University of Agricultural and Horticultural Sciences ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ನ.07 ರಿಂದ 10ರವರೆಗೆ ಕೃಷಿ ಮಹಾವಿದ್ಯಾಲಯ, ನವಿಲೆ ಆವರಣ, ಶಿವಮೊಗ್ಗ ಇಲ್ಲಿ ಕೃಷಿ -ತೋಟಗಾರಿಕೆ ಮೇಳ-2025ವನ್ನು “ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಎಂಬ ಘೋಷವಾಕ್ಯದೊಂದಿಗೆ ಆಯೋಜಿಸಿದೆ.
ಆಯುಕ್ತರು ಹಾಗೂ ನಿರ್ದೇಶಕರು, ಕೃಷಿ ಇಲಾಖೆ ಬೆಂಗಳೂರು, ಬೆಂಗಳೂರು ತೋಟಗಾರಿಕೆ ಇಲಾಖೆ, ಪಶುಸಂಗೋಪನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಮೀನುಗಾರಿಕೆ ಇಲಾಖೆ, ನಿರ್ದೇಶಕರು ರೇಷ್ಮೆ ಇಲಾಖೆ, ಕೃಷಿ ಮಾರುಕಟ್ಟೆ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳ ನಿರ್ದೇಶಕರುಗಳು, ಬೆಂಗಳೂರು ಅರಣ್ಯ ಇಲಾಖೆ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಕೆ.ಶಿ.ನಾ.ಕೃ ಮತ್ತು ತೋ ವಿ.ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳು, ವ್ಯವಸ್ಥಾನಾ ಮಂಡಳಿ ಸದಸ್ಯರು ಹಾಗೂ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿರಲಿದ್ದಾರೆ.
University of Agricultural and Horticultural Sciences ಈ ಮೇಳದಲ್ಲಿ ತಾಂತ್ರಿಕ ಸಮಾವೇಶಗಳು ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆಯೋಜಿಸಲಾಗಿದ್ದು, ರೈತರು, ರೈತ ಮಹಿಳೆಯರು, ಕೃಷಿ ಕಾರ್ಮಿಕರು, ನಾಗರೀಕರು, ವಿದ್ಯಾರ್ಥಿಗಳು, ವಿಸ್ತರಣಾ ಕಾರ್ಯಕರ್ತರು ಹಾಗೂ ಗ್ರಾಮೀಣ ಅಭಿವೃದ್ಧಿಗೆ ಸಂಬಂಧಿಸಿದ ಎಲ್ಲಾ ಅಧಿಕಾರಿಗಳು ಭಾಗವಹಿಸುವಂತೆ ಕೋರಲಾಗಿದೆ.
University of Agricultural and Horticultural Sciences ನವೆಂಬರ್ 7 ರಿಂದ 10 ವರೆಗೆ ಕೃಷಿ- ತೋಟಗಾರಿಕೆ ಮೇಳ-2025 ಸಹಕಾರ ಕೃಷಿಯಿಂದ ಸುಸ್ಥಿರ ಕೃಷಿ” ಕಾರ್ಯಕ್ರಮ
Date:
