Monday, February 2, 2026
Monday, February 2, 2026

Shivananda Patil ಸೋಯಾಬಿನ್, ಸೂರ್ಯಕಾಂತಿ ,ಹೆಸರುಕಾಳು ಖರೀದಿ ಪ್ರಕ್ರಿಯೆ ಅ.28 ರಿಂದ ಆರಂಭ : ಸಚಿವ ಶಿವಾನಂದ ಪಾಟೀಲ್

Date:

Shivananda Patil ಬೆಂಬಲ ಬೆಲೆಯಲ್ಲಿ ಅಕ್ಟೋಬರ್ 28ರಿಂದ ಸೋಯಾಬಿನ್‌, ಸೂರ್ಯಕಾಂತಿ ಮತ್ತು ಹೆಸರುಕಾಳು ಖರೀದಿ ಆರಂಭವಾಗಲಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ಎಲ್ಲೆಡೆ ಈಗಾಗಲೇ ಖರೀದಿ ಕೇಂದ್ರಗಳನ್ನು ತೆರದು ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ.

ಸೋಯಾಬಿನ್‌ ಖರೀದಿಗೆ ಒಟ್ಟು 206 ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, 19,325 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಬೀದರ್‌ ಜಿಲ್ಲೆಯಲ್ಲಿ 116 ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, 13,033 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ 3,047, ಧಾರವಾಡ ಜಿಲ್ಲೆಯಲ್ಲಿ 2,164 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಹೆಸರುಕಾಳು ಖರೀದಿಗೆ ಒಟ್ಟು 211 ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದ್ದು, 16,578 ರೈತರು ನೋಂದಣಿ ಮಾಡಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಅತಿ ಹೆಚ್ಚು (6362) ರೈತರು ನೋಂದಣಿ ಮಾಡಿಸಿದ್ದಾರೆ.

Shivananda Patil ಸೂರ್ಯಕಾಂತಿ ಖರೀದಿಗೆ 120 ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು, 5,341 ರೈತರು ನೋಂದಣಿ ಮಾಡಿಸಿದ್ದಾರೆ. ಉದ್ದಿನಕಾಳು ಖರೀದಿಗೆ 134 ಖರೀದಿ ಕೇಂದ್ರಗಳನ್ನು ಆರಂಭಿಸಿದ್ದು, 5,274 ರೈತರು
ಎಂದು ನೋಂದಣಿ ಮಾಡಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...