Delhi World School ಶಿಕ್ಷಣದ ಜೊತೆಯಲ್ಲಿ ಕ್ರೀಡಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಬೇಕು. ಮಕ್ಕಳ ಸರ್ವತೋಮುಖ ಬೆಳವಣಿಗೆಗೆ ಕ್ರೀಡೆ ಸಹಕಾರಿಯಾಗುತ್ತದೆ ಎಂದು ನಿವೃತ್ತ ದೈಹಿಕ ಶಿಕ್ಷಣ ಅಧಿಕಾರಿ ನಿರಂಜನಮೂರ್ತಿ ಹೇಳಿದರು.
ಅವರು ಶಿವಮೊಗ್ಗ ನಗರದ ಡೆಲ್ಲಿ ವರ್ಲ್ಡ್ ಶಾಲೆಯಲ್ಲಿ ಆಯೋಜಿಸಿದ್ದ ಶಾಲೆಯ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಾ, ಮಕ್ಕಳಲ್ಲೂ ಸಹ ಸಾಕಷ್ಟು ಪ್ರತಿಭೆ ಇರುತ್ತದೆ. ಶಿಕ್ಷಕರು ಹಾಗೂ ಪಾಲಕರು ಪ್ರೋತ್ಸಾಹ ನೀಡಿ ಕ್ರೀಡಾ ಆಸಕ್ತಿ ಬೆಳೆಸಬೇಕು ಎಂದರು.
ಶಾಲೆಯ ಪ್ರಾಂಶುಪಾಲರಾದ ದಿವ್ಯಾಶೆಟ್ಟಿ ಮಾತನಾಡುತ್ತಾ, ಮಕ್ಕಳನ್ನು ಪುಸ್ತಕಕ್ಕೆ ಮಾತ್ರ ಸೀಮಿತವಾಗಿರಸದೆ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಯ ಕಡೆ ಪೋಷಕರು ಗಮನಹರಿಸಬೇಕು. ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಸದಾ ಆರೋಗ್ಯದಿಂದ ಇರಲು ಸಾಧ್ಯವಾಗುತ್ತದೆ. ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಲು ಹೆಚ್ಚಿನ ಅವಕಾಶಗಳಿವೆ ಎಂದರು.
Delhi World School ಕಾರ್ಯಕ್ರಮದಲ್ಲಿ ಶಾಲೆಯ ಶಿಕ್ಷಕರು, ಆಡಳಿತ ಮಂಡಳಿ, ಪೋಷಕರು ಉಪಸ್ಥಿತರಿದ್ದರು.
