Legal Services Authority ಹೆಚ್‌ಐವಿ ಸೋಂಕಿಗೆ ಒಳಗಾದ ವ್ಯಕ್ತಿಗಳ ಒಪ್ಪಿಗೆ ಇಲ್ಲದೆ ಅವರ ಗೌಪ್ಯತೆಯನ್ನು ಬಹಿರಂಗ ಪಡಿಸುವಂತಿಲ್ಲ. ಒಂದು ವೇಳೆ ಬಹಿರಂಗ ಪಡಿಸಿದರೆ ಸಂರಕ್ಷಿತ ವ್ಯಕ್ತಿಯ ಹಕ್ಕುಗಳ ರಕ್ಷಣೆ ಉಲ್ಲಂಘನೆಯಾಗುತ್ತದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್.ಎo.ಎಸ್ ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಭಾರತೀಯ ವೈದ್ಯಕೀಯ ಸಂಘ, ಕರ್ನಾಟಕ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ಶಿವಮೊಗ್ಗ, ಜಿಲ್ಲಾ ನ್ಯಾಯಾವಾದಿಗಳ ಸಂಘ, ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕ ಶಿವಮೊಗ್ಗ, ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಎಫ್‌ಪಿಎಐ ಶಿವಮೊಗ್ಗ, ಬಾಪೂಜಿ ನರ್ಸಿಂಗ್ ಕಾಲೇಜ್ ಶಿವಮೊಗ್ಗ ಹಾಗೂ ಸರ್ಕಾರೇತರ ಸಂಸ್ಥೆಗಳು ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ “ಹೆಚ್‌ಐವಿ/ಏಡ್ಸ್ ಹರುಡುವಿಕೆಯನ್ನು ನಿಯಂತ್ರಿಸಲು ಇರುವ ಅಡೆತಡೆಗಳನ್ನು ಕೊನೆಗಾಣಿಸೋಣ” ಎಂಬ ಧ್ಯೇಯವಾಕ್ಯದೊಂದಿಗೆ ಸೋಮವಾರ ಮೆಗ್ಗಾನ್ ಆಸ್ಪತ್ರೆಯ ಐಎಂಎ ಹಾಲ್ ನಲ್ಲಿ ಆಯೋಜಿಸಿದ್ದ ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಸಂರಕ್ಷಿತ ವ್ಯಕ್ತಿಯ ಹಕ್ಕುಗಳ ರಕ್ಷಣೆ ಮುಖ್ಯವಾಗಿದ್ದು, ಹೆಚ್‌ಐವಿ ಸೋಂಕಿತ ವ್ಯಕ್ತಿಗಳ ಗೌಪ್ಯತೆಯನ್ನು ಒಪ್ಪಿಗೆ ಇಲ್ಲದೆ ಎಲ್ಲೂ ಬಹಿರಂಗ ಪಡೆಸಬಾರದು. ಅದರಂತೆ ಕಾನೂನಿನ ಕಾಲಂ 2 ಎಸ್ ನಲ್ಲಿ ಸಂರಕ್ಷಿತ ವ್ಯಕ್ತಿ ಯಾರೆಂದು ವ್ಯಾಖ್ಯಾನಿಸಲಾಗಿದ್ದು, ಹೆಚ್‌ಐವಿ ಸೋಂಕಿತರು, ಅವರ ಜೊತೆ ಹಿಂದೆ ಇದ್ದ ವ್ಯಕ್ತಿ ಹಾಗೂ ಈಗ ಇರುವವರು ಈ ಮೂವರು ಕಲಂ 2 ಎಸ್ ಗೆ ಒಳಪಡುತ್ತಾರೆ ಎಂದು ಮಾಹಿತಿ ನೀಡಿದರು.
Legal Services Authority ಸಂರಕ್ಷಿತ ವ್ಯಕ್ತಿಯ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು, ಅದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಜರುಗಿಸಲಾಗುವುದು. ಕನಿಷ್ಠ ಮೂರು ತಿಂಗಳು ಜೈಲು ಶಿಕ್ಷೆಯ (ಎರಡು ವರ್ಷದವರೆಗೆ ಶಿಕ್ಷೆ ವಿಧಿಸಬಹುದು), 1 ಲಕ್ಷ ರೂ.ವರೆಗೆ ದಂಡ ಪಾವತಿಸಬೇಕಾಗಬಹುದು. ಸೋಂಕಿತರಿಗೆ ಲೀಗಲ್ ಸರ್ವಿಸಸ್ ಕ್ಲಿನಿಕ್ ಇದ್ದು, ಇದಕ್ಕೆ ಪ್ರಾಧಿಕಾರದ ಪ್ಯಾನಲ್ ವಕೀಲರಿಂದ ಸಲಹೆ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು.
