Sunday, August 2, 2026
Sunday, August 2, 2026

Adichunchanagiri Mutt ಸೋಮಾರಿತನ ಇದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ :ನಿರ್ಮಲಾನಂದನಾಥ ಮಹಾಸ್ವಾಮೀಜಿ

Date:

Adichunchanagiri Mutt ಸೋಮಾರಿತನ ಇದ್ದರೆ ಏನನ್ನೂ ಮಾಡಲು ಸಾಧ್ಯವಿಲ್ಲ. ನಾವು ಎಷ್ಟೇ ಓದಿರಲಿ, ಏನೇ ಸಾಧನೆ ಮಾಡಿರಲಿ, ನಮ್ಮಲ್ಲಿ ಸೋಮಾರಿತನ ಜೊತೆಗೂಡಿದಾಗ ಏನನ್ನೂ ಮಾಡಲು ಸಾಧ್ಯವಿಲ್ಲ ಎಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಜಗದ್ಗುರು ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಹೇಳಿದರು.

ಶಿವಮೊಗ್ಗ ಶ್ರೀ ಆದಿಚುಂಚನಗಿರಿ ಶಾಖಾಮಠದ ಸಮುದಾಯಭವನದಲ್ಲಿ ಆಯೋಜಿಸಿದ್ದ 35ವಾರ್ಷಿಕೋತ್ಸವದ ಎರಡನೇ ದಿನದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತಾ, ಸಾಧನೆ ಸಿಗಬೇಕೆಂದರೆ ಸೋಮಾರಿತನ ಕೈ ಬಿಟ್ಟಂತೆ, ಬದ್ಧತೆ ಹಾಗೂ ಛಲವನ್ನು ಬೆಳೆಸಿಕೊಳ್ಳಬೇಕು. ಅದಕ್ಕೆ ನಮ್ಮ ನಡುವೆ ಸಾಕಷ್ಟು ನಿದರ್ಶನಗಳು ಕಾಣಿಸುತ್ತವೆ ಎಂದು ಹೇಳಿದರು.
  ಆದಿಚುಂಚನಗಿರಿ ಮಹಾಸಂಸ್ಥಾನ ಆರಂಭಗೊಂಡು ಐವತ್ತು ವರ್ಷ ಆಗಿದ್ದು, ಕೇವಲ ಮಠದ, ಸಮಾಜದ ಕಾರ್ಯಕ್ಕೆ ಸೀಮಿತವಾಗದೆ, ನಮ್ಮ ಮಕ್ಕಳಿಗೆ ಅತ್ಯುತ್ತಮವಾದ ಶಿಕ್ಷಣ ನೀಡಬೇಕೆಂಬ ಉದ್ದೇಶದಿಂದ ಆರಂಭಗೊಂಡ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಿಜವಾಗಿಯೂ ಈಗ ರಾಜ್ಯಾದ್ಯಂತ ಲಕ್ಷಾಂತರ ಸಾಧಕರನ್ನು ಹೊರತಂದಿದೆ. ಲಕ್ಷಾಂತರ ಮಕ್ಕಳು ಇಲ್ಲಿ ಕಲಿಯುತ್ತಿದ್ದಾರೆ ಎಂದರು.
Adichunchanagiri Mutt ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮೊಟ್ಟ ಮೊದಲ ಬಾರಿಗೆ ಖಾಸಗಿ ರೂಪದಲ್ಲಿ ಅಗ್ರಿಕಲ್ಚರ್ ಸೈನ್ಸ್ ಅಂದರೆ ಕೃಷಿ ವಿಜ್ಞಾನ ಕಾಲೇಜನ್ನು ಆರಂಭಿಸಿದ್ದು, ಅದರ ಮೂಲಕ ನಿತ್ಯ ನಿರಂತರ ಕೃಷಿ ಸಂಶೋಧನೆಗಳು ಹೆಚ್ಚುವ ನಿಟ್ಟಿನಲ್ಲಿ ಕಾರ್ಯ ಮಾಡುತ್ತಿದೆ ಎಂದರು.
ಹಿಂದೆ 45 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಬಡ ಭಾರತದ ಬಗ್ಗೆ ಅತ್ಯಂತ ವಿವರಣಾತ್ಮಕವಾಗಿ ಹೊಗಳಿದ್ದರು. ಅದು ಈಗ ಸಾಧನೆಯಾಗಿದೆ. ಬಡಭಾರತವಾಗಿದ್ದ ನಮ್ಮ ದೇಶ ಇಂದು ವಿಶ್ವದಲ್ಲೇ ನಾಲ್ಕನೇ ಪ್ರಮುಖ ರಾಷ್ಟ್ರವಾಗಿರುವುದು ನಮ್ಮೆಲ್ಲರ ಹಿರಿಮೆಯ ಸಂಗತಿ. ತಾಯಿ ಹಾಗೂ ಹೆಣ್ಣು ಮಕ್ಕಳಿಗೆ ಗೌರವ ಕೊಡುವ ಭಾರತ ಇಡೀ ವಿಶ್ವದಲ್ಲೇ ಎಲ್ಲ ದೇಶಗಳಿಗೂ ಮಾದರಿಯಾಗಿದೆ ಎಂದರು. ಶ್ರೀಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಜಗದ್ಗುರುಗಳಾದ ಶ್ರೀ ಡಾ.ನಿರ್ಮಲಾನಂದನಾಥ ಮಹಾಸ್ವಾಮೀಜಿ ಮತ್ತು ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ಮತ್ತು ಇನ್ನು ಮುಂತಾದವರು ತೀರ್ಥಹಳ್ಳಿ ತಾಲ್ಲೂಕಿನ, ಆರಗ ಗ್ರಾಮದಲ್ಲಿರುವ ಶ್ರೀ ಪುರಂದರ ದಾಸರ ಮೂಲ ಜನ್ಮ ಸ್ಥಳಕ್ಕೆ ಮಂಗಳವಾರ ಭೇಟಿ ನೀಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...