Ramakrishna Vidyaniketan School ಇಲ್ಲಿನ ಗೋಪಾಳದ ಶ್ರೀ ರಾಮಕೃಷ್ಣ ವಿದ್ಯಾನಿಕೇತನ ಶಾಲೆಯ ಮೂವರು ವಿದ್ಯಾರ್ಥಿನಿಯರು ನೆಹರು ಕ್ರೀಡಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡೆಯಲ್ಲಿ ಭಾಗವಹಿಸಿದ್ದು, ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
10ನೇ ತರಗತಿ ವಿದ್ಯಾರ್ಥಿಯಾದ ವೇದಾ ಕೆ ಇವರು ಹ್ಯಾಮರ್ ಥ್ರೋನಲ್ಲಿ ಪ್ರಥಮ ಸ್ಥಾನ,
9 ನೇ ತರಗತಿ ವಿದ್ಯಾರ್ಥಿಗಳಾದ ಧನಲಕ್ಷ್ಮಿ ಎಸ್ ಹ್ಯಾಮರ್ ಥ್ರೋನಲ್ಲಿ ದ್ವಿತೀಯ, ರಕ್ಷಾ ವೈ ಡಿ ತಟ್ಟೆ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
Ramakrishna Vidyaniketan School ಈ ಮೂರು ವಿದ್ಯಾರ್ಥಿಗಳು 2025 ರ ಡಿಸೆಂಬರ್ 5 ರಿಂದ ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ರಾಜ್ಯ ಮಟ್ಟದ ಸ್ಪರ್ದೆಗೆ ಆಯ್ಕೆಯಾಗಿರುತ್ತಾರೆ.
ಅಂತೆಯೇ, ಪ್ರಣಿತಾ ಪಿ ಥ್ರೋಬಾಲ್‌ನಲ್ಲಿ ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಈ ಎಲ್ಲಾ ವಿದ್ಯಾರ್ಥಿಗಳಿಗೆ ಆಡಳಿತ ಮಂಡಳಿ, ಶಿಕ್ಷಕ ವೃಂದದ ಪರವಾಗಿ ಕಾರ್ಯದರ್ಶಿ ಶೋಭಾ ವೆಂಕಟರಮಣ ಅಭಿನಂದಿಸಿದ್ದಾರೆ.
Ramakrishna Vidyaniketan School ಶ್ರೀರಾಮಕೃಷ್ಣ ಶಾಲೆಯ ವಿದ್ಯಾರ್ಥಿಗಳು ವಿವಿಧ ಸ್ಪರ್ಧೆಗಳಿಗೆ ರಾಜ್ಯಮಟ್ಟಕ್ಕೆ ಆಯ್ಕೆ
Date:
