CM Siddharamaiah ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಸಖರಾಯಪಟ್ಟಣದ ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಅವರ ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.
ಗಣೇಶ್ ಗೌಡ ಅವರ ಸಾವಿನಿಂದ ಅವರ ಕುಟುಂಬ ಸದಸ್ಯರಷ್ಟೇ ನಾನು ದುಃಖಿತನಾಗಿದ್ದೇನೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.
ಕೊಲೆಗೈದ ಪಾತಕಿಗಳು ಮತ್ತು ಅವರ ಹಿಂದಿರುವ ದುಷ್ಟಶಕ್ತಿಗಳನ್ನು ಪತ್ತೆಮಾಡಿ, ಕಾನೂನಿನ ಪ್ರಕಾರ ಗರಿಷ್ಠ ಶಿಕ್ಷೆಗೆ ಒಳಪಡಿಸುವಂತೆ ನೋಡಿಕೊಳ್ಳುವ ಮೂಲಕ ಅವರ ಸಾವಿಗೆ ನ್ಯಾಯ ಕೊಡಿಸುವ ಕೆಲಸವನ್ನು ನಮ್ಮ ಸರ್ಕಾರ ಮಾಡಲಿದೆ.
CM Siddharamaiah ಶಾಂತಿ, ಸಾಮರಸ್ಯ ಬಯಸುವ ಜನರ ವಿರುದ್ಧ ಶಸ್ತ್ರ ಹಿಡಿದು ಬರುವ ಪ್ರತಿ ಭಯೋತ್ಪಾದಕನನ್ನು ಕಾನೂನಿನ ಮೂಲಕವೇ ಹೆಡೆಮುರಿ ಕಟ್ಟುತ್ತೇವೆ. ಮೃತ ಗಣೇಶ್ ಕುಟುಂಬದ ಜೊತೆ ನಮ್ಮ ಪಕ್ಷ ಮತ್ತು ಸರ್ಕಾರ ದೃಢವಾಗಿ ನಿಲ್ಲಲಿದೆ ಎಂದು ಮುಖ್ಯಮಂತ್ರಿಗಳು ತಮ್ಮ ಸಂತಾಪದ ನುಡಿಗಳಲ್ಲಿ ತಿಳಿಸಿದ್ದಾರೆ.
