Monday, September 21, 2026
Monday, September 21, 2026

ಕೃಷಿ ಪಂಪ್ ಸೆಟ್ ವಿದ್ಯುತ್ ಸಂಪರ್ಕ. ಶಿವಮೊಗ್ಗ ತಾಲ್ಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗದ ಪ್ರಕಟಣೆ

Date:

ಶಿವಮೊಗ್ಗ ತಾಲೂಕು ಗ್ರಾಮೀಣ ಮೆಸ್ಕಾಂ ಉಪವಿಭಾಗ ವ್ಯಾಪ್ತಿಗೆ ಒಳಪಡುವ ಅಬ್ಬಲಗೆರೆ, ಪಿಳ್ಳಂಗಿರಿ, ಹೊಳಲೂರು, ಗಾಜನೂರು ಮತ್ತು ಸಂತೇಕಡೂರು (ಘಟಕ-2) ಶಾಖಾ ವ್ಯಾಪ್ತಿಗೆ ಒಳಪಡುವ ಪ.ಜಾ/ಪ.ಪಂ.ಕ್ಕೆ ಸೇರುವ ರೈತರು ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಕೃಷಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸೌಲಭ್ಯ ಪಡೆಯಲು ಹಾಗೂ ಈ ಹಿಂದೆ ಗಂಗಾಕಲ್ಯಾಣ ಮತ್ತು ಎಸ್‌ಸಿಪಿ/ಟಿಎಸ್‌ಪಿ ಯೋಜನೆಯಡಿಯಲ್ಲಿ ವಿದ್ಯುತ್ ಸಂಪರ್ಕ ಪಡೆಯದ ರೈತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಗ್ರಾಮೀಣ ಉಪವಿಭಾಗ ಮೆಸ್ಕಾಂ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಆರ್‌ಟಿಸಿ, ಆಧಾರ್ ಕಾಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಫೋಟೋ, ಬಿಪಿಎಲ್ ರೇಷನ್ ಕಾರ್ಡ್, ಬ್ಯಾಂಕ್ ಪಾಸ್‌ಬುಕ್ ಜೇರಾಕ್ಸ್, ಬೋರವೆಲ್ ಜೊತೆ ರೈತರ ಜಿಪಿಎಸ್ ಪೋಟೋ ಮತ್ತು ಫೋನ್ ನಂ.ಗಳನ್ನು ಲಗತ್ತಿಸಿ ನ.15 ರೊಳಗಾಗಿ ಸಲ್ಲಿಸುವಂತೆ ಪಾಲನೆ ಮತ್ತು ನಿರ್ವಹಣೆ ಗ್ರಾಮೀಣ ಉಪವಿಭಾಗ ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...