Thursday, August 6, 2026
Thursday, August 6, 2026

CM Siddharamaiah ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

CM Siddharamaiah ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ. ನಾಗರಿಕತೆ ಬೆಳೆದದ್ದು – ಉಳಿದಿರುವುದು ನೀರಿನಿಂದಲೇ. ಜನರಲ್ಲಿ ನೀರಿನ ಬಳಕೆ, ನೀರಿನ ಮೌಲ್ಯ ಮತ್ತು ಅಂತರ್ಜಲ ವೃದ್ಧಿ ಬಗ್ಗೆ ಸಚಿವ ಬೋಸರಾಜು ಅವರು ಇಲಾಖೆಯ ವತಿಯಿಂದ ಉತ್ತಮ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದು ಆರೋಗ್ಯಕರ ಸಂಗತಿ
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ 37 ಲಕ್ಷ ಬೋರ್ ವೆಲ್ ಗಳ ಮೂಲಕ ಅಂತರ್ಜಲ ಬಳಕೆ ಆಗುತ್ತಿದೆ. ದಾಖಲೆಗಳಲ್ಲಿ ಇಲ್ಲದ ಲಕ್ಷಾಂತರ ಅನಧಿಕೃತ ಬೋರ್ ವೆಲ್ ಗಳೂ ಇವೆ. ರಾಷ್ಟ್ರೀಯ ಸರಾಸರಿಗಿಂತ ಶೇ.8 ರಷ್ಟು ಹೆಚ್ಚಿನ‌ ಬಳಕೆ ಆಗುತ್ತಿದೆ ಎನ್ನುವ ವರದಿಗಳಿವೆ.

144 ತಾಲ್ಲೂಕುಗಳನ್ನು ಹೊರತು ಪಡಿಸಿ ಉಳಿದ ತಾಲ್ಲೂಕುಗಳಲ್ಲಿ ನೀರಿನ ಅಂತರ್ಜಲದ ಪ್ರಮಾಣ ಕೊರತೆ ಇದೆ. ಈ ಕಾರಣಕ್ಕೇ ಕೋಲಾರ ಮತ್ತು ಚಿಕ್ಕಬಳ್ಳಾಪುರದ ಕೆರೆಗಳನ್ನು ತುಂಬಿಸುವ ಕೆ.ಸಿ.ವ್ಯಾಲ್ಯೂ ಯೋಜನೆ ಜಾರಿ ಮಾಡಲಾಯಿತು. ಇದರಿಂದ ಈಗ ಅಂತರ್ಜಲ ವೃದ್ಧಿಯಾಗಿದೆ. ಆದರೆ ಇದನ್ನೂ ವಿರೋಧಿಸುವವರು ಇದ್ದಾರೆ ಎಂದು ಮುಖ್ಯಮಂತ್ರಗಳು ನೀರಿಗಾಗಿ ನಾಳೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

CM Siddharamaiah ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ತುಮಕೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಅಂತರ್ಜಲ ವೃದ್ಧಿಗೆ ಸಾವಿರಾರು ಕೋಟಿ ಖರ್ಚು ಮಾಡಿದ್ದೇವೆ. ಇದರಿಂದ ಅಂತರ್ಜಲ ಉತ್ತಮವಾಗಿ ವೃದ್ಧಿಯಾಗಿದೆ ಎಂದು ನುಡಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga News ಥಣ್ಣಗಾಗುತ್ತಿರುವ ಸಚಿವಾಕಾಂಕ್ಷಿತನ..…ಶಿವಕೌಶಲ

Shivamogga News ರಾಜಕೀಯದಲ್ಲಿ ಸ್ಥಿರತೆ ಯಾವತ್ತಿಗೂ ನಿರೀಕ್ಷಿಸಲಾಗದು ಎಂಬ ಮುತ್ಸದ್ದಿಗಳ ಮಾತಿದೆ....

DC Shivamogga ಮುಂದಿನ 61 ವಾರಗಳಿಗೆ ಜಾನುವಾರುಗಳ ಅಗತ್ಯ ಮೇವಿಗೆ ಕೊರತೆಯಿಲ್ಲ : ಪ್ರಭುಲಿಂಗ ಕವಳಿಕಟ್ಟಿ

DC Shivamogga ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಆಗಸ್ಟ್...