World Soil Day ವಿಶ್ವ ಮಣ್ಣು ದಿನಾಚರಣೆಯ ಪ್ರಯುಕ್ತ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗ, ವಿಸ್ತರಣಾ ನಿರ್ದೇಶನಾಲಯದ, ರೈತರ ತರಬೇತಿ ಸಂಸ್ಥೆ, ಇರುವಕ್ಕಿ ಮತ್ತು ಮಣ್ಣು ವಿಜ್ಞಾನ ವಿಭಾಗ, ಕೃಷಿ ವಿಜ್ಞಾನಗಳ ಮಹಾವಿದ್ಯಾಲಯ, ಇರುವಕ್ಕಿ ಇವರ ಸಹಭಾಗಿತ್ವದಲ್ಲಿ “ತೋಟಗಾರಿಕೆ ಬೆಳೆಗಳಲ್ಲಿ ಮಣ್ಣು ಪರೀಕ್ಷೆ ಮತ್ತು ಸಮಗ್ರ ಪೋಷಕಾಂಶಗಳ ನಿರ್ವಹಣೆ (ಅಡಿಕೆ, ತೆಂಗು, ಶುಂಠಿ ಹಾಗೂ ಕಾಳುಮೆಣಸು) “
ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುತ್ತದೆ.
ಈ ಕಾರ್ಯಕ್ರಮವನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ “ರೈತರ ತರಬೇತಿ ಸಂಸ್ಥೆ, ವರದಾ ಬ್ಲಾಕ್, ನೆಲ ಮಹಡಿ, ಇರುವಕ್ಕಿ” ಯಲ್ಲಿ ದಿನಾಂಕ: 05.12.2025 ರ ಬೆಳಗ್ಗೆ 10 ಗಂಟೆಗೆ ನೆರವೇರಿಸಲಾಗುತ್ತದೆ.
ಆದುದರಿಂದ ಆಸಕ್ತ ರೈತರು ಮತ್ತು ರೈತ ಮಹಿಳೆಯರು, ರೈತರ ತರಬೇತಿ ಸಂಸ್ಥೆಯ ಸಿಬ್ಬಂದಿಯವರಿಗೆ ಫೋನ್ ಮುಖಾಂತರ ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಈ ತರಬೇತಿ ಕಾರ್ಯಕ್ರಮವು ಉಚಿತವಾಗಿರುತ್ತದೆ.
ತಮ್ಮ ಹೆಸರನ್ನು ನೋಂದಣಿ ಮಾಡಿಕೊಳ್ಳಲು ಸಂಪರ್ಕಿಸಬೇಕಾದ ಮೊಬೈಲ್ ಸಂಖ್ಯೆಗಳು 9958324261/ 8618715599 / 9448312978
World Soil Day ಇರುವಕ್ಕಿಯಲ್ಲಿ ತೋಟಗಾರಿಕಾ ಬೆಳೆಗಳ ಕೃಷಿಯಲ್ಲಿ ಮಣ್ಣು ಪರೀಕ್ಷೆ & ಸಮಗ್ರ ಪೋಷಕಾಂಶ ನಿರ್ವಹಣೆ ತರಬೇತಿ ತರಬೇತಿ ನಡೆಯುವ ಸ್ಥಳಕ್ಕೆ ಬರಲು ಈ ಕೋಡ್ ಪಿನ್ 44L-7L7-PJM6 ಅನ್ನು ಗೂಗಲ್ ಮ್ಯಾಪ್ ನಲ್ಲಿ ಉಪಯೋಗಿಸಿ.