2017 ರ ಕಾಯಿದೆ ಹೆಚ್‌ಐವಿ ಸೋಂಕಿನ ಬಗ್ಗೆ ಮಹಿಳೆಯರಿಗೆ ಮಾಹಿತಿ ನೀಡಲು ತಿಳಿಸಿದ್ದು, ಆ ನಿಟ್ಟಿನಲ್ಲಿ ಸರ್ಕಾರ, ಸರ್ಕಾರೇತರ ಸಂಸ್ಥೆಗಳು ಹಾಗೂ ಸಾರ್ವಜನಿಕರು ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಟಿಬಿ ಸಕ್ರಿಯ ಪ್ರಕರಣಗಳ ಪತ್ತೆಗೆ ಅಭಿಯಾನ ಮಾಡಲಾಗುತ್ತಿದೆ. ಇದರ ಜಾಗೃತಿಗೆ ನಗರ ಮತ್ತು ಗ್ರಾಮೀಣ ಭಾಗದಲ್ಲಿರುವವರು ಕೈಜೋಡಿಸಬೇಕು. ಸೋಂಕಿತರ ಸಂಪರ್ಕದಲ್ಲಿರುವವರು ಅಭಿಯಾನದಲ್ಲಿ ಪಾಲ್ಗೊಂಡು ಆರೋಗ್ಯ ಇಲಾಖೆಗೆ ಸಹಕಾರಿಯಾಗಬೇಕು ಎಂದು ಹೇಳಿದರು.
ಜಿಲ್ಲಾ ಏಡ್ಸ್ ತಡೆಗಟ್ಟುವ ಮತ್ತು ನಿಯಂತ್ರಣ ಘಟಕದ ಅಧಿಕಾರಿ ಡಾ. ನಾಗೇಶ್.ಬಿ.ಪಿ ಪ್ರಾಸ್ತಾವಿಕವಾಗಿ ಮಾತನಾಡಿ, ಶಿವಮೊಗ್ಗ ಜಿಲ್ಲೆಯಲ್ಲಿ ಒಟ್ಟು 121 ಸೌಲಭ್ಯಧಾರಿತ ಆಪ್ತ ಸಮಾಲೋಚನಾ ಮತ್ತು ಪರೀಕ್ಷಾ ಕೇಂದ್ರಗಳಿವೆ. 2024-25 ನೇ ಸಾಲಿನಲ್ಲಿ ಒಟ್ಟು 1,32,868 ಸಾಮಾನ್ಯ ಜನರಿಗೆ ಹೆಚ್.ಐ.ವಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ ಒಟ್ಟು 249 ಸೋಂಕಿರತನ್ನು ಪತ್ತೆಹಚ್ಚಲಾಗಿದೆ. ಹಾಗೂ 2024-25 ನೇ ಸಾಲಿನ EV THS ಕಾರ್ಯಕ್ರಮದಲ್ಲಿ ಒಟ್ಟು 31,688 ಗರ್ಭೀಣಿ ಸ್ತ್ರೀಯರನ್ನು ಹೆಚ್‌ಐವಿ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇದರಲ್ಲಿ 8 ಜನ ಸೋಂಕಿತರನ್ನು ಪತ್ತೆಹಚ್ಚಲಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯ ಸಮುದಾಯಗಳಲ್ಲಿ ಹೆಚ್‌ಐವಿ ಪತ್ತೆ ಹಚ್ಚುವಲ್ಲಿ ಸಿಬಿಒ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿದ್ದು, ಇದರ ಬಗ್ಗೆ ಹೆಚ್ಚಿನ ಅರಿವು ಮೂಡಿಸಲು ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ ಆರೋಗ್ಯ ಶಿಕ್ಷಣದ ಕುರಿತು ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ.
ಜಿಲ್ಲಾದ್ಯಾಂತ 42 ಕಾಲೇಜುಗಳಲ್ಲಿ ರೆಡ್ ರಿಬ್ಬನ್ ಕ್ಲಬ್‌ಗಳನ್ನು ಸ್ಥಾಪಿಸಿ ಹೆಚ್‌ಐವಿ, ಏಡ್ಸ್ ಅರಿವು, ರಕ್ತದಾನ ಶಿಬಿರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಮಾಜಿಕ ಜಾಲತಾಣಗಳು, ಯುವಜನೋತ್ಸವ ಕಾರ್ಯಕ್ರಮ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ, ಮ್ಯಾರಥಾನ್, ನಾಟಕ ಹಾಗೂ ರೀಲ್ಸ್ ಸ್ಪರ್ಧೆಗಳ ಮೂಲಕ ಅರಿವು ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ಮಂಜುನಾಥ್ ಜಿ.ಎ ಅವರು ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಜಾಥಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಜಾಥಾ ಕೋರ್ಟ್ ಆವರಣದಿಂದ ಪ್ರಾರಂಭವಾಗಿ ಗೋಪಿ ವೃತ್ತ ಮೂಲಕ ಸಾಗಿ ಐಎಂಎ ಹಾಲ್‌ಗೆ ತಲುಪಿತು.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ ಚಂದ್ರಶೇಖರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ಶಶಿರೇಖಾ, ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು, ನರ್ಸಿಂಗ್ ವಿದ್ಯಾರ್ಥಿಗಳು, ಹೆಚ್‌ಐವಿ ನಿಯಂತ್ರಣದ ಬಗ್ಗೆ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳು ಹಾಜರಿದ್ದರು.
Legal Services Authority ಸೋಂಕಿತ ವ್ಯಕ್ತಿಯ ಸಮ್ಮತಿ ಇಲ್ಲದೇ ಗೌಪ್ಯ ತೆ ಬಹಿರಂಗ ಪಡಿಸುವಂತಿಲ್ಲ- ನ್ಯಾ. ಎಂ.ಎಸ್. ಸಂತೋಷ್
Date:
