Basavaraja Horatti ಪ್ರಸಕ್ತ ಸಾಲಿನ ವಿಧಾನಮಂಡಲ ಚಳಿಗಾಲ ಅಧಿವೇಶನ ಡಿ.8 ರಿಂದ ಬೆಳಗಾವಿಯಲ್ಲಿ ನಡೆಯುವ ಸಾಧ್ಯತೆ ಇದೆ ಎಂದು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಅವರು ಹೇಳಿದ್ದಾರೆ.
ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಅವರು,
ಚಳಿಗಾಲದ ಅಧಿವೇಶನದ ಕುರಿತು ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಲಾಗಿದ್ದು, ಅವರು ವೇಳಾಪಟ್ಟಿಯನ್ನು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.
Basavaraja Horatti ಇದೇ ವೇಳೆ ಉತ್ತರ ಕರ್ನಾಟಕದ ಕೆಲವು ಚುನಾಯಿತ ಪ್ರತಿನಿಧಿಗಳು ಈ ಪ್ರದೇಶದ ಸಮಸ್ಯೆಗಳ ಬಗ್ಗೆ ಚರ್ಚಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಅವರು, ಉತ್ತರ ಕರ್ನಾಟಕದ ಕುರಿತು ಚರ್ಚೆ ನಡೆಸಲು ಎರಡು ದಿನಗಳನ್ನು (ಬುಧವಾರ ಮತ್ತು ಗುರುವಾರ) ಮೀಸಲಿಡಲಾಗುವುದು ಎಂದು ಹೇಳಿದರು.
