Saturday, December 6, 2025
Saturday, December 6, 2025

ಸಿದ್ಲಿಪುರ ಕಟ್ಟಡ ಕುಸಿತ,ಬಲಿಯಾದ ಕುಟುಂಬಕ್ಕೆ ತಕ್ಷಣ ಪರಿಹಾರ ನೀಡಿ- ಶಾಸಕಿ ಶಾರದಾ ಪೂರ್ಯಾನಾಯ್ಕ

Date:

ಸಿದ್ಲಿಪುರದಲ್ಲಿ ನಡೆದ ಕಟ್ಟಡ ಕುಸಿತದಿಂದ ಕಾರ್ಮಿಕನೊರ್ವ ಸಾವನ್ನಪ್ಪಿದ್ದು, ಕಾರ್ಮಿಕ ಇಲಾಖೆಯು ಈ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆದು ನೊಂದ ಕಾರ್ಮಿಕ ಕುಟುಂಬಕ್ಕೆ ಪರಿಹಾರ ಒದಗಿಸಬೇಕು ಎಂದು ಗ್ರಾಮಾಂತರ ಶಾಸಕಿ ಶ್ರೀಮತಿ ಶಾರದಾ ಪೂರ್ಯನಾಯ್ಕ ತಿಳಿಸಿದರು.
ಶಿವಮೊಗ್ಗ ನಗರದ ತಾಲ್ಲೂಕು ಪಂಚಾಯತಿಯಲ್ಲಿ ಏರ್ಪಡಿಸಿದ್ದ 2025-26 ನೇ ಸಾಲಿನ ಮೊದಲನೇ ಮತ್ತು ಎರಡನೇ ತಾಲ್ಲೂಕು ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕಾರ್ಮಿಕ ಇಲಾಖೆಯು ಜಿಲ್ಲೆಯಲ್ಲಿ ಇಂತಹ ಘಟನೆಯ ಮುಂದೆಂದು ನಡೆಯದಂತೆ ಜಾಗೃತಿ ವಹಿಸಬೇಕು. ಸಾವನ್ನಪ್ಪಿರುವ ವ್ಯಕ್ತಿಗೆ ಕಾರ್ಮಿಕ ಕಾರ್ಡ್ ನಿಂದ ಸಿಗುವ ಸೌಲಭ್ಯವನ್ನು ನೀಡಬೇಕು ಎಂದರು.
ಕಾರ್ಮಿಕ ಇಲಾಖೆಯ ಅಧೀನದಲ್ಲಿ ಬರುವ ವಿವಿಧ ಮಂಡಳಿಗಳ ಯೋಜನೆ ಬಗ್ಗೆ ಕಾರ್ಮಿಕರಿಗೆ ಅರಿವು ಮೂಡಿಸಬೇಕು. ವಾಹನ ಬ್ರಾಂಡಿAಗ್ ಹಾಗೂ ಆಟೋ ಪ್ರಚಾರ ಮೂಲಕ ಜಿಲ್ಲಾದ್ಯಂತ ಈ ಬಗ್ಗೆ ವ್ಯಾಪಕ ಪ್ರಚಾರ ಮಾಡಬೇಕು.
ಮಿಷನ್ ಸುರಕ್ಷ ಅಭಿಯಾನಕ್ಕೆ ಆಯನೂರು, ಕುಂಸಿ, ಚೋರಡಿ ಮತ್ತು ತುಪ್ಪೂರು ಗ್ರಾಮ ಪಂಚಾಯಿತಿಗಳಿಗೆ ಕಾರ್ಮಿಕ ನಿರೀಕ್ಷಕರನ್ನು ನೋಡಲ್ ಆಫೀಸರ್ ಆಗಿ ನೇಮಕ ಮಾಡಲಾಗಿದ್ದು, ಕಾರ್ಮಿಕ ಯೋಜನೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಬೇಕು ಎಂದು ಸೂಚಿಸಿದರು.
ಶಾಲಾ ಶಿಕ್ಷಣ ಇಲಾಖೆ ಕುರಿತು ಮಾತನಾಡಿದ ಅವರು, ಶಾಲಾ ಶಿಕ್ಷಣ ಇಲಾಖೆಯಿಂದ ಅತಿಥಿ ಉಪನ್ಯಾಸಕ ಆಯ್ಕೆ, ಸರ್ಕಾರಿ ಶಾಲೆಯ ಮಕ್ಕಳಿಗೆ ಸರ್ಕಾರದ ನೀಡುವ ಸೌಲಭ್ಯ ಸರಿಯಾದ ನಿಟ್ಟಿನಲ್ಲಿ ದೊರಕಬೇಕು. ಗ್ರಾಮೀಣ ಹಾಗೂ ನಗರದ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಇದರಿಂದ ವಂಚಿತರಾಗಬಾರದು ಎಂದು ಹೇಳಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಪ್ರತಿಕ್ರಿಯಿಸಿ, 124 ಅತಿಥಿ ಶಿಕ್ಷಕರ ಹುದ್ದೆ ಖಾಲಿ ಇದ್ದು, 114 ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಸಂಪೂರ್ಣ ಹುದ್ದೆ ಭರ್ತಿ ಮಾಡುತ್ತೇವೆ. ಸರ್ಕಾರದಿಂದ ಸರ್ಕಾರಿ ಶಾಲೆಯ ಮಕ್ಕಳಿಗೆ ನೀಡುತ್ತಿರುವ ಸೌಲಭ್ಯವನ್ನು ವ್ಯರ್ಥ ಮಾಡದೆ ಸರಿಯಾದ ಕ್ರಮದಲ್ಲಿ ತಲುಪಿಸಲಾಗುತ್ತಿದೆ. 