District Legal Services Authority ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ನಗರದ ಡಿಆರ್‌ಎ ಸಭಾ ಭವನದಲ್ಲಿ ಅ.18 ರಂದು ಬೆಳಿಗ್ಗೆ 10.30ಕ್ಕೆ “ಜಿಲ್ಲಾ ಮಟ್ಟದ ಪೋಷಣ್ ಮಾಸಾಚರಣೆ” ಮತ್ತು “ಬೇಟಿ ಬಚಾವೋ ಬೇಟಿ ಪಡಾವೋ” ಕುರಿತು ಅರಿವು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ನೆರವೇರಿಸುವರು. ಅಧ್ಯಕ್ಷತೆಯನ್ನು ಜಿ.ಪಂ ಸಿಇಓ ಹೇಮಂತ್.ಎನ್ ವಹಿಸಿಲಿದ್ದು, ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್.ಎಂ.ಎಸ್ ಘನ ಉಪಸ್ಥಿತರಿರುವರು.
District Legal Services Authority ಮುಖ್ಯ ಅತಿಥಿಗಳಾಗಿ ಜಿಲ್ಲಾ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಶಿಶು ಅಭಿವೃದ್ದಿ ಯೋಜನೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಪಾಲ್ಗೊಳ್ಳುವರು. ಬಾಲ ನ್ಯಾಯ ಮಂಡಳಿಯ ಸದಸ್ಯರು ಹಾಗೂ ಮನೋರೋಗ ತಜ್ಞರಾದ ಡಾ.ಪವಿತ್ರ ಕೆ.ಎಸ್ ವಿಶೇಷ ಉಪನ್ಯಾಸ ನೀಡುವರು.
District Legal Services Authority ಅ.18 ರಂದು ಜಿಲ್ಲಾ ಮಟ್ಟದ ಪೋಷಣ್ ಮಾಸಾಚರಣೆ & “ಅರಿವು” ಕಾರ್ಯಕ್ರಮ
Date:
