Friday, December 5, 2025
Friday, December 5, 2025

S.N.Chennabasappa ಜಿಲ್ಲಾ ಯೋಜನಾ ಸಭೆಯಲ್ಲಿ ಪ್ರಮುಖ ವಿಷಯಗಳನ್ನ ಚರ್ಚಿಸಿದ ಶಾಸಕ ಚನ್ನಬಸಪ್ಪ

Date:

S.N.Chennabasappa ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ 2025-26 ನೇ ಸಾಲಿನ ಜಿಲ್ಲಾ ಯೋಜನಾ ಸಮಿತಿ (KDP) ಪ್ರಗತಿ ಪರಿಶೀಲನಾ ಸಭೆಯಲ್ಲಿ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಪಾಲ್ಗೊಂಡು, ಶಿವಮೊಗ್ಗ ನಗರದ ಪ್ರಮುಖ ಮೂಲಸೌಕರ್ಯ ಮತ್ತು ಆಡಳಿತಾತ್ಮಕ ಸವಾಲುಗಳ ಕುರಿತು ಸಚಿವರ ಗಮನಕ್ಕೆ ತಂದರು.

ಸಭೆಯಲ್ಲಿ ಚರ್ಚಿಸಲಾದ ನಿರ್ಣಾಯಕ ವಿಷಯಗಳ ಸಂಕ್ಷಿಪ್ತ ವಿವರಣೆ:

  1. ಶೈಕ್ಷಣಿಕ ಸಮಸ್ಯೆಗಳು ಮತ್ತು ಬೇಡಿಕೆಗಳು:
    ಕಾಲೇಜು ಕಟ್ಟಡ ಸಮಸ್ಯೆ: ಸರ್ಕಾರಿ ಪ್ರಥಮ ದರ್ಜೆ ಬಾಲಕಿಯರ ಕಾಲೇಜಿನ ನೂತನ ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದ ಜಾಗದ ಸಮಸ್ಯೆಯನ್ನು ಬಗೆಹರಿಸಿ, ಕಾಮಗಾರಿ ಆರಂಭಕ್ಕೆ ಅನುವು ಮಾಡಿಕೊಡುವಂತೆ ಮನವಿ ಸಲ್ಲಿಸಿದರು.

ಶಿಕ್ಷಕರ ಕೊರತೆ: ನಗರದ ದುರ್ಗಿಗುಡಿ ಸರ್ಕಾರಿ ಶಾಲೆಯಲ್ಲಿನ ದೈಹಿಕ ಶಿಕ್ಷಕರ ಕೊರತೆಯನ್ನು ತ್ವರಿತವಾಗಿ ಪರಿಹರಿಸುವಂತೆ ಒತ್ತಾಯಿಸಿದರು.

ಕನ್ನಡ ಮಾಧ್ಯಮ ಶಾಲೆಗಳ ರಕ್ಷಣೆ: ಅನುದಾನಿತ ಶಾಲೆಗಳ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವುದರ ಜೊತೆಗೆ, ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳನ್ನು ಮುಚ್ಚದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

  1. ಕಾನೂನು, ಆರೋಗ್ಯ ಮತ್ತು ಸಮಾಜ ಕಲ್ಯಾಣ:
    ಮಾದಕ ವಸ್ತುಗಳ ಹಾವಳಿ (ಗಾಂಜಾ): ಶಿವಮೊಗ್ಗ ನಗರದಲ್ಲಿ ಗಾಂಜಾ ಹಾವಳಿ ಮಿತಿಮೀರಿ ಹೆಚ್ಚಾಗಿದ್ದು, ಹದಿಹರೆಯದ ಯುವಕರು ಮಾದಕ ವ್ಯಸನಿಗಳಾಗುತ್ತಿರುವುದರ ಕುರಿತು ಗಂಭೀರ ಆತಂಕ ವ್ಯಕ್ತಪಡಿಸಲಾಯಿತು. ಈ ಗಾಂಜಾ ಹಾವಳಿಯನ್ನು ಬುಡ ಸಮೇತ ಕಿತ್ತು ಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳುವಂತೆ ಸಚಿವರಲ್ಲಿ ಮನವಿ ಮಾಡಿದರು.

ಮೆಗ್ಗಾನ್ ಆಸ್ಪತ್ರೆಯ ಸುಧಾರಣೆ: ಜಿಲ್ಲಾ ಮೆಗ್ಗಾನ್ ಆಸ್ಪತ್ರೆಯಲ್ಲಿನ ಭ್ರಷ್ಟಾಚಾರ, ಪರಿಣಾಮಕಾರಿ ಉಸ್ತುವಾರಿ ಸಮಿತಿ ಇಲ್ಲದಿರುವುದು ಮತ್ತು ಬಡ ರೋಗಿಗಳಿಗೆ ಎದುರಾಗುತ್ತಿರುವ ಅನಾನುಕೂಲಗಳು ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಸಚಿವರಿಗೆ ಮನದಟ್ಟು ಮಾಡಲಾಯಿತು. ಮುಂಬರುವ ಚಳಿಗಾಲದ ಅಧಿವೇಶನದಲ್ಲಿ ಸಂಬಂಧಪಟ್ಟ ಸಚಿವರೊಂದಿಗೆ ಚರ್ಚಿಸಿ, ಪರಿಹಾರ ಕಂಡುಕೊಳ್ಳುವಂತೆ ಕೋರಿದರು.

S.N.Chennabasappa ಬಿಪಿಎಲ್ ಕಾರ್ಡ್ ಸಮಸ್ಯೆ: ಬ್ಯಾಂಕಿನಿಂದ ಸಾಲ ಪಡೆಯಲು ಐಟಿ ರಿಟರ್ನ್ಸ್ ಸಲ್ಲಿಸಿರುವ ಕಡುಬಡವರ ಬಿಪಿಎಲ್ ಕಾರ್ಡ್‌ಗಳು ರದ್ದಾಗುತ್ತಿರುವುದರಿಂದ ಆಗುತ್ತಿರುವ ತೀವ್ರ ಸಮಸ್ಯೆಗಳ ಕುರಿತು ಗಮನ ಸೆಳೆದು, ತಾತ್ಕಾಲಿಕವಾಗಿ ಕಾರ್ಡ್‌ಗಳನ್ನು ರದ್ದು ಮಾಡದಂತೆ ಸೂಚಿಸುವಂತೆ ಮನವಿ ಮಾಡಿದರು.

  1. ಅಪೂರ್ಣಗೊಂಡ ಕಾಮಗಾರಿ:
    ನಗರದ ಗುಂಡಪ್ಪ ಶೆಡ್ಡಿನಲ್ಲಿ ಬಾಬು ಜಗಜೀವನ್ ರಾಮ್ ನಿಗಮದ ವತಿಯಿಂದ ಅರ್ಧಕ್ಕೆ ನಿಂತಿರುವ ಕಟ್ಟಡ ನಿರ್ಮಾಣ ಕಾಮಗಾರಿಯ ಕುರಿತು ತಕ್ಷಣ ಗಮನಹರಿಸಿ, ಅದನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...