20,146 ಮಕ್ಕಳಿಗೆ ಉಚಿತ ಪುಸ್ತಕ, 22,144 ಮಕ್ಕಳಿಗೆ ಉಚಿತ ಬ್ಯಾಗ್, 22,146 ಮಕ್ಕಳಿಗೆ ಉಚಿತ ಶೂ ಹಾಗೂ ಸಾಕ್ಸ್ ನೀಡಲಾಗಿದ್ದು, 32,028 ಮಕ್ಕಳು ಕ್ಷೀರಭಾಗ್ಯ ಹಾಗೂ 32,028 ಮಕ್ಕಳು ಬಿಸಿ ಊಟ ಯೋಜನೆ ಫಲಾನುಭವಿಗಳಾಗಿದ್ದಾರೆ. ಇದರೊಂದಿಗೆ ವಾರದಲ್ಲಿ 5 ದಿನ ಹಾಲಿನೊಂದಿಗೆ ರಾಗಿ ಮಾಲ್ಟ್ ನೀಡಲಾಗುತ್ತಿದೆ. ಶಾಲಾ ಅಡುಗೆ ಸಿಬ್ಬಂದಿಗೆ ಜೂನ್-2025 ರಿಂದ ರೂ.1,000 ಸಂಭಾವನೆ ಹೆಚ್ಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಕುರಿತು ಮಾತನಾಡಿದ ಅವರು, ಭಾಗ್ಯಲಕ್ಷ್ಮೀ ಬಾಂಡ್ ಫಲಾನುಭವಿಗಳಿಗೆ ಸರಿಯಾಗಿ ತಲುಪಿಸುವ ಕೆಲಸ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜವಾಬ್ದಾರಿಯಾಗಿದ್ದು, ಇದರಿಂದ ಅನೇಕ ಕುಟುಂಬಗಳಿಗೆ ಅನುಕೂಲವಾಗುತ್ತದೆ. ಆ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಡಿಪಿಒ ಪ್ರತಿಕ್ರಿಯಿಸಿ, ಏಪ್ರಿಲ್ 2025 ರಿಂದ ಸೆಪ್ಟಂಬರ್ 2025 ರವರೆಗೆ ಗ್ರಾಮೀಣ ಹಾಗೂ ನಗರ ಸೇರಿದಂತೆ 879 ಜನ ಸುಕನ್ಯಾ ಸಮೃದ್ಧಿಗೆ ಅರ್ಜಿಯನ್ನು ಹಾಕಿದ್ದು, 1.37 ಲಕ್ಷ ಬಾಂಡ್ ಇದಾಗಿದೆ. ಅಂಗನವಾಡಿ ಕಾರ್ಯಕರ್ತರು ಇದರ ಜವಾಬ್ದಾರಿಯನ್ನು ಸಂಪೂರ್ಣವಾಗಿ ಹೊತ್ತುಕೊಂಡಿದ್ದಾರೆ. ಅದರಂತೆ ಅಂಗನವಾಡಿಯಲ್ಲಿ ಈ ಬಾಂಡ್‌ನ ಅರ್ಜಿ ದೊರೆಯಲಿದ್ದು, ಅಲ್ಲೆ ಭರ್ತಿ ಮಾಡಿ ಪಡೆಯಲಾಗುತ್ತದೆ ಎಂದರು.
ಗೃಹಲಕ್ಷ್ಮೀ ಯೋಜನೆ ಸಂಬಂಧಿಸಿದಂತೆ ಜುಲೈ ಮಾಹೆವರೆಗೂ ಜಿಲ್ಲೆಯಲ್ಲಿ 1400 ಖಾತೆಗೆ ಹಣವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಉಳಿದಂತೆ ಐಟಿ ಹಾಗೂ ಜಿಎಸ್‌ಟಿ ಇರುವುದರಿಂದ ಸರ್ಕಾರ ಆದೇಶದಂತೆ ಪಾಲನೆ ಮಾಡುತ್ತಿದ್ದೇವೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್.ಎಂ.ಮಧು, ನಾಮ ನಿರ್ದೇಶಿತ ಸದಸ್ಯರುಗಳು, ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು, ತಾಲ್ಲೂಕು ಪಂಚಾಯತ್ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಹಾಗೂ ತಾಲ್ಲೂಕು ಪಂಚಾಯತ್ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...