Monday, August 3, 2026
Monday, August 3, 2026

ಶಿಕಾರಿಪುರ ಅಬಕಾರಿ ಕಛೇರಿ ವಾಹನ ಚಾಲಕ ಅಮಾನತ್ತು, ಸಾರ್ವಜನಿಕ ನೋಟೀಸ್ ಪ್ರಕಟಣೆ

Date:

ಶಿಕಾರಿಪುರ ವಲಯದ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಕಚೇರಿಯ ವಾಹನ ಚಾಲಕರಾದ ಸೋಮೇಶ್ವರ ಕೆ.ಎ ಅವರು ದಿ:26/8/2024 ರಂದು ಅನಧಿಕೃತವಾಗಿ ಗೈರು ಹಾಜರಾಗಿದ್ದು, ಸೇವೆಯಿಂದ ಅವಮಾನತ್ತು ಮಾಡಿ ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್ ಆದೇಶ ಹೊರಡಿಸಿದ್ದಾರೆ.
ಸೋಮೇಶ್ವರ್ ಕೆ.ಎ ಅವರಿಗೆ ಗೈರು ಹಾಜರಾದ ಕಾರಣ ಕೇಳಿ ಕಚೇರಿಯಿಂದ ಅಂತಿಮ ನೋಟಿಸ್ ನೀಡಲಾಗಿತ್ತು ಹಾಗೂ ಅವರ ವಾಸ ಸ್ಥಳವಾದ ಶಿವಮೊಗ್ಗ ನಗರದ ವಿನೋಬನಗರದ ವಿಳಾಸಕ್ಕೆ ತೆರಳಿ ಮನೆಯ ಮಾಲೀಕರಿಗೆ ಹಾಗೂ ನೆರೆಹೊರೆಯವರನ್ನು ವಿಚಾರಿಸಿದಾಗ ಆ ಸ್ಥಳದಲ್ಲಿ ವಾಸವಿರುವುದಿಲ್ಲ ಎಂದು ತಿಳಿದು ಬಂದಿದ್ದು, ಕೂಡಲೇ ಸ್ಥಳ ಮಜರ್ ಮಾಡಿ 15-7-2025 ರಂದು ಶಿಕಾರಿಪುರ ವಲಯದ ಅಬಕಾರಿ ನಿರೀಕ್ಷಕರಿಗೆ ವರದಿಯನ್ನು ಸಲ್ಲಿಸಲಾಗಿದೆ.
ವರದಿ ಆಧಾರದಿಂದ ಸೋಮೇಶ್ವರ ಅವರನ್ನು ಸೇವೆಯಿಂದ ಅಮಾನತ್ತು ಮಾಡಲಾಗಿದ್ದು, ಈ ಪ್ರಕಟಣೆ ಹೊರಡಿಸಿದ 15 ದಿನದೊಳಗೆ ಕಚೇರಿ ಹಾಜರಾಗಿ, ಗೈರು ಹಾಜರಾಗಿದ್ದಕ್ಕೆ ಸೂಕ್ತ ವಿವರಣೆ ಸಲ್ಲಿಸಬೇಕು. ತಪ್ಪಿದಲ್ಲಿ ಕರ್ನಾಟಕ ನಾಗರೀಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಾವಳಿಗಳು-1957 ರ ನಿಯಮಗಳಡಿಯಲ್ಲಿ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುತ್ತದೆ ಎಂದು ಡೆಪ್ಯೂಟಿ ಕಮೀಷನರ್ ಆಫ್ ಎಕ್ಸೈಜ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...