Sunday, February 1, 2026
Sunday, February 1, 2026

Shivamogga Police ಅನಾಮಧೇಯ ಮೃತವ್ಯಕ್ತಿಯ ದೇಹಪತ್ತೆ. ಶಿವಮೊಗ್ಗ ಕೋಟೆ ಪೊಲೀಸ್ ಠಾಣೆ ಪ್ರಕಟಣೆ

Date:

Shivamogga Police ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ನಗರದ ವೀರಭದ್ರ ಟಾಕೀಸ್ ಎದುರನ ಫುಟ್‌ಪಾತ್ ಮೇಲೆ ಸುಮಾರು 45-50 ವರ್ಷ ವಯಸ್ಸಿನ ವ್ಯಕ್ತಿಯೊಬ್ಬರು ಕೈಕಾಲು ತಿರುವಿಕೊಂಡು ಅಸ್ವಸ್ಥರಾಗಿ ಬಿದ್ದಿದ್ದು, ಆತನನ್ನು ಸಾರ್ವಜನಿಕರ ಸಹಾಯದಿಂದ ಆಂಬ್ಯುಲೆನ್ಸ್ ಮೂಲಕ ಮೆಗ್ಗಾನ್ ಆಸ್ಪತ್ರೆಗೆ ಸೇರಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಅ.09 ರಂದು ಮೃತ ಪಟ್ಟಿರುತ್ತಾರೆ. ಈತನ ಹೆಸರು, ವಿಳಾಸ ಹಾಗೂ ವಾರಸುದಾರರ ಬಗ್ಗೆ ಯಾವುದೇ ಸುಳಿವು ದೊರತಿಲ್ಲ.
ವ್ಯಕ್ತಿಯು ಸುಮಾರು 5.10 ಅಡಿ ಎತ್ತರವಿದ್ದು, ಕೋಲು ಮುಖ, ತೆಳ್ಳನೆಯ ಮೈಕ್ಟು, ಎಣ್ಣೆಗೆಂಪು ಬಣ್ಣ ಹೊಂದಿರುತ್ತಾನೆ. ಬಲಗೈ Shivamogga Police ತೋಳಿನ ಮೇಲೆ “ಇಂದ್ರ” ಎಂಬ ಕನ್ನಡ ಅಕ್ಷರದ ಮತ್ತು ಸೂರ್ಯನ ಚಿತ್ರವುಳ್ಳ ಟ್ಯಾಟೂ ಇರುತ್ತದೆ. ಮೈಮೇಲೆ ಬಿಳಿ ಮತ್ತು ಸಿಮೆಂಟ್ ಬಣ್ಣದ ಟೀಶರ್ಟ್ ಮತ್ತು ನೀಲಿ ಬಣ್ಣದ ಬರ್ಮುಡಾ ಚಡ್ಡಿ ಧರಿಸಿರುತ್ತಾರೆ. ಹೊಟ್ಟೆಯ ಮೇಲೆ ಸುಮಾರು 8 ಇಂಚಿನ ಉದ್ದದ ಅಪರೇಷನ್ ಆಗಿರುವ ಗಾಯದ ಗುರುತು ಇರುತ್ತದೆ.
ಈ ಮೃತ ವ್ಯಕ್ತಿಯ ವಾರಸುದಾರರ ಸುಳಿವು ದೊರೆತಲ್ಲಿ ಕೋಟೆ ಪೊಲೀಸ್ ಠಾಣೆಗೆ ದೂ.ಸಂ.: 08182-261415 ನ್ನು ಸಂಪರ್ಕಿಸಿ ಮಾಹಿತಿ ನೀಡುವಂತೆ ಪೊಲೀಸ್ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...