ಬಸವಣ್ಣ ಅವರ ವಚನಗಳು ಮತ್ತು ಕಾಯಕ ಸಂದೇಶ ಇಂದಿಗೂ ಪ್ರಸ್ತುತ ಎಂದು ಸರ್ ಎಂ.ವಿ. ಕಲಾ ಮತ್ತು ವಾಣಿಜ್ಯ ಕಾಲೇಜಿನ ಸಹ ಪ್ರಾಧ್ಯಾಪಕ ಡಾ. ಜಿ.ಎಸ್.ಅಶೋಕ್ ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಬಸವಣ್ಣ ಅವರ ವಚನಗಳು ಸಾರ್ವಕಾಲಿಕ. ಯಾವುದೇ ಜಾತಿ ಭೇದವಿಲ್ಲದೆ ಸಮಾಜದ ಏಳಿಗೆಗೆ ಶ್ರಮಿಸಿದರು.
ರೋಟರಿ ಕ್ಲಬ್‌ಗಳು ಸಹ ಸಮಾಜಮುಖಿ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಂಡು ಕಾರ್ಯ ನಿರ್ವಹಿಸುತ್ತಿವೆ ಎಂದು ತಿಳಿಸಿದರು.
ಬಸವಣ್ಣ ಅವರ ಹಲವಾರು ವಚನಗಳನ್ನು ಪ್ರತಿನಿತ್ಯ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಪ್ರತಿಯೊಬ್ಬ ಮನುಷ್ಯನು ತನ್ನ ಕರ್ತವ್ಯ ಪ್ರಜ್ಞೆ ಮತ್ತು ಕಾಯಕವನ್ನು ಸರಿಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗುತ್ತಾನೆ. ಪ್ರತಿಯೊಬ್ಬರೂ ವಚನಗಳನ್ನು ಅಧ್ಯಯನ ಮಾಡಬೇಕು ಎಂದು ಹೇಳಿದರು.
Rotary Shivamogga ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ಅಧಕ್ಷ ಡಿ.ಕಿಶೋರ್ ಕುಮಾರ್ ಮಾತನಾಡಿ, ಬಸವಣ್ಣ ಅವರ ವಚನಗಳು ಪ್ರತಿಯೊಬ್ಬ ಯುವ ಜನತೆ ಮತ್ತು ನಾವುಗಳೆಲ್ಲರೂ ಪರಿಪಾಲಿಸುವುದನ್ನು ರೂಢಿಸಿಕೊಳ್ಳಬೇಕು ಎಂದು ತಿಳಿಸಿದರು.
ರೋಟರಿ ಸಂಸ್ಥೆಯು ನಿರಂತರವಾಗಿ ಸಮಾಜಮುಖಿ ಕಾರ್ಯಗಳನ್ನು ಆಯೋಜಿಸುವ ಜತೆಯಲ್ಲಿ ವಿವಿಧ ವಿಷಯಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತದೆ. ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ ಎಂದು ಹೇಳಿದರು.
ರೋಟರಿ ಶಿವಮೊಗ್ಗ ಪೂರ್ವ ಕ್ಲಬ್ ಕಾರ್ಯದರ್ಶಿ ಬಿ.ಆರ್.ಧನಂಜಯ್, ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಡಾ. ಗುಡದಪ್ಪ ಕಸಬಿ, ಡಾ. ಪರಮೇಶ್ವರ ಶಿಗ್ಗಾವ್, ಚಂದ್ರಹಾಸ್ ಪಿ ರಾಯ್ಕರ್, ಬಿ.ಗಂಗಪ್ಪ, ಬಿ ಎಚ್ ನಿರಂಜನ, ಅರುಣ್ ಮೂಲೆಮನೆ ಹಾಗೂ ಇತರ ಎಲ್ಲಾ ರೊಟೇರಿಯನ್ ಸದಸ್ಯರು ಉಪಸ್ಥಿರಿದ್ದರು.
