B.Y.Raghavendra 2024 – 25 ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆಗೆ ಸಂಬಂಧಿಸಿದಂತೆ ಹವಾಮಾನ ಆಧಾರಿತ ಬೆಳೆ ವಿಮೆ ಹಣವು ರೈತರ ಖಾತೆಗಳಿಗೆ ಕಡಿಮೆ ಜಮಾ ಆಗಿದ್ದು, ಕೆಲವು ರೈತರಿಗೆ ಪ್ರೀಮಿಯಂ ಮೊತ್ತವು ಸಹ ಬಂದಿರುವುದಿಲ್ಲ.
ಇದರಿಂದ ರೈತರಿಗೆ ಅನ್ಯಾಯವಾಗಿದ್ದು, ಹವಾಮಾನ ಇಲಾಖೆ ತೋಟಗಾರಿಕಾ ಇಲಾಖೆ ಕಂದಾಯ ಇಲಾಖೆ ಹಾಗೂ ಬೆಳೆ ವಿಮೆ ಕಂಪನಿಯ ಅಧಿಕಾರಿಗಳ ಜೊತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿ, ರೈತರಿಗೆ ಅನ್ಯಾಯವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವ ಹಿನ್ನೆಲೆಯಲ್ಲಿ, ತಪ್ಪಾಗಿರುವುದನ್ನು ಸರಿಪಡಿಸಿ ಒಂದು ವಾರದೊಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸಲು, ಹಾಗೂ ಬೆಳೆ ವಿಮೆಯನ್ನು ಮರು ಜಮೆ ಮಾಡಲು ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಯಿತು.
