Madhu Bangarappa ಶಿವಮೊಗ್ಗ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಜನಸಾಮಾನ್ಯರ ಪರಿಶ್ರಮದ ಫಲವಾಗಿ ಇಂದು ನೂತನ ತಾಲ್ಲೂಕು ಪಂಚಾಯ್ತಿ ಕಟ್ಟಡ ಉದ್ಘಾಟನೆಯಾಗಿರುವುದು ಬಹಳ ಸಂತೋಷವನ್ನು ಉಂಟು ಮಾಡಿದೆ ಎಂದು ಸಾರ್ವಜನಿಕ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪ ತಿಳಿಸಿದರು.
ಶನಿವಾರ ನಗರದಲ್ಲಿ ನೂತನ ತಾಲ್ಲೂಕು ಪಂಚಾಯತಿ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತಾನಾಡಿದರು.
ತಾಲ್ಲೂಕು ಪಂಚಾಯಿತಿ ನೂತನ ಕಟ್ಟಡವನ್ನು ಬಹಳ ಅಚ್ಚುಕಟ್ಟಾಗಿ ನಿರ್ಮಿಸಲಾಗಿದೆ ಎಂದ ಅವರು ಇನ್ನು ಬಾಕಿ ಉಳಿದಿರುವ ಕಾಮಗಾರಿಗಳಿಗೆ, ಹೆಚ್ಚಿನ ಅನುದಾನ ತಂದು ಉಳಿದ ಕೆಲಸವನ್ನು ಸಂಪೂರ್ಣ ಮಾಡಲು ಸಹಕರಿಸುವುದಾಗಿ ಇದೇ ವೇಳೆ ಭರವಸೆ ನೀಡಿದರು.
Madhu Bangarappa ಕಾರ್ಯಪಾಲಕ ಅಭಿಯಂತರರಾದ ಬಿ.ಎನ್. ಮಂಜುನಾಥ್ ಮಾತನಾಡಿ, ತಾ.ಪಂ. ಕಟ್ಟಡವು ರೂ.2 ಕೋಟಿ ಮೊತ್ತದಲ್ಲಿ ಅನುಮೋದನೆಗೊಂಡಿದ್ದು, 1.72 ಕೋಟಿ ಮೊತ್ತದಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗಿದೆ ಹಾಗೂ ಕಟ್ಟಡಕ್ಕೆ ತಾರಸಿ ಶೀಟ್ ಸೇರಿದಂತೆ ಇನ್ನೂ ಕೆಲವು ಕಾಮಗಾರಿಗಳು ಬಾಕಿ ಉಳಿದಿದ್ದು, ಸಚಿವರು ಅನುದಾನ ಬಿಡುಗಡೆ ಮಾಡಿಸಿಕೊಡಬೇಕೆಂದು ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಶಿವಮೊಗ್ಗ ಗ್ರಾಮಾಂತರ ಶಾಸಕರಾದ ಶಾರದಾ ಪೂರ್ಯಾನಾಯ್ಕ್ ಮಾತನಾಡಿ, ತಾ.ಪಂ. ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಿಸಲಾಗಿದೆ. ಮುಂಬರುವ ದಿನಗಳಲ್ಲಿ ತಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಆಯ್ಕೆಯಾಗಿ ಇಲ್ಲಿ ಉತ್ತಮವಾದ ಆಡಳಿತ ನಡೆಸುವಂತಾಗಲಿ ಎಂದು ಹಾರೈಸಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಎಸ್. ಚಂದ್ರಭೂಪಾಲ್, ತಾಲ್ಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷರಾದ ಮಧು ಹೆಚ್.ಎಂ, ಜಿ.ಪಂ.ಸಿಇಓ ಹೇಮಂತ್, ತಾಲ್ಲೂಕು ಪಂಚಾಯತ್ ಇಓ ತಾರಾ, ಇತರೆ ಅಧಿಕಾರಿಗಳು ಹಾಜರಿದ್ದರು.
Madhu Bangarappa ಜಿಲ್ಲಾ ಉಸ್ತುವಾರಿ ಸಚಿವರಿಂದ ನೂತನ ತಾ.ಪಂ. ಕಟ್ಟಡ ಲೋಕಾರ್ಪಣೆ
Date:
