Department of Industry and Commerce ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಜಿಲ್ಲಾ ಕೈಗಾರಿಕಾ ಕೇಂದ್ರ ಮತ್ತು ಶಿವಮೊಗ್ಗ ಜಿಲ್ಲಾ ಇಂಡಸ್ಟ್ರೀಸ್ ಅಸೋಸಿಯೇಷನ್ ಇವರುಗಳ ಸಹಯೋಗದಲ್ಲಿ ಅ.31 ರಂದು ಬೆಳಗ್ಗೆ 10.30ಕ್ಕೆ ಶಿವಮೊಗ್ಗದ ಜಗದ್ಗುರು ಶ್ರೀ ಶ್ರೀ ಭಾರತೀತೀರ್ಥ ಸಭಾಮಂಟಪ, ಶ್ರೀ ಶೃಂಗೇರಿ ಶಂಕರಮಠ ಅಗ್ರಹಾರ, ಸಾಗರ ಇಲ್ಲಿ ಎಂ.ಎಸ್.ಎಂ.ಇ.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವ ಮತ್ತು ವೇಗಗೊಳಿಸುವ ಯೋಜನೆಯಡಿ ಝಡ್.ಇ.ಡಿ./ಲೀನ್ ಯೋಜನೆ ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಉದ್ಘಾಟಿಸಲಿದ್ದಾರೆ. ಶಿವಮೊಗ್ಗ ಜಿಲ್ಲಾ ಇಂಡಸ್ಟ್ರೀಸ್ ಅಸೋಸಿಯೇಶನ್ ಅಧ್ಯಕ್ಷ ಜೋಯಿಸ್ ರಾಮಾಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
Department of Industry and Commerce ಸಾಗರ ಕಂದಾಯ ಇಲಾಖೆ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್, ಸಾಗರದ ಮಲೆನಾಡು ಸಣ್ಣ ಕೈಗಾರಿಕೆ ಮಾಲೀಕರು ಮತ್ತು ಕಾರ್ಮಿಕರ ಸಂಘದ ಸಂಸ್ಥಾಪಕ ಅಧ್ಯಕ್ಷ ಶಿವಾನಂದ ಆಚಾರ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಗಣೇಶ್ ಆರ್. ಹಾಗೂ ಇನ್ನಿತರ ಗಣ್ಯರು ಉಪಸ್ಥಿತರಿರಲಿದ್ದಾರೆ.
