Karnataka Rajyotsava ರಾಜ್ಯಾದ್ಯಂತ ಕನ್ನಡ ರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಕರ್ನಾಟಕ ಏಕೀಕರಣಕ್ಕೆ ಅನೇಕ ಮಹನೀಯರು ಶ್ರಮಿಸಿದ್ದಾರೆ ಎಂದು ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಮುಖ್ಯ ಆಯುಕ್ತೆ ಶಕುಂತಲಾ ಚಂದ್ರಶೇಖರ್ ಹೇಳಿದರು.
ನಗರದ ಬಾಲಕಿಯರ ಪದವಿಪೂರ್ವ ಕಾಲೇಜು ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿ, ಕನ್ನಡ ಭಾಷೆಗಾಗಿ ನಾವೆಲ್ಲರೂ ಪಣತೊಡಬೇಕಾಗಿದೆ. ಲೇಖಕರು, ಕವಿಗಳು ಸೇರಿದಂತೆ ಹಲವು ಮಹನೀಯರು ಕರ್ನಾಟಕ ಏಕೀಕರಣಕ್ಕೆ ಕಾರಣರಾದರು ಎಂದು ತಿಳಿಸಿದರು.
Karnataka Rajyotsava ಕನ್ನಡಿಗರ ಭಾಷೆ ಚೆಂದ, ಕನ್ನಡಿಗರ ಮನವು ಅಂದ, ಕನ್ನಡಿಗರ ನಾಡು ಚಂದವೋ ಚಂದ. ಕರ್ನಾಟಕ ನಮ್ಮ ಹೆಮ್ಮೆಯ ರಾಜ್ಯ. ಕನ್ನಡ ನಮ್ಮ ಮಾತೃಭಾಷೆ. ಕನ್ನಡಾಂಬೆ ಮಕ್ಕಳಾದ ನಾವು ಕನ್ನಡ ರಾಜ್ಯೋತ್ಸವ ಆಚರಿಸುವ ಮೂಲಕ ಕನ್ನಡಾಂಬೆಗೆ ಗೌರವ ಸಲ್ಲಿಸುವುದು ಸೇರಿ ಕನ್ನಡ ಭಾಷಾಭಿಮಾನ ಮೆರೆಯಬೇಕು ಎಂದರು.
ಕಾಲೇಜಿನಲ್ಲಿ ಕನ್ನಡ ಬಾವುಟದ ಧ್ವಜಾರೋಹಣ ಜೊತೆಗೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿ ಮಂಜುಳಾ ಪ್ರಮಾಣ ವಚನ ಬೋಧಿಸಿದರು.
ಪ್ರಾಚಾರ್ಯ ಟಿ.ಎಸ್.ಮಹೇಶ್ವರಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಜಿಲ್ಲಾ ತರಬೇತಿ ಆಯುಕ್ತ ಎಚ್.ಶಿವಶಂಕರಪ್ಪ, ಸಹ ಜಿಲ್ಲಾ ಆಯುಕ್ತ ಮಲ್ಲಿಕಾರ್ಜುನ ಕಾನೂರು, ಗೈಡ್ ಆಯುಕ್ತೆ ಲಕ್ಷ್ಮೀ, ರೋವರ್ ಆಯುಕ್ತ ಕೆ ರವಿ., ಸ್ಥಳೀಯ ಸಂಸ್ಥೆ ತಾಲೂಕು ಕಾರ್ಯದರ್ಶಿ ರಾಜೇಶ್ ಅವಲಕ್ಕಿ, ರೇಂಜರ್ ಲೀಡರ್ ಗೀತಾ, ಭಾರತಿ, ಸುಧಾ ಹಾಗೂ ಕಾಲೇಜಿನ ಎಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು
Karnataka Rajyotsava ಕರ್ನಾಟಕ ಏಕೀಕರಣಕ್ಕೆ ಶ್ರಮಿಸಿದವರನ್ನ ಸ್ಮರಿಸೋಣ-ಶಕುಂತಲಾ ಚಂದ್ರಶೇಖರ್.
Date:
