Thursday, September 17, 2026
Thursday, September 17, 2026

CM Siddharamaiah ಹುತಾತ್ಮ ಪೊಲೀಸರ ತ್ಯಾಗ,ಬಲಿದಾನಕ್ಕೆ ಬೆಲೆ ಕಟ್ಟಲಾಗದು, ಅವರನ್ನ ಸ್ಮರಿಸಿ ನಮಿಸುವುದು ನಮ್ಮ ಕರ್ತವ್ಯ- ಸಿದ್ಧರಾಮಯ್ಯ

Date:

CM Siddharamaiah ರಾಜ್ಯದ ಘನತೆ, ಅಭಿವೃದ್ಧಿ ಮತ್ತು ಪ್ರಗತಿಗೆ ಕಂಟಕವಾಗಿದ್ದ ಸಂವಿಧಾನ ವಿರೋಧಿ ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಕಡಿವಾಣ ಬಿದ್ದಿದೆ.‌ ಇದರ ಶ್ರೇಯಸ್ಸು ಪೊಲೀಸ್ ಇಲಾಖೆಗೆ ಸಲ್ಲಬೇಕು.

ಪೊಲೀಸ್ ಇಲಾಖೆ ಶಾಂತಿ-ಸುವ್ಯವಸ್ಥೆ ಕಾಪಾಡಿದರೆ ರಾಜ್ಯದ ಅಭಿವೃದ್ಧಿ ಸಾಧ್ಯವಾಗುತ್ತದೆ. ಹೀಗಾಗಿ
ಅನೈತಿಕ ಪೊಲೀಸ್ ಗಿರಿಗೆ ಕಡಿವಾಣ ಬಿದ್ದಿರುವುದು ಉತ್ತಮ‌ ಕೆಲಸ. ಹಾಗೆಯೇ ಮಾದಕ ವಸ್ತು ಹಾವಳಿಗೂ ಬ್ರೇಕ್ ಬಿದ್ದಿದ್ದು ಇದನ್ನು ಇನ್ನಷ್ಟು ಪರಿಣಾಮಕಾರಿಯಾಗಿ ನಿರ್ವಹಿಸಬೇಕಿದೆ. ಈ ಎಲ್ಲಾ ಸಾಧನೆಗಳ ಶ್ರೇಯ ಪೊಲೀಸ್ ಇಲಾಖೆಗೆ ಸಲ್ಲಬೇಕು
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯನವರು
ಹೇಳಿದ್ದಾರೆ.

ಮುಖ್ಯಮಂತ್ರಿಗಳು ಬೆಂಗಳೂರಿನ ಪೊಲೀಸ್ ಹುತಾತ್ಮರ ಉದ್ಯಾನವನದಲ್ಲಿ ನಡೆದ ಪೊಲೀಸ್ ಸಂಸ್ಮರಣಾ ದಿನಾಚರಣೆಯಲ್ಲಿ ಹುತಾತ್ಮ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಗೌರವ ನಮನ ಸಲ್ಲಿಸಿ ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಪರಿಶಿಷ್ಠ ಜಾತಿ ಹಾಗೂ ವರ್ಗದವರ ಮೇಲಿನ ದೌರ್ಜನ್ಯ ತಡೆಗೆ ಡಿಸಿಆರ್‌ಇ ಪೊಲೀಸ್ ಠಾಣೆಗಳನ್ನು ಕಾರ್ಯೋನ್ಮುಖಗೊಳಿಸಿದ್ದೇವೆ. ಇವು ಪರಿಣಾಮಕಾರಿಯಾಗಿ ಕೆಲಸ ಮಾಡುವ ಮೂಲಕ ಸಾಂವಿಧಾನಿಕ ಹಕ್ಕು ಮತ್ತು ಮೌಲ್ಯಗಳನ್ನು ಕಾಪಾಡುವ ಕೆಲಸ ಮಾಡಬೇಕು.

CM Siddharamaiah ಒಂದು ವರ್ಷದಲ್ಲಿ ರಾಜ್ಯದ 8 ಮಂದಿ ಸೇರಿ ದೇಶದಲ್ಲಿ 191 ಮಂದಿ ಕರ್ತವ್ಯ ನಿರ್ವಹಣೆ ವೇಳೆ ಪ್ರಾಣ ತ್ಯಾಗ ಮಾಡುವ ಮೂಲಕ ಹುತಾತ್ಮರಾಗಿದ್ದಾರೆ. ಇವರ ತ್ಯಾಗ, ಬಲಿದಾನಕ್ಕೆ ಬೆಲೆ ಕಟ್ಟಲಾಗದು. ಇವರನ್ನು ಸ್ಮರಿಸಿ, ನಮಿಸುವುದು ಪ್ರತಿಯೊಬ್ಬರ ಕರ್ತವ್ಯ.
ಸಂವಿಧಾನದಲ್ಲಿ ಜನರಿಗೆ ಕೊಟ್ಟಿರುವ ಹಕ್ಕುಗಳನ್ನು ಕಾಪಾಡುವ ಜವಾಬ್ದಾರಿಯನ್ನೂ ಪೊಲೀಸ್ ಇಲಾಖೆ ನಿರ್ವಹಿಸುತ್ತಿದೆ ಎಂದು ತಮ್ಮ ಭಾಷಣದಲ್ಲಿ ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆ ಬಗ್ಗೆ
ಮೆಚ್ಚುಗೆ ವ್ಯಕ್ತಪಡಿಸಿದರು.

ನಿವೃತ್ತ ಪೊಲೀಸ್ ಆರೋಗ್ಯ ಯೋಜನೆಯ ವೈದ್ಯಕೀಯ ಮರು ಪಾವತಿ ವೆಚ್ಚವನ್ನು ವಾರ್ಷಿಕ 1 ಲಕ್ಷ ರೂ.ಗಳಿಂದ 1.50 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಎಲ್ಲಾ ಪೊಲೀಸ್ ಸಿಬ್ಬಂದಿಯ ಆರೋಗ್ಯ ತಪಾಸಣಾ ವೆಚ್ಚವನ್ನು 1,000 ರೂ.ಗಳಿಂದ 1,500 ರೂ.ಗೆ ಹೆಚ್ಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು..

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...