Rotary Club Shimoga Midtown ಕ್ರೀಡೆಯಲ್ಲಿ ಪಾಲ್ಗೊಳ್ಳುವುದರಿಂದ ಖಿನ್ನತೆ ದೂರವಾಗುವುದರ ಜೊತೆಗೆ ದೈಹಿಕ ಸಾಮರ್ಥ್ಯ ವೃದ್ಧಿ ಹಾಗೂ ಉಲ್ಲಾಸ ಹೆಚ್ಚುತ್ತದೆ ಎಂದು ರೋಟರಿ ನಿಯೋಜಿತ ಜಿಲ್ಲಾ ಗವರ್ನರ್ ವಸಂತ್ ಹೋಬಳಿದಾರ್ ಹೇಳಿದರು.
ನಗರದ ಮೌಂಟ್ ಕಾರ್ಮೆಲ್ ಸ್ಕೂಲ್ ಕ್ರೀಡಾಂಗಣದಲ್ಲಿ ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ವತಿಯಿಂದ ಆಯೋಜಿಸಿದ್ದ ವಲಯ ಹನ್ನೊಂದರ ವಲಯ ಮಟ್ಟದ ರೋಟರಿ ಕ್ರೀಡೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ರೋಟರಿ ಸಂಸ್ಥೆ ಸ್ನೇಹ, ಪ್ರೀತಿ, ಸೇವೆಯ ಜೊತೆಗೆ ಸದಸ್ಯರಲ್ಲಿ ಪರಸ್ಪರ ಒಡನಾಟ ಹೆಚ್ಚಿಸುವುದಕ್ಕಾಗಿ ಇಂತಹ ಕ್ರೀಡೆಗಳನ್ನು ವಲಯ ಮಟ್ಟದಲ್ಲಿ ಆಯೋಜಿಸಲಾಗಿದೆ. ಇಲ್ಲಿ ವಿಜೇತರಾದವರಿಗೆ ಜಿಲ್ಲಾಮಟ್ಟದಲ್ಲಿ ಸ್ಪರ್ಧಿಸಲು ಅವಕಾಶ ಇರಲಿದೆ. ನಮ್ಮ ಜಿಲ್ಲೆಯಲ್ಲಿಯೂ ಸಹ ರಾಜ್ಯ, ರಾಷ್ಟ್ರಮಟ್ಟದ ಕ್ರೀಡಾಪಟುಗಳು ಇದ್ದಾರೆ. ಕ್ರೀಡಾಪಟುಗಳಿಗೆ ವಿಶೇಷವಾದ ಸ್ಥಾನಮಾನಗಳು ಇದೆ. ಪ್ರತಿಭೆಯನ್ನು ಅನಾವರಣ ಮಾಡಲು ಇಂತಹ ಸ್ಪರ್ಧೆಗಳಲ್ಲಿ ಭಾಗವಹಿಸಬೇಕು ಎಂದು ತಿಳಿಸಿದರು.
Rotary Club Shimoga Midtown ವಲಯ ಹನ್ನೊಂದರ ಸಹಾಯಕ ಗವರ್ನರ್ ಲಕ್ಷ್ಮಣ್ ಗೌಡ ಗೌಡ ಮಾತನಾಡಿ, ಕ್ರೀಡೆಯಲ್ಲಿ ಸೋಲು ಗೆಲುವು ಮುಖ್ಯ ಅಲ್ಲ, ಭಾಗವಹಿಸಿಕೆ ಮುಖ್ಯ ಆಗುತ್ತದೆ. ಮಾನವೀಯ ಸಂಬಂಧಗಳನ್ನು ಬೆಸೆಯುತ್ತದೆ ಎಂದು ಹೇಳಿದರು.
ರೋಟರಿ ಜಿಲ್ಲಾ ಕ್ರೀಡಾ ಚೇರ್ಮನ್ ರವಿ ಕೊಟೋಜಿ ಅವರು ಎಲ್ಲ ಆಟಗಾರರಿಗೆ ಶುಭಾಶಯ ಕೋರಿ ಹಾರೈಸಿದರು. ಕ್ರೀಡಾಕೂಟದಲ್ಲಿ ವಲಯ ಸೇನಾನಿ ಕಿರಣ್ ಕುಮಾರ್, ಭರತ್ ಕೂಡ್ಲು, ಎಚ್.ಎಂ.ಸುರೇಶ್, ರೋಟರಿ ಸೆಂಟ್ರಲ್ ಕ್ಲಬ್ ಅಧ್ಯಕ್ಷ ಬಸವರಾಜ್, ಕಾರ್ಯದರ್ಶಿ ಜಯಶೀಲ ಶೆಟ್ಟಿ, ಜಿಲ್ಲಾ ಮಾಜಿ ಗವರ್ನರ್ ಜಿ.ಎನ್.ಪ್ರಕಾಶ್, ಚುಡಾಮಣಿ ಪವಾರ್, ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ವಲಯ ಹನ್ನೊಂದರ ಎಂಟು ಕ್ಲಬ್‌ಗಳ ಅಧ್ಯಕ್ಷರು, ಕಾರ್ಯದರ್ಶಿಗಳು, ಪದಾಧಿಕಾರಿಗಳು ಉಪಸ್ಥಿತರಿದ್ದರು.
