Samanvaya Trust ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ “ಕೆ.ಎ.ದಯಾನಂದ ಐಎಎಸ್” ಹೆಸರಿನಲ್ಲಿ ಉಚಿತ ವಾಚನಾಲಯ ನಡೆಸುತ್ತಿದ್ದು, ಇದೀಗ ಹೊಸ ಆಕಾಂಕ್ಷಿಗಳಿಗೆ ಮತ್ತೊಂದು ಅವಕಾಶ ನೀಡಲಾಗುತ್ತಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲ ಒದಗಿಸುವ ದೃಷ್ಟಿಯಿಂದ ಸಮನ್ವಯ ಟ್ರಸ್ಟ್ ವತಿಯಿಂದ ವಿಶೇಷ ಪ್ರಯತ್ನ ನಡೆಸುತ್ತಿದ್ದು, ಉಚಿತ ವಾಚನಾಲಯ ಸೌಲಭ್ಯ ಪಡೆಯಲು ವಿದ್ಯಾರ್ಥಿಗಳನ್ನು ಪ್ರವೇಶ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತಿದೆ. ಪದವಿ ಪೂರೈಸಿರುವ ಹಾಗೂ ಪದವಿ ಪೂರೈಸುತ್ತಿರುವ ವಿದ್ಯಾರ್ಥಿಗಳಿಗೆ 2025ರ ನವೆಂಬರ್ 30 ರಂದು ಪ್ರವೇಶ ಪರೀಕ್ಷೆ ನಡೆಯಲಿದೆ.
Samanvaya Trust ಕ್ಯೂಆರ್ ಕೋಡ್ ಮೂಲಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9945387650 ಸಂಪರ್ಕಿಸಬಹುದಾಗಿದೆ. ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಪೋದಾರ್ ಶಾಲೆ ಹತ್ತಿರ ಸಮನ್ವಯ ಟ್ರಸ್ಟ್ ಕಚೇರಿ ಸಂಪರ್ಕಿಸಬಹುದಾಗಿದೆ.
