Friday, December 5, 2025
Friday, December 5, 2025

Guarantee scheme ಗ್ಯಾರಂಟಿ ಯೋಜನೆಗಳು ಜನರ ಜೀವನದಲ್ಲಿ ಒಂದಿಲ್ಲೊಂದು ರೀತಿಯ ಬದಲಾವಣೆ ತಂದಿವೆ- ಹೆಚ್.ಎಂ.ಮಧು

Date:

Guarantee scheme ಆರ್ಥಿಕವಾಗಿ ಸಾಮಾಜಿಕವಾಗಿ ದುರ್ಬಲರಾದವರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಹಾಗೂ ಸಮಾಜದ ಕಟ್ಟಕಡೆಯ ವ್ಯಕ್ತಿಯೂ ಘನತೆಯಿಂದ ಜೀವನವನ್ನು ಸಾಗಿಸುವಂತಾಗಬೇಕು ಎನ್ನುವ ಸದುದ್ದೇಶದಿಂದ ಆಡಳಿತಾರೂಢ ಸರ್ಕಾರವು ಪಂಚ ಗ್ಯಾರಂಟೆ ಯೋಜನೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಿದೆ ಎಂದು ಶಿವಮೊಗ್ಗ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್ ಎಂ.ಮಧು ಅವರು ಹೇಳಿದರು

ಅವರು ಶಿವಮೊಗ್ಗ ನಗರದ ಖಾಸಗಿ ಬಸ್‌ನಿಲ್ದಾಣದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಗ್ರಾಮ ಸಂಪರ್ಕ ಯೋಜನೆಯಡಿ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಾಕ್ಷ್ಯ ಚಿತ್ರಪ್ರದರ್ಶನ, ಸಂಗೀತ ಮತ್ತು ಬೀದಿನಾಟಕ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು.

ಶತಶತಮಾನಗಳಿಂದ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದವರನ್ನು ಶೋಷಿತರನ್ನು ಮಾತ್ರವಲ್ಲದೇ ಸಮಾಜದ ಎಲ್ಲಾ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ರೂಪಿಸಿದ ಅತ್ಯಂತ ಯಶಸ್ವಿ ಗ್ಯಾರಂಟಿ ಯೋಜನೆಗಳಾಗಿದ್ದು, ಜಗತ್ತಿನಾದ್ಯಂತ ಜನಪ್ರಿಯಗೊಂಡಿವೆ ಮಾತ್ರವಲ್ಲ ದೇಶದ ಇತರೆ ರಾಜ್ಯಗಳ ಜನರು ಅವುಗಳನ್ನು ಅನುಸರಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಬದುಕಿನಲ್ಲಿ ಒಂದಿಲ್ಲೊಂದು ರೀತಿಯ ಬದಲಾವಣೆ ಸುಧಾರಣೆ ತಂದಿವೆಯಲ್ಲದೆ ಆರ್ಥಿಕವಾಗಿ ಸಂಚಲನವನ್ನುಂಟು ಮಾಡಿದೆ ಎಂದ ಅವರು, ಆರ್ಥಿಕವಾಗಿ ದುರ್ಬಲ ವರ್ಗದವರ ಜೀವನಮಟ್ಟ ಸುಧಾರಿಸುವಲ್ಲಿ ಮಹತ್ವದ ಪಾತ್ರವಹಿಸಿವೆ ಎಂದರು.

ಕುಟುಂಬದ ಯಜಮಾನಿಗೆ ಆರ್ಥಿಕ ಬಲತುಂಬುವ ನಿಟ್ಟಿನಲ್ಲಿ ಅಕೆಯ ಬ್ಯಾಂಕ್‌ಖಾತೆಗೆ ನೇರವಾಗಿ ರೂ 2000/-ಗಳನ್ನು ಜಮಾ ಮಾಡುವ ಗೃಹಲಕ್ಷ್ಮೀ ಯೋಜನೆ, ಮಹಿಳಾ ಸಬಲೀಕರಣಕ್ಕೆ ಮುನ್ನಡಿ ಎನ್ನುವಂತೆ ಮಹಿಳೆಯರಿಗಾಗಿಯೇ ರೂಪಿಸಿದ ಉಚಿತ ಬಸ್‌ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ, ಹಸಿದ ಒಡಲಿಗೆ ಸಂತೃಪ್ತಿಯ ಊಟ ಬಡಿಸುವ ಅನ್ನಭಾಗ್ಯ ಯೋಜನೆ, ವಿದ್ಯುತ್‌ಬಳಸುವ ಪ್ರತಿ ಮನೆಗೆ ಉಚಿತ ವಿದ್ಯುತ್‌ಒದಗಿಸಿದ ಗೃಹಜ್ಯೋತಿ ಯೋಜನೆ ಹಾಗೂ ವಿದ್ಯಾವಂತರಾಗಿಯೂ ಉದ್ಯೋಗ ಸಿಗದ ನಿರುದ್ಯೋಗಿ ಪದವೀದರರಿಗೆ, ಡಿಪ್ಲೋಮಾ ಪದವೀಧರರಿಗೆ ನಿರುದ್ಯೋಗ ಭತ್ಯೆ ನೀಡುವ ಯುವನಿಧಿ ಯೋಜನೆಗಳು ಅತ್ಯಂತ ಜನಪ್ರಿಯಗೊಂಡಿದ್ದು, ಜನಸಾಮಾನ್ಯರಲ್ಲಿ ಮಂದಹಾಸ ಮೂಡಿಸಿದೆ ಎಂದರು.

Guarantee scheme ಯಾವುದೇ ಸರ್ಕಾರ ಜನರ ವೆಚ್ಚ ಸಾಮರ್ಥ್ಯವನ್ನು ಅಥವಾ ಕೊಳ್ಳುವ ಶಕ್ತಿಯನ್ನು ಹೆಚ್ಚಿಸಿದಲ್ಲಿ ಅಂತಹ ಸಮಾಜದಲ್ಲಿ ಅರ್ಥಿಕ ಚಲನಶೀಲತೆ ಆರೋಗ್ಯಕರವಾಗಿರುತ್ತದೆ ಜಿಡಿಪಿ ಬೆಳವಣಿಯೂ ಉತ್ತಮ ರೀತಿಯಲ್ಲಿರುತ್ತದೆ ಎಂಬುದು ಆರ್ಥಿಕ ತಜ್ಞರ ಅಭಿಮತ. ಇಂತಹ ಮಾದರಿ ಎನಿಸಬಹುದಾದ ಯೋಜನೆಗಳ ಜಾರಿಯಿಂದ ಜನರ ಜೀವನಮಟ್ಟ ಸುಧಾರಣೆಗೊಂಡು ಆರ್ಥಿಕ ಚಟುವಟಿಕೆ ಸುಧಾರಿಸಲಿದೆ ಎಂದರು.

ಗ್ಯಾರಂಟಿ ಯೋಜನೆಗಳು ಕಡುಬಡವರ, ದುರ್ಬಲರ ಬಾಳನ್ನು ಬೆಳಗಿಸಿವೆ. ವ್ಯವಸ್ಥೆಯಲ್ಲಿ ಬದಲಾವಣೆಯ ದಿನಗಳನ್ನು ಕಾಣಬಹುದಾಗಿದೆ. ಈ ಯೋಜನೆಗಳ ಪಡೆದ ಫಲಾನುಭವಿಗಳು ಸಹಜವಾಗಿ ತೃಪಭಾವ ಹೊಂದಿರುವುದು ನಮ್ಮ ಅರಿವಿಗೆ ಬರುತ್ತಿದೆ. ಅಷ್ಟೇ ಅಲ್ಲದೇ ಜಿಲೆಯ ಜನರ ಆಶೋತ್ತರಗಳಿಗೆ ಪೂರಕವಾಗಿ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವಲ್ಲಿ ಸರ್ಕಾರ ಸಕ್ರಿಯವಾಗಿದೆ ಎಂದರು.

ಈ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಆರ್.ಮಾರುತಿ ಅವರು ಉಪಸ್ಥಿತರಿದ್ದರು ಭದ್ರಾವತಿಯ ಜಗದೀಶ್ ನೇತೃತ್ವದ ಸಂಸ್ಕೃತಿ ಕಲಾತಂಡದ ಕಲಾವಿದರು ಭಾಗ್ಯದ ಬೆಳಕು ಎಂಬ ಕಿರುನಾಟಕವನ್ನು ಪ್ರದರ್ಶಿಸಿದರು. ಈ ಕಾರ್ಯಕ್ರಮವು ಜಿಲ್ಲೆಯ ಎಲ್ಲಾ ತಾಲೂಕುಗಳ ಆಯ್ದ 20ಸ್ಥಳಗಳಲ್ಲಿ ಪ್ರದರ್ಶನ ನೀಡಲಿದೆ. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಸುತ ಪಡಿಸುವ ಗ್ಯಾರಂಟಿ ಯೋಜನೆಗಳ ಸಾಕ್ಷ್ಯಚಿತ್ರ ಪ್ರದರ್ಶಿಸಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...