Saturday, May 16, 2026
Saturday, May 16, 2026

Janjatiya Gaurav Divas ನವೆಂಬರ್ 15. ಜನ ಜಾತೀಯ ಗೌರವ ದಿನಾಚರಣೆ. ಜಿಲ್ಲಾಡಳಿತದಿಂದ ಸಿದ್ಧತೆ.

Date:

Janjatiya Gaurav Divas ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಶಿವಮೊಗ್ಗ ಇವರುಗಳ ಸಂಯುಕ್ತಾಶ್ರಯದಲ್ಲಿ ನ.15 ರ ಬೆಳಿಗ್ಗೆ 11 ಗಂಟೆಗೆ ನಗರದ ಕಂಟ್ರೀ ಕ್ಲಬ್ ರಸ್ತೆಯಲ್ಲಿರುವ ಶ್ರೀ ಮಹರ್ಷಿ ವಾಲ್ಮೀಕಿ ಭವನದಲ್ಲಿ ಭಗವಾನ್ ಶ್ರೀ ಬಿರ್ಸಾ ಮುಂಡಾ ಅವರ 150 ನೇ ಜಯಂತಿ ಹಾಗೂ ಜನ ಜಾತೀಯ ಗೌರವ ದಿವಸ ಆಚರಣೆ 2025 ರ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.
ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಕಾರ್ಯಕ್ರಮದ ಘನ ಉಪಸ್ಥಿತಿ ಇರಲಿದ್ದು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಉದ್ಘಾಟನೆಯನ್ನು ನೆರವೇರಿಸುವರು.
ಭದ್ರಾವತಿ ಶಾಸಕ ಹಾಗೂ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷ ಬಿ.ಕೆ.ಸಂಗಮೇಶ್ವರ, ಸಾಗರ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ವಿಶೇಷ ಆಹ್ವಾನಿತರಾಗಿ ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸುವರು.
Janjatiya Gaurav Divas ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭೆ ಮತ್ತು ವಿಧಾನ ಪರಿಷತ್ ಶಾಸಕರುಗಳು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರುಗಳು, ಜಿಲ್ಲಾಧಿಕಾರಿ, ಜಿ.ಪಂ ಸಿಇಓ, ಪೊಲೀಸ್ ಅಧೀಕ್ಷಕರು, ಮಹಾನಗರಪಾಲಿಕೆ ಆಯುಕ್ತರು, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ, ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಕುವೆಂಪು ವಿಶ್ವವಿದ್ಯಾಲಯದ ರಾಷ್ಟಿçÃಯ ಸೇವಾ ಯೋಜನೆ ಸಂಯೋಜನಾಧಿಕಾರಿಯಾದ ಡಾ.ಶುಭಾ ಮರವಂತೆ ವಿಶೇಷ ಉಪನ್ಯಾಸ ನೀಡುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...