Thursday, September 10, 2026
Thursday, September 10, 2026

Canara Bank Rural Self Employment Training Institute ಕೆನರಾ ಬ್ಯಾಂಕ್ ಸ್ವ ಉದ್ಯೋಗ ತರಬೇತಿ ಕೇಂದ್ರದಿಂದ ತರಬೇತಿಗೆ ಅರ್ಹರಿಂದ ಅರ್ಜಿ ಆಹ್ವಾನ

Date:

Canara Bank Rural Self Employment Training Institute ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಹೊಳಲೂರು (ಶಿವಮೊಗ್ಗ ತಾಲ್ಲೂಕು) ಇಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದ್ದು ಆಸಕ್ತಿ ಇರುವ ರೈತರು, ಕಾರ್ಮಿಕರು, ನಿರುದ್ಯೋಗಿ ಯುವಕ ಮತ್ತು ಯುವತಿ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಯು 18 ರಿಂದ 45 ವರ್ಷ ವಯೋಮಿತಿ ಒಳಗಿನವರಾಗಿರಬೇಕು ಮತ್ತು 8ನೇ ತರಗತಿ ಉತ್ತೀರ್ಣರಾಗಿರಬೇಕು. ಮತ್ತು ಗ್ರಾಮೀಣ ಭಾಗದ ಬಿಪಿಎಲ್ ಕಾರ್ಡ ಹೊಂದಿದ್ದು, ಉಚಿತ ತರಬೇತಿಯನ್ನು ಪಡೆದ ನಂತರ ಸ್ವ-ಉದ್ಯೋಗವನ್ನು ಪ್ರಾರಂಭ ಮಾಡುವವರಾಗಿರಬೇಕು.

ತರಬೇತಿ ಅವಧಿಯಲ್ಲಿ ಉಚಿತ ಊಟ-ವಸತಿ ವ್ಯವಸ್ಥೆ ಇರುತ್ತದೆ. ತರಬೇತಿ ಅವಧಿಯಲ್ಲಿ ಸಂಸ್ಥೆಯಲ್ಲಿ ಉಳಿದುಕೊಳ್ಳುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುವುದು.

13 ದಿನಗಳ ಕೃಷಿ ಉದ್ಯಮಿ (ಕುರಿ ಕೋಳಿ, ಹಸು ಸಾಕಾಣಿಕೆ & ಏರೆಹುಳ ಗೊಬ್ಬರ ತಯಾರಿಕೆ, ಇತ್ಯಾದಿ) ತರಬೇತಿಯು 08/12/2025ರಿಂದ ಆರಂಭಗೊಳ್ಳಲಿದೆ.

35 ದಿನಗಳ ಬ್ಯೂಟಿ ಪಾರ್ಲರ್ ಮ್ಯಾನೆಜ್‌ಮೆಂಟ್ ತರಬೇತಿಯು 09/12/2025ರಿಂದ ಆರಂಭಗೊಳ್ಳಲಿದೆ.

Canara Bank Rural Self Employment Training Institute ಆಸಕ್ತರು ಹೆಸರು, ವಿಳಾಸ, ಮೊಬೈಲ್ ನಂ. ವಿದ್ಯಾರ್ಹತೆ, ಮತ್ತು ವಯಸ್ಸಿನ ವಿವರಗಳೊಂದಿಗೆ:
ನಿರ್ದೇಶಕರು,
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ -ಉದ್ಯೋಗ ತರಬೇತಿ ಸಂಸ್ಥೆ,
ಹೊನ್ನಾಳಿ ರಸ್ತೆ, ಹೊಳಲೂರು-577 216 (ಶಿವಮೊಗ್ಗ ತಾಲ್ಲೂಕು)
ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ನಂ. 9743429595, 8722384541, 9164411580, 9449371579, 9481955721, 9632961707 ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Chamber of commerce Shivamogga “ಬೆಂಗಳೂರಿನಾಚೆ ಕೈಗಾರಿಕಾ ಅಭಿವೃದ್ಧಿ” ಗಾಗಿ ಶಿವಮೊಗ್ಗ ನಗರವನ್ನ ಸೇರ್ಪಡಿಸಿ- ಎಸ್.ರುದ್ರೇಗೌಡ

Chamber of commerce Shivamogga ಬೆಂಗಳೂರಿನಾಚೆಗಿನ ಕೈಗಾರಿಕೆಗಳ ಅಭಿವೃದ್ಧಿಗಾಗಿ ಶಿವಮೊಗ್ಗ ನಗರ...

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...