Mango Leaf Holidays ಶಿವಮೊಗ್ಗ ನಗರದ ಹೊರಭಾಗದಲ್ಲಿರುವ ನಿಧಿಗೆ ಗ್ರಾಮದ ಕನ್ನಡ ಮತ್ತು ಆಂಗ್ಲ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆ ವತಿಯಿಂದ 105 ವಿದ್ಯಾರ್ಥಿಗಳಿಗೆ ಉಚಿತ ಟ್ರ್ಯಾಕ್ ಶೂಟ್‌ಗಳನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳಲ್ಲಿ ಕ್ರೀಡಾ ಮನೋಭಾವವನ್ನು ಬೆಳೆಸುವ ಹಾಗೂ ದೈಹಿಕ ಚಟುವಟಿಕೆಗಳ ಬಗ್ಗೆ ಸ್ಪೂರ್ತಿ ಮೂಡಿಸುವ ಉದ್ದೇಶದಿಂದ ಈ ಸಾಮಾಜಿಕ ಸೇವಾ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮದಲ್ಲಿ ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆಯ ಮುಖ್ಯಸ್ಥ ಮಂಜುನಾಥ್, ಶಾಲೆಯ ಮುಖ್ಯೋಪಾಧ್ಯಾಯರಾದ ಲಕ್ಷ್ಮಣಪ್ಪ, ಎಸ್‌ಡಿಎಂಸಿ ಅಧ್ಯಕ್ಷ ಮಂಜುನಾಥ್ ಕೆ., ವೆಂಕಟಾಚಲ ಗೌಡ್ರು, ನಾಗರಾಜ್ ಎಂ.ಜಿ., ಮಂಜುನಾಥ್ ಗೌಡ್ರು, ಆನಂದ್ ಸೇರಿದಂತೆ ಹಲವಾರು ಗ್ರಾಮಸ್ಥರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆಯ ಮುಖ್ಯಸ್ಥ ಮಂಜುನಾಥ್ ಅವರು ಹೇಳಿದರು —
Mango Leaf Holidays “ನಮ್ಮ ಸಂಸ್ಥೆ ಸಮಾಜಮುಖಿ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳ ಬೆಳವಣಿಗೆಗೆ ಸಹಕಾರ ನೀಡುವುದೇ ಧ್ಯೇಯ. ಸರ್ಕಾರಿ ಹಾಗೂ ಖಾಸಗಿ ಶಾಲೆಯ ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಮೆರೆದಾಡಬೇಕು ಎಂಬ ಆಶಯದಿಂದ ಈ ಟ್ರ್ಯಾಕ್ ಶೂಟ್ ವಿತರಣೆ ಕಾರ್ಯ ಕೈಗೊಂಡಿದ್ದೇವೆ,” ಎಂದು ಹೇಳಿದರು…….
ಕಾರ್ಯಕ್ರಮದ ಅಂತ್ಯದಲ್ಲಿ ಶಾಲಾ ಆಡಳಿತ ಮಂಡಳಿ, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮ್ಯಾಂಗೋ ಲೀಫ್ ಹಾಲಿಡೇಸ್ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.
