Friday, December 5, 2025
Friday, December 5, 2025

Usha Multispeciality Hospital ಹದಿಹರೆಯದ ಹೆಣ್ಣುಮಕ್ಕಳಿಗೆ ಸರಿಯಾದ ಮಾರ್ಗದರ್ಶನ ಅಗತ್ಯ: ಡಾ.ರಕ್ಷಾರಾವ್

Date:

Usha Multispeciality Hospital ಹೆಣ್ಣುಮಕ್ಕಳಿಗೆ ಶಿಕ್ಷಣದೊಂದಿಗೆ ಬದುಕುವ ಸಾಮರ್ಥ್ಯ, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳುವ ಕಲೆಯನ್ನು ಕಲಿಸಬೇಕು ಎಂದು ಉಷಾ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಮೆಡಿಕಲ್ ಡೈರೆಕ್ಟರ್, ಪ್ರಸೂತಿ ಸ್ತ್ರೀರೋಗ ತಜ್ಞೆ ಡಾ.ರಕ್ಷಾರಾವ್ ಹೇಳಿದರು.

ಅವರು ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸಂಯುಕ್ತ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ 5ರಿಂದ 10ನೇ ತರಗತಿಯ ವಿದ್ಯಾರ್ಥಿನಿಯರಿಗೆ ಆಯೋಜಿಸಿದ್ದ ಹದಿಹರೆಯದ ವಯಸ್ಸಿನ ಸಮಸ್ಯೆಗಳು, ಋತು ಶುಚಿತ್ವ, ಪೋಕ್ಸೋ ಕಾಯ್ದೆಯ ಕುರಿತು ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

ಹದಿಹರೆಯದ ವಯಸ್ಸಿನಲ್ಲಿ ಹೆಣ್ಣು ಮಕ್ಕಳು ದೈಹಿಕ, ಮಾನಸಿಕ ಮತ್ತು ಭಾವನಾತ್ಮಕ ಬದಲಾವಣೆಗಳನ್ನು ಅನುಭವಿಸುವುದು ಸಹಜ. ಈ ಅವಧಿಯಲ್ಲಿ ಮಕ್ಕಳಿಗೆ ಸರಿಯಾದ ಮಾರ್ಗದರ್ಶನ, ಸಂವಹನ ಮತ್ತು ಭರವಸೆಯ ವಾತಾವರಣದ ಅಗತ್ಯವಿದೆ ಎಂದರು.

ಆರೋಗ್ಯಕರ ಜೀವನಶೈಲಿ, ಸಮತೋಲನ ಆಹಾರ ಮತ್ತು ನಿಯಮಿತ ವ್ಯಾಯಾಮ ಇವುಗಳ ಮಹತ್ವವನ್ನು ತಿಳಿಸಿದರು.

ಋತುಶುಚಿತ್ವವನ್ನು ಸರಿಯಾಗಿ ಪಾಲಿಸದಿದ್ದರೆ ಆರೋಗ್ಯ ಸಮಸ್ಯೆಗಳು ಎದುರಾಗಬಹುದು ಆದ್ದರಿಂದ ತಮ್ಮ ಪೋಷಕರ ಜೊತೆಗೆ ಮುಕ್ತವಾಗಿ ಮಾತನಾಡುವ ಮೂಲಕ ಸಲಹೆಗಳನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.

Usha Multispeciality Hospital ಮಕ್ಕಳ ರಕ್ಷಣೆಯ ಉದ್ದೇಶದಿಂದ ರಚಿಸಲಾದ ಪೋಕ್ಸೋಕಾಯ್ದೆ ಕುರಿತು ಅರ್ಥವಾಗುವ ರೀತಿಯಲ್ಲಿ ಮಕ್ಕಳ ಸುರಕ್ಷತೆಯ ಪ್ರಮುಖ ಅಂಶಗಳನ್ನು ವಿವರಿಸಿದರು
ಈ ಕಾರ್ಯಕ್ರಮದಲ್ಲಿ ಶಾಲೆಯ ಪ್ರಾಂಶುಪಾಲರಾದ ದಿವ್ಯ ಕರಣಮ್, ಶಿಕ್ಷಕಿಯರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...