Kannada Rajotsava ಶಿವಮೊಗ್ಗ ಜಿಲ್ಲಾ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನ.01 ರಂದು ಬೆಳಿಗ್ಗೆ 9 ಗಂಟೆಗೆ ನಗರದ ನೆಹರು ಕ್ರೀಡಾಂಗಣದಲ್ಲಿ ಕನ್ನಡ ರಾಜೋತ್ಸವ ದಿನಾಚರಣೆ-2025 ರ ಕಾರ್ಯಕ್ರಮವನ್ನು ಏರ್ಪಡಿಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಧ್ವಜಾರೋಹಣ ನೆರವೇರಿಸುವರು.
ಭದ್ರಾವತಿ ಶಾಸಕರು ಹಾಗೂ ಕರ್ನಾಟಕ ರಾಜ್ಯ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸಾಗರ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಗೌರವಾನ್ವಿತ ಉಪಸ್ಥಿತಿ ವಹಿಸಲಿದ್ದು,
ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನ ಸಭೆ ಹಾಗೂ ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಿ ಅಧ್ಯಕ್ಷರುಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಪೊಲೀಸ್ ಅಧೀಕ್ಷಕರು, ಮಹಾನಗರ ಪಾಲಿಕೆಯ ಆಯುಕ್ತರು , ಜಿಲ್ಲೆಯ ಜನಪ್ರತಿನಿಧಿಗಳು, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಕನ್ನಡ ಸಂಘಟನೆಗಳು ಪಾಲ್ಗೊಳ್ಳುವರು.
Kannada Rajotsava ಬೆಳಿಗ್ಗೆ 8 ಗಂಟೆಗೆ ಸೈನ್ಸ್ ಮೈದಾನದಿಂದ ನೆಹರು ಕ್ರೀಡಾಂಗಣದವರೆಗೆ ಶ್ರೀಭುವನೇಶ್ವರಿ ದೇವಿಯ ಮೆರವಣಗೆ ಹೊರಡಲಿದೆ. ಬೆಳಿಗ್ಗೆ 9 ಗಂಟೆಗೆ ನೆಹರು ಕ್ರೀಡಾಂಗಣದಲ್ಲಿ ರಾಷ್ಟ್ರ ಧ್ವಜಾರೋಹಣ, ರಾಷ್ಟ್ರಗೀತೆ, ನಾಡಗೀತೆ, ಕನ್ನಡ ರಾಜ್ಯೋತ್ಸವ ಸಂದೇಶ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಯುವಜನ ಹಾಗೂ ಕ್ರೀಡೆ ಇಲಾಖೆ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಸಂಜೆ 5 ಗಂಟೆಗೆ ನಗರದ ಕುವೆಂಪು ರಂಗಮAದಿರದಲ್ಲಿ ಪೊಲೀಸ್ ಬ್ಯಾಂಡ್ ಹಾಗೂ ಶಿವಮೊಗ್ಗ ನಗರದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
