ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡೂರು ಮತ್ತು ಮುಂಬರು ಗ್ರಾಮ ಪಂಚಾಯಿತಿಯ ಗೌಡಕೊಪ್ಪ ದೊಡ್ಲಿ ಮನೆ ಗ್ರಾಮದಲ್ಲಿ ಗ್ರಾಮಸ್ಥರು ತಾವೇ ರಸ್ತೆ ನಿರ್ಮಾಣಕ್ಕೆ ಮುಂದಾಗಿದ್ದಾರೆ.
ಗ್ರಾಮದಲ್ಲಿ 50ಕ್ಕೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದರೂ, ಸರ್ಕಾರದ ಮೂಲಸೌಕರ್ಯಗಳು ಸಿಗುತ್ತಿಲ್ಲ. ರಾಜಕೀಯ ನಾಯಕರಿಂದ ಬೇಸತ್ತು, ಗ್ರಾಮಸ್ಥರೇ ಮುಂಬರುವ ಚುನಾವಣೆಗಳಲ್ಲಿ ಮತದಾನ ಬಹಿಷ್ಕರಿಸಿದ್ದಾರೆ.
ಜಿಲ್ಲಾಧಿಕಾರಿಗಳು ಈ ಪ್ರದೇಶಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಮೂಲಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿದ್ದಾರೆ. ತಪ್ಪಿದ್ದಲ್ಲಿ ಮುಂಬರುವ ದಿನಗಳಲ್ಲಿ ತಶಿಲ್ದಾರ್ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದಾರೆ.
