ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಬೆಂಗಳೂರಿನ ವಿಕಾಸಸೌಧದಲ್ಲಿ ಲೋಕೋಪಯೋಗಿ ಇಲಾಖೆಯ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.
ಇಲಾಖೆಯ ಕಾಮಗಾರಿಗಳ ಗುಣಮಟ್ಟ, ಕಾರ್ಯಗತಿ ಹಾಗೂ ಜನಹಿತದ ಪರಿಣಾಮಗಳನ್ನು ವಿವರವಾಗಿ ಪರಿಶೀಲಿಸಿ, ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚೆ ನಡೆಸಿದರು.
ಕೆಲವು ಕಾಮಗಾರಿಗಳ ನಿಧಾನಗತಿಗೆ ಕಾರಣವಾದ ಅಡೆತಡೆಗಳ ಕುರಿತು ವಿಮರ್ಶೆ ನಡೆಸಿ, ಅವುಗಳ ಶೀಘ್ರ ಪರಿಹಾರಕ್ಕಾಗಿ ಅಗತ್ಯ ಸಲಹೆಗಳನ್ನು ನೀಡಿದರು. ಪ್ರತಿ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು
ಈ ಸಂದರ್ಭದಲ್ಲಿ ಎಲ್ಲಾ ಜಿಲ್ಲಾ ಇಲಾಖಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಾಯಿತು. ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
