Supreme Court ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಬಿ.ಆರ್ ಗವಾಯಿ ಅವರಿಗೆ ಶೂ ಎಸೆಯಲು ಯತ್ನಿಸಿದ ವಕೀಲರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯಿಂದ ಸೊರಬ ಪಟ್ಟಣದ ತಾಲೂಕು ಕಚೇರಿಗೆ ತೆರಳಿ ತಹಶೀಲ್ದಾರ್ ಮಂಜುಳಾ ಹೆಗಡಾಳ್ ಅವರ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ನೇತೃತ್ವ ವಹಿಸಿದ್ದ ಸಮಿತಿಯ ಜಿಲ್ಲಾ ಸಂಘಟನಾ ಸಂಚಾಲಕ ಶ್ಯಾಮಣ್ಣ ತುಡನೀರು ಮಾತನಾಡಿ, ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರಾದ ಬಿ.ಆರ್ ಗವಾಯಿ ಅವರ ಮೇಲೆ ನಡೆದ ದಾಳಿಯಲ್ಲ, ಇದು ಸಂವಿಧಾನದ ಮೇಲೆ ನಡೆದ ದಾಳಿಯಾಗಿದೆ ಹಾಗೂ ನ್ಯಾಯಾಂಗ ವ್ಯವಸ್ಥೆಗೆ ಮಾಡಿದ ಅವಮಾನವಾಗಿದೆ. ದಲಿತ ಸಮುದಾಯಕ್ಕೆ ಸೇರಿರುವ ನ್ಯಾಯಾಧೀಶರು ಸಾಮಾಜಿಕ ಪ್ರತಿರೋಧಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆಗಳ ಮೂಲಕ ಉನ್ನತ ಸ್ಥಾನಕ್ಕೆ ಏರಿದ್ದಾರೆ. ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಯಾಗಿ ಏಳು ದಶಕಗಳು ಕಳೆದರೂ ಮನುವಾದಿಗಳ ಮನಸ್ಸಲ್ಲಿ ಭದ್ರವಾಗಿ ಉಳಿದಿರುವುದಕ್ಕೆ ಘಟನೆಯು ಸಾಕ್ಷಿಯಾಗಿದೆ. ಇದೊಂದು ಈ ನೆಲದಲ್ಲಿ ಕಾನೂನು ಮತ್ತು ನ್ಯಾಯಾಂಗದ ವ್ಯವಸ್ಥೆಯ ನಡೆದಿರುವ ನಾಚಿಗೆಗೇಡಿನ ಹಾಗೂ ಸಹಿಸಲಾಗದ ಅಕ್ರಮಣವಾಗಿದೆ ಎಂದು ಆರೋಪಿಸಿದರು.
ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರ ಮೇಲೆ ಮನುವಾದಿಗಳು ಹಲ್ಲೆ ಮಾಡುತ್ತಾರೆ. ಹೀಗಿದ್ದಲ್ಲಿ ಈ ದೇಶದ ಅಸಹಾಯಕ ದಲಿತರ ಸ್ಥಿತಿ ಹೇಗೆ ಎಂಬುದರ ಬಗ್ಗೆ ಉನ್ನತ ಸ್ಥಾನದಲ್ಲಿ ಕುಳಿತು ದಲಿತರ ಒಮ್ಮೆ ಅಲೋಚಿಸಬೇಕಿದೆ. ದೇಶದ ವಕೀಲರು, ಎಲ್ಲ ಸಂಘಟನೆಗಳು ಈ ಘಟನೆ ಖಂಡಿಸಿ ಮತ್ತು ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಾಧೀಶರ ಬೆಂಬಲಿಸಿ ಪ್ರತಿರೋಧ ವ್ಯಕ್ತಪಡಿಸುವುದು ತುಂಬಾ ಅಗತ್ಯವಾಗಿದೆ. ಇಂತಹ ಘಟನೆಯು ದೇಶದಲ್ಲಿ ನಡೆದ ಕಪ್ಪು ಚುಕ್ಕೆ ದಿನವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
Supreme Court ದೇಶದ ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಾಧೀಶರಾದ ಬಿ.ಆರ್ ಗವಾಯಿ ಅವರ ಮೇಲೆ ಕೋರ್ಟ್ ಹಾಲ್ ನಲ್ಲಿ ಮಧ್ಯಾಹ್ನ ವಕೀಲರೊಬ್ಬರು ತನ್ನ ಕಾಲಿನಲ್ಲಿರುವ ಬೂಟನ್ನು ಅವರ ಮೇಲೆ ಎಸೆದು ದೇಶದ ನಾಗರಿಕ ಸಮಾಜಕ್ಕೆ ತಲೆತಗ್ಗಿಸುವಂತೆ ಮಾಡಿದ್ದಾರೆ. ಬೂಟು ಎಸೆದ ವಕೀಲರ ಪರವಾನಗಿ ರದ್ದುಪಡಿಸಿ ಅವರನ್ನು ದೇಶದಿಂದ ಗಡಿಪಾರು ಮಾಡುವ ಮೂಲಕ ದೇಶದ ಘನತೆ ಮತ್ತು ಗೌರವವನ್ನು ಎತ್ತಿ ಹಿಡಿಯುವ ಕೆಲಸ ಕೇಂದ್ರ ಸರ್ಕಾರ ಮಾಡಬೇಕು. ಈ ಕುತಂತ್ರದ ಹಿಂದೆ ಯಾರಿದ್ದಾರೆ ಎನ್ನುವುದು ಸಿಬಿಐ ತನಿಖೆ ನಡೆಸಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಈ ಸಂದರ್ಭದಲ್ಲಿ ಸಮಿತಿಯ ತಾಲೂಕು ಸಂಚಾಲಕ ಎಂ.ಎಸ್. ಪ್ರದೀಪ್ ಕುಮಾರ್, ಖಜಾಂಚಿ ಕೆ.ಎಸ್. ಗದಿಗೇಶ್, ತಾಲೂಕು ಸಂಘಟನಾ ಸಂಚಾಲಕರಾದ ಕೆ.ಎಚ್. ಯುವರಾಜ್, ಎಂ. ಜಗದೀಶ್ ಸೇರಿದಂತೆ ಇತರರಿದ್ದರು.
Supreme Court ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರಿಗೆ ಶೂ ಎಸೆಯಲು ಯತ್ನಿಸಿದ ವಕೀಲರನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಿ: ಮಂಜುಳಾ ಹೆಗಡಾಳ್
Date:
