Friday, March 20, 2026
Friday, March 20, 2026

United Sports and Culture Club ವಾಲಿಬಾಲ್ ಪಂದ್ಯ. ಯುನೈಟೆಡ್ ಕಪ್ ವಿಜೇತರಾದ ಆದಿ ಚುಂಚನಗಿರಿ ಪ.ಪೂ. ಕಾಲೇಜಿನ ಬಾಲಕಿಯರ ತಂಡ

Date:

United Sports and Culture Club ಸರ್ದಾರ್ ಜಾಫರ್ ಸ್ಮರಣಾರ್ಥವಾಗಿ ನಾಲ್ಕನೇ ವರ್ಷದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜಿನ ಬಾಲಕ,ಬಾಲಕಿಯರಿಗಾಗಿ ಯುನೈಟೆಡ್ ಕಪ್ ವಾಲಿಬಾಲ್ ಕ್ರೀಡಾಕೂಟವನ್ನು ನೆಹರೂ ಕ್ರೀಡಾಂಗಣದಲ್ಲಿ ಯುನೈಟೆಡ್ ಸ್ಪೋರ್ಟ್ಸ್ ಅಂಡ್ ಕಲ್ಚರ್ ಕ್ಲಬ್, ಶಿವಮೊಗ್ಗ. ಹಾಗೂ ಜಿಲ್ಲಾ ವಾಲಿಬಾಲ್ ಸಂಸ್ಥೆ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರು ಭಾಗವಹಿಸಿ,ಉತ್ತಮ ಆಟದ ಪ್ರದರ್ಶನ ನೀಡಿ, ಉತ್ತಮ ದಾಳಿ, ಅಷ್ಟೇ ರಕ್ಷಣಾತ್ಮಕ ಆಟದ ಪ್ರದರ್ಶನ ನೀಡಿ, ಬಾಲಕಿಯರು ಅಂತಿಮ ಪಂದ್ಯದಲ್ಲಿ ಉತ್ತಮ ಜೊತೆ ಆಟದ ಪ್ರದರ್ಶನ ನೀಡಿ, ಪ್ರಥಮ ಬಹುಮಾನವನ್ನು ತಮ್ಮದಾಗಿಸಿಕೊಂಡಿರುತ್ತಾರೆ. ಅತ್ಯಾಕರ್ಷಕ ಟ್ರೋಪಿ ಮತ್ತು 7777 ರೂಗಳ ನಗದು ಬಹುಮಾನಗಳನ್ನು ತಮ್ಮದಾಗಿಸಿಕೊಂಡಿರುತ್ತಾರೆ.
ಬಾಲಕರ ವಿಭಾಗದಲ್ಲಿ ಉತ್ತಮವಾದ ಪ್ರದರ್ಶನ ನೀಡಿ, ಮೂರನೇ ಸ್ಥಾನವನ್ನು ತಮ್ಮದಾಗಿಸಿಕೊಂಡಿರುತ್ತಾರೆ.ಟ್ರೋಫಿ ಮತ್ತು 3333 ನಗದು ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ.
ಬೆಸ್ಟ್ ಆಲ್ ರೌಂಡರ್ ಆಗಿ ಮಾನಸಿ, ಬೆಸ್ಟ್ ಪಾಸರ್ ಯಶಸ್ವಿನಿ ಪಡೆದುಕೊಂಡರೆ, ಬಾಲಕರ ವಿಭಾಗದಲ್ಲಿ ಹರ್ಷ ಕೆ. ಬೆಸ್ಟ್ ಲಿಬ್ರೋ ಆಗಿ ಹೊರಹೊಮ್ಮಿರುತ್ತಾನೆ.
United Sports and Culture Club ಕ್ರೀಡಾಪಟುಗಳ ಮುಂದಿನ ಕ್ರೀಡಾ ಜೀವನ ಯಶಸ್ವಿಯಾಗಲಿ ಎಂದು ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು, ಶ್ರೀ ಆದಿಚುಂಚನಗಿರಿ ಶಾಖಾ ಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿಯವರು, ಆಡಳಿತ ಮಂಡಳಿಯ ಸದಸ್ಯರು, ಪ್ರಾಂಶುಪಾಲ ಎಸ್. ವಿ. ಗುರುರಾಜ್, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...