S.N. Channabasappa ಶಾಸಕರ ಕಚೇರಿ ‘ಕರ್ತವ್ಯ ಭವನ’ದಲ್ಲಿ ನಡೆದ ಸಭೆಯಲ್ಲಿ ನಾಗರೀಕರ ಹಿತರಕ್ಷಣಾ ವೇದಿಕೆ, ಮೆಸ್ಕಾಂ ಹಾಗೂ ಮಹಾನಗರ ಪಾಲಿಕೆಯ ಹಿರಿಯ ಅಧಿಕಾರಿಗಳೊಂದಿಗೆ ವಿವಿಧ ಸಾರ್ವಜನಿಕ ಸಮಸ್ಯೆಗಳ ಕುರಿತು ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ವಿಸ್ತೃತವಾಗಿ ಚರ್ಚಿಸಿದರು.
ಸಭೆಯಲ್ಲಿ ವಿಶೇಷವಾಗಿ ನಗರದ ವಿವಿಧ ಕಡೆಗಳಲ್ಲಿ ನಿಷ್ಕ್ರಿಯಗೊಂಡಿರುವ ವಿದ್ಯುತ್ ಕಂಬಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸುವುದು, ಹಾಗೂ ಕುಡಿಯುವ ನೀರಿನ ಸರಬರಾಜು ಸಂಬಂಧಿತ ಸಮಸ್ಯೆಗಳನ್ನು ತುರ್ತಾಗಿ ಪರಿಹರಿಸುವ ಕ್ರಮಗಳ ಕುರಿತು ವಿವರವಾದ ಸಂವಾದ ನಡೆಸಿದರು.
S.N. Channabasappa ನಾಗರೀಕರ ದಿನನಿತ್ಯದ ಜೀವನಕ್ಕೆ ನೇರವಾಗಿ ಸಂಬಂಧಿಸಿದ ಈ ವಿಷಯಗಳನ್ನು ಶೀಘ್ರದಲ್ಲಿ ಬಗೆಹರಿಸಿ, ಉತ್ತಮ ಸಾರ್ವಜನಿಕ ವ್ಯವಸ್ಥೆಯನ್ನು ಒದಗಿಸುವತ್ತ ಸಂಬಂಧಿತ ಇಲಾಖೆಗೆ ಸೂಕ್ತ ಆದೇಶಗಳನ್ನು ನೀಡಿದರು.
