B.Y.Raghavendra ಕಾರ್ಯನಿರ್ವಹಿಸದಿರುವ ಮಳೆ ಮಾಪನ ಯಂತ್ರಗಳು ಹಾಗೂ ಸಕಾಲಿಕವಾಗಿ ಗಮನಹರಿಸದ ಅಧಿಕಾರಿ-ಸಿಬ್ಬಂಧಿಗಳ ನಿರ್ಲಕ್ಷ್ಯ ಮುಂತಾದ ಕಾರಣಗಳಿಂದಾಗಿ ಬೆಳೆಹಾನಿಗೊಳಗಾದ ರೈತರಿಗೆ ನಿರೀಕ್ಷಿತ ಪ್ರಮಾಣದ ವಿಮಾ ಮೊತ್ತ ಪಾವತಿಯಾಗದಿರುವುದು ಅತ್ಯಂತ ನೋವಿನ ಸಂಗತಿಯಾಗಿದ್ದು, ಅದನ್ನು ಮುಂದಿನ ಒಂದು ವಾರದೊಳಗಾಗಿ ಸಮರ್ಪಕವಾಗಿ ದಾಖಲೆಗಳನ್ನು ಸರಿಪಡಿಸಿಕೊಂಡು ಸಂತ್ರಸ್ಥ ರೈತರಿಗೆ ನ್ಯಾಯೋಚಿತವಾದ ಪರಿಹಾರ ಮೊತ್ತವನ್ನು ಪಾವತಿಸಲು ಕ್ರಮ ಕೈಗೊಳ್ಳುವಂತೆ ಸಂಸದ ಬಿ.ವೈ.ರಾಘವೇಂದ್ರ ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಹಾಗೂ ವಿಮಾ ಕಂಪನಿಗಳ ಮುಖ್ಯಸ್ಥರಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ಕೃಷಿ, ತೋಟಗಾರಿಕೆ ಇಲಾಖೆ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳೊಂದಿಗೆ ಹವಾಮಾನಾಧಾರಿತ ಬೆಳೆವಿಮೆ ಅಸಮರ್ಪಕವಾಗಿ ವಿತರಿಸುತ್ತಿರುವ ಬಗ್ಗೆ ಸುದೀರ್ಘವಾಗಿ ಚರ್ಚಿಸಿ ಮಾಹಿತಿ ಪಡೆದರು.
ಜಿಲ್ಲೆಯಲ್ಲಿರುವ 280 ಮಳೆ ಮಾಪನ ಯಂತ್ರಗಳಲ್ಲಿ ಶೇ.75ರಷ್ಟು ಯಂತ್ರಗಳು ಕಾರ್ಯನಿರ್ವಹಿಸುತ್ತಿಲ್ಲ. ಹೀಗಿರುವಾಗ ಮಳೆಮಾಪನದ ದತ್ತಾಂಶ ಸಂಗ್ರಹಿಸುವುದಾದರೂ ಹೇಗೆ? ಎಂದು ಅಧಿಕಾರಿಗಳಿಗೆ ಪ್ರಶ್ನಿಸಿದ ಅವರು, ನೆರೆಯ ಗ್ರಾಮ ಪಂಚಾಯಿತಿಗಳಲ್ಲಿ ಬಿದ್ದಿರುವ ಮಳೆಯ ಅಂದಾಜನ್ನು ಆಧರಿಸಿ, ಮಳೆಯ ಪ್ರಮಾಣವನ್ನು ನಿರ್ಧರಿಸುವುದು ಸರಿಯಾದ ಕ್ರಮವಲ್ಲ. ಒಂದೊಮ್ಮೆ ನೆರೆಯ ಗ್ರಾಮ ಪಂಚಾಯಿತಿಗಳಲ್ಲಿನ ಮಳೆ ಪ್ರಮಾಣವನ್ನು ಗುರುತಿಸುವುದಾದರೆ ರಸ್ತೆಯ ದೂರವನ್ನಾಧರಿಸಿ ಅಥವಾ ವೈಮಾನಿಕ ದೂರವನ್ನು ಅಂದಾಜಿಸಿ ಮಳೆಯ ಮಾಪನ ಕೇಂದ್ರವನ್ನು ಗುರುತಿಸಲಾಗುವುದು ಎಂಬ ಬಗ್ಗೆ ಅಧಿಕಾರಿಗಳಲ್ಲಿ ನಿಖರವಾದ ಮಾಹಿತಿ ಇಲ್ಲ. B.Y.Raghavendra ಮಲೆನಾಡು, ಅರೆಮಲೆನಾಡು ಮತ್ತು ಬಯಲುಸೀಮೆ ಪ್ರದೇಶಗಳಲ್ಲಿ ಮಳೆ ಪ್ರಮಾಣ, ದತ್ತಾಂಶ ಸಂಗ್ರಹಣೆಯಲ್ಲಿನ ನ್ಯೂನತೆಗಳಂತಹ ಅವೈಜ್ಞಾನಿಕವಾದ ಕಾರಣಗಳಿಂದಾಗಿ ಸಂತ್ರಸ್ಥ ರೈತರಿಗೆ ಶೋಷಣೆ ಮಾಡುತ್ತಿರುವುದು ಸೂಕ್ತವಲ್ಲ ಎಂದ ಅವರು, ಸಂಬಂಧಿಸಿದ ಇಲಾಖೆಗಳ ಹಾಗೂ ವಿಮಾ ಕಂಪನಿಗಳ ಅಧಿಕಾರಿಗಳು ಕೂಡಲೇ ಗಮನಹರಿಸಿ, ಅಸಮರ್ಪಕ ವಿಮಾ ಮೊತ್ತದ ವಿತರಣೆಯನ್ನು ಸರಿಪಡಿಸಿಕೊಂಡು ವಿತರಿಸಲು ಮುಂದಾಗುವಂತೆ ಅವರು ಸೂಚಿಸಿದರು.
B.Y.Raghavendra ಹವಾಮಾನಾಧಾರಿತ ಬೆಳೆವಿಮೆ ನಿರ್ಧರಣೆ ನ್ಯೂನತೆ ಸಮರ್ಪಕಗೊಳಿಸಲು ಸೂಚನೆ : ಬಿ.ವೈ.ರಾಘವೇಂದ್ರ
Date:
