TET Exam 2025 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು (ಕೆಎಆರ್‌ಟಿಇಟಿ-2025) ಡಿ.07 ರ ಭಾನುವಾರದಂದು ಶಿವಮೊಗ್ಗ ನಗರದಲ್ಲಿ ನಡೆಯಲಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ಮೊದಲ ಅಧಿವೇಶನಕ್ಕೆ 3169 ಅಭ್ಯರ್ಥಿಗಳು ಹಾಗೂ ಪೇಪರ್ -2 ಕ್ಕೆ 8677 ಅಭ್ಯರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು, ಬೆಳಗಿನ ಅವಧಿಗೆ 11 ಪರೀಕ್ಷಾ ಕೇಂದ್ರಗಳು ಮತ್ತು 2ನೇ ಅವಧಿಗೆ ಒಟ್ಟು 31 ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿದೆ.
ಬೆಳಗಿನ ಅವಧಿಯು ಬೆಳಿಗ್ಗೆ 90.30 ರಿಂದ 12 ಮತ್ತು ಮಧ್ಯಾಹ್ನದ ಅವಧಿಯು 2.00 ರಿಂದ ಸಂಜೆ 4.30 ರವರೆಗೆ ನಡೆಯಲಿದೆ.
ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಿಸಿರುತ್ತಾರೆ.
TET Exam ಪರೀಕ್ಷಾರ್ಥಿಗಳು ಪ್ರವೇಶ ಪತ್ರದ ಜೊತೆಗೆ ಕಡ್ಡಾಯವಾಗಿ ಯಾವುದಾದರೂ ಗುರುತಿನ ಚೀಟಿಯನ್ನು ತರಬೇಕು (ಆಧಾರ್ ಕಾರ್ಡ್, ವೋಟರ್ ಐಡಿ, ಡ್ರೈವಿಂಗ್ ಲೈಸೆನ್ಸ್) ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು(ಆಡಳಿತ) ತಿಳಿಸಿದ್ದಾರೆ.
