರತೆ ಮತ್ತು ಸಾಮಾಜಿಕ ಭಾಗವಹಿಸುವಿಕೆಗೆ ಪ್ರಾಮುಖ್ಯತೆ ನೀಡಲಾಗುತ್ತದೆ.
ಕಾರ್ಯಕ್ರಮದ ಉದ್ಘಾಟನೆ ಮತ್ತು ಅಧ್ಯಕ್ಷತೆ
- ಉದ್ಘಾಟನೆ: ಎಸ್. ಮಧು ಬಂಗಾರಪ್ಪ – ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು
- ಅಧ್ಯಕ್ಷತೆ: ಎಸ್. ಎನ್. ಚನ್ನಬಸಪ್ಪ – ಶಾಸಕ, ಶಿವಮೊಗ್ಗ ನಗರ ಕ್ಷೇತ್ರ
ವಿಶೇಷ ಅತಿಥಿಗಳು
- ಶ್ರೀಮತಿ ಲಕ್ಷ್ಮಿ ಆರ್. ಹೆಬ್ಬಾಳ್ಕರ್ – ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ
- ಬಿ.ಕೆ. ಸಂಗಮೇಶ್ವರ – ಅಧ್ಯಕ್ಷರು, ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ಧಿ ನಿಗಮ ಹಾಗೂ ಶಾಸಕ
- ಗೋಪಾಲಕೃಷ್ಣ ಬೇಳೂರು – ಅಧ್ಯಕ್ಷರು, ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆ ನಿಗಮ ಹಾಗೂ ಶಾಸಕ
ಭಾಗವಹಿಸುವ ಗಣ್ಯರು
- ಲೋಕಸಭೆ ಮತ್ತು ವಿಧಾನಮಂಡಳಿಯ ಸದಸ್ಯರು
- ನಿಗಮ, ಮಂಡಳಿ ಮತ್ತು ಪ್ರಾಧಿಕಾರಗಳ ಅಧ್ಯಕ್ಷರು
- ಶಿವಮೊಗ್ಗ ಜಿಲ್ಲಾಧಿಕಾರಿ
- ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ
- ಜಿಲ್ಲಾ ಪಂಚಾಯತ್ ಸಿಇಒ
- ಮಹಾನಗರ ಪಾಲಿಕೆ ಆಯುಕ್ತರು
- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು
- ಅಂಗವಿಕಲರ ಕಲ್ಯಾಣಾಧಿಕಾರಿಗಳು
- ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು
- ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು
- ವಿವಿಧ ಸಂಘಟನೆಗಳ ಪ್ರತಿನಿಧಿಗಳು
- ಮಾಧ್ಯಮ ಪ್ರತಿನಿಧಿಗಳು
- ಸಾರ್ವಜನಿಕರು ಮತ್ತು ಹಿರಿಯ ನಾಗರಿಕರು
ಸಾರ್ವಜನಿಕರ ಪಾಲ್ಗೊಳ್ಳುವಿಕೆ
ಕಾರ್ಯಕ್ರಮದಲ್ಲಿ ಜಿಲ್ಲೆಯ ಎಲ್ಲಾ ಹಿರಿಯ ನಾಗರಿಕರು, ಸಾರ್ವಜನಿಕರು ಮತ್ತು ಸಮಾಜ ಸೇವಾ ಸಂಘಟನೆಗಳ ಸದಸ್ಯರು ಪಾಲ್ಗೊಳ್ಳಲು ಆಹ್ವಾನಿಸಲಾಗಿದೆ. ಈ ಕಾರ್ಯಕ್ರಮವು ಹಿರಿಯ ನಾಗರಿಕರ ಹಕ್ಕು, ಗೌರವ ಮತ್ತು ಜೀವನದ ಗುಣಮಟ್ಟವನ್ನು ಉತ್ತೇಜಿಸಲು ನಿಗದಿಯಾಗಿದೆ.
