ಕಾರ್ತಿಕ ದೀಪ ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಮನಸ್ಸಿಗೆ ಶಾಂತಿ ನೆಮ್ಮದಿ ದೊರಕುವುದರ ಜೊತೆಗೆ ನಮ್ಮ ಕಷ್ಟಗಳು ಪರಿಹಾರವಾಗುತ್ತದೆ ಎಂದು ನಾಗಸುಬ್ರಹ್ಮಣ್ಯ ದೇವಸ್ಥಾನದ ಪ್ರಧಾನ ಅರ್ಚಕರಾದ ಸಂದೇಶ್ ಉಪಾಧ್ಯ ತಿಳಿಸಿದರು ಅವರು ಕಾರ್ತಿಕ ದೀಪ ವೈಭವದ ಅಂಗವಾಗಿ ಸ್ವಾಮಿ ವಿವೇಕಾನಂದ ಬಡಾವಣೆಯ ನಾಗ ಸುಬ್ರಮಣ್ಯ ದೇವಸ್ಥಾನ ದಲ್ಲಿ ಹಮ್ಮಿಕೊಳ್ಳಲಾದ ಕಾರ್ತಿಕ ದೀಪ ವೈಭವ ಕಾರ್ಯಕ್ರಮದಲ್ಲಿ ಮಾತನಾಡಿದರು. ಈ ದೀಪೋತ್ಸವದಲ್ಲಿ. ಋಗ್ವೇದ ಯಜುರ್ವೇದ ಸಾಮವೇದ ಅಥರ್ವಣ ವೇದ. ಶಾಸ್ತ್ರ ಸಂಗೀತ ಅಷ್ಟಕ ಭಜನೆ. ಹೋಮ ಹವನಗಳು ಪ್ರಸಾದ ವಿತರಣೆ ಕಾರ್ಯಕ್ರಮ ನಾಲ್ಕು ದಿನಗಳ ಕಾಲ ನಡೆಯುತ್ತದೆ ಈ- ಕಾರ್ಯಕ್ರಮದಲ್ಲಿ ಭಕ್ತರು ಹಾಗೆ ಪ್ರತಿದಿನ ಸಂಜೆ 7 ಗಂಟೆಯಿಂದ 8. 15 ರವರೆಗೆ ಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ ಎಂದು ನುಡಿದರು. ಈ ದಿನದ ಕಾರ್ಯಕ್ರಮದಲ್ಲಿ ಸಾಕಷ್ಟು ಜನ ಭಕ್ತರು ಪಾಲ್ಗೊಂಡು ವಿಶೇಷ ಪೂಜೆ ಸಲ್ಲಿಸಿ ಸ್ವಾಮಿಯ ಕೃಪೆಗೆ ಪಾತ್ರರಾದರು . ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜೀ ವಿಜಯಕುಮಾರ್. ಶ್ರೀಮತಿ ಬಿಂದು ವಿಜಯ ಕುಮಾರ್. ಹಾಗೂ ನಾಗಸಬ್ರಹ್ಮಣ್ಯ ದೇವಸ್ಥಾನದ ಸಮಿತಿಯ ಪದಾಧಿಕಾರಿಗಳು ಭಕ್ತ ಮಹಾಶಯರು ಉಪಸ್ಥಿತರಿದ್ದರು
ಕಾರ್ತೀಕ ದೀಪೋತ್ಸವದಲ್ಲಿ ಭಾಗಿಯಾದರೆ ಮನಸ್ಸಿಗೆ ಶಾಂತಿ ಮತ್ತು ನೆಮ್ಮದಿ ಹಾಗೂ ಕಷ್ಟಗಳ ಪರಿಹಾರ- ಸಂದೇಶ್ ಉಪಾಧ್ಯ
Date:
