ರಾಷ್ಟ್ರೀಯ ಐಕ್ಯತಾ ಸಪ್ತಾಹದ ಅಂಗವಾಗಿ ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳಾದ ಗುರುದತ್ತ ಹೆಗಡೆಯವರು ಕಚೇರಿಯ ಅಧಿಕಾರಿ, ಸಿಬ್ಬಂದಿಗಳಿಗೆ ರಾಷ್ಟ್ರೀಯ ಐಕ್ಯತಾ ಪ್ರಮಾಣ ವಚನವನ್ನು ಬೋಧಿಸಿದರು.
ರಾಷ್ಟ್ರೀಯ ಸ್ವಾತಂತ್ರ್ಯ ಹಾಗೂ ಐಕ್ಯತೆಯನ್ನು ಸಂರಕ್ಷಿಸಲು ಮತ್ತು ಬಲಪಡಿಸಲು ಅರ್ಪಣಾ ಮನೋಭಾವದಿಂದ ಕೆಲಸ ಮಾಡುತ್ತೇನೆ. ಅಲ್ಲದೇ ನಾನು ಎಂದಿಗೂ ಹಿಂಸಾಚಾರದಲ್ಲಿ ತೊಡಗುವುದಿಲ್ಲವೆಂದು ಮತ್ತು ಮತ, ಭಾಷೆ, ಪ್ರದೇಶ ಅಥವಾ ಇತರ ರಾಜಕೀಯ ಅಥವಾ ಆರ್ಥಿಕ ಕುಂದು ಕೊರತೆಗಳ ಬಗೆಗಿನ ಭಿನ್ನಾಭಿಪ್ರಾಯಗಳನ್ನು ಮತ್ತು ವಿವಾದಗಳನ್ನು ಶಾಂತಿಯುತವಾಗಿ ಹಾಗೂ ಸಂವಿಧಾನಾತ್ಮಕ ರೀತಿಯಲ್ಲಿ ಬಗೆಹರಿಸಿಕೊಳ್ಳುವ ದಿಸೆಯಲ್ಲಿ ನನ್ನ ಪ್ರಯತ್ನವನ್ನು ಮುಂದುವರೆಸುತ್ತೇನೆ, ಪ್ರಮಾಣ ಮಾಡುತ್ತೇನೆ’ ಎಂಬ ಪ್ರಮಾಣ ವಚವನ್ನು ಅವರು ಬೋಧಿಸಿದರು.
ಈ ವೇಳೆ ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕರಾದ ಪ್ರದೀಪ್, ಜಿಲ್ಲಾಡಳಿತ ಕಚೇರಿ ಇತರೆ ಅಧಿಕಾರಿ, ಸಿಬ್ಬಂದಿಗಳು ಹಾಜರಿದ್ದರು
ರಾಷ್ಟ್ರೀಯ ಐಕ್ಯತೆ ಸರಂಕ್ಷಿಸಲು ಜಿಲ್ಲಾಡಳಿತ ಕಛೇರಿಯಲ್ಲಿ ಪ್ರತಿಜ್ಞಾವಿಧಿ ಸ್ವೀಕಾರ
Date:
