Thursday, December 11, 2025
Thursday, December 11, 2025

Gurudutt Hegde ಧ್ವಜವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರಿಗೆ & ಅವರ ಅವಲಂಬಿತರಿಗೆ ನೆರವಾಗೋಣ- ಗುರುದತ್ತ ಹೆಗಡೆ

Date:

Gurudutt Hegde ಸಶಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಿದ ಸೈನಿಕರನ್ನು ಗೌರವಿಸುವ ಉದ್ದೇಶದಿಂದ ಸೈನಿಕ ಧ್ವಜ ದಿನಾಚರಣೆಯನ್ನು ಪ್ರತಿ ವರ್ಷ ಕೈಗೊಳ್ಳಲಾಗುತ್ತಿದ್ದು, ಧ್ವಜ ವಂತಿಗೆ ನೀಡುವ ಮೂಲಕ ನಿವೃತ್ತ ಸೈನಿಕರು ಮತ್ತು ಅವರ ಅವಲಂಬಿತರಿಗೆ ನೆರವಾಗೋಣ ಎಂದು ಎಂದು ಗುರುದತ್ತ ಹೆಗಡೆ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಸೋಮವಾರ ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆ ಅಂಗವಾಗಿ ಏರ್ಪಡಿಸಲಾಗಿದ್ದ ಧ್ವಜ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
1949 ರಿಂದ ಪ್ರತಿ ವರ್ಷ ಸೈನಿಕ ಧ್ವಜ ದಿನವನ್ನು ಆಚರಿಸಲಾಗುತ್ತಿದೆ. ಧ್ವಜ ದಿನಾಚರಣೆ ಅಂಗವಾಗಿ ಸಂಗ್ರಹವಾಗುವ ವಂತಿಗೆ ಹಣವನ್ನು ನಿವೃತ್ತ ಸೈನಿಕರ ಕುಟುಂಬ, ಅವರ ಅವಲಂಬಿತರ ಕಲ್ಯಾಣಕ್ಕಾಗಿ ಹಾಗೂ ಯುದ್ದದಲ್ಲಿ ಅಂಗವಿಕಲತೆಗೆ ಒಳಗಾದ ಸೈನಿಕರ ನೆರವಿಗಾಗಿ ಬಳಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಎಲ್ಲ ಅಧಿಕಾರಿಗಳು, ಸಾರ್ವಜನಿಕರು ಉತ್ತಮ ರೀತಿಯಲ್ಲಿ ಸಹಕರಿಸಬೇಕೆಂದು ಮನವಿ ಮಾಡುತ್ತೇನೆ ಎಂದ ಅವರು ಶಿವಮೊಗ್ಗ ಜಿಲ್ಲೆ ಧ್ವಜ ವಂತಿಗೆ ಸಂಗ್ರಹದಲ್ಲಿ ಮತ್ತು ಕಲ್ಯಾಣ ಕಾರ್ಯಕ್ರಮಗಳಲ್ಲಿ ಮಾದರಿಯಾಗಲಿ ಎಂದರು ಆಶಿಸಿದರು.
Gurudutt Hegde ಪುರೋಹಿತರಾದ ನಾಗರಾಜ್ ಎಂಬುವವರು ಧ್ವಜ ದಿನಾಚರಣೆ ಅಂಗವಾಗಿ ರೂ.25000 ಗಳ ವಂತಿಗೆಯನ್ನು ನೀಡಿದ್ದು ಅವರನ್ನು ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಗೌರವಿಸಿ, ನಾಗರಾಜ್‌ರವರು ಎಲ್ಲರಿಗೂ ಪ್ರೇರಣೆಯಾಗಿದ್ದಾರೆ ಎಂದರು.
ಸೈನಿಕ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ(ಪ್ರ)ರಾದ ಡಾ.ಸಿ.ಎ.ಹಿರೇಮಠ ಮಾತನಾಡಿ, ಈ ಬಾರಿ ಧ್ವಜ ವಂತಿಗೆಯ ಸಂಗ್ರಹದಲ್ಲಿ ಉತ್ತಮವಾಗಿ ಗುರಿ ಸಾಧನೆ ಮಾಡಲಾಗಿದೆ. ಧ್ವಜ ದಿನದ ಅಂಗವಾಗಿ ಸಂಗ್ರಹವಾಗುವ ವಂತಿಗೆ ಹಣದಿಂದ ನಿವೃತ್ತ ಸೈನಿಕರು, ಅವರ ಅವಲಂಬಿತರಿಗೆ ಅನುಕೂಲ ಮಾಡಿಕೊಡಲಾಗುವುದು. ವಂತಿಗೆ ಹಣ ಹೆಚ್ಚಾದರೆ ಹೆಚ್ಚಿನ ಅನುಕೂಲ ಸಾಧ್ಯವಾಗುತ್ತದೆ. ಆದ್ದರಿಂದ ಅಧಿಕಾರಿಗಳು, ಸಾರ್ವಜನಿಕ ಸಹಕಾರ ಸಿಕ್ಕರೆ ಒಳ್ಳೆಯದು ಎಂದರು.
ಈ ಸಂದರ್ಭದಲ್ಲಿ ಜಿಲ್ಲೆಯ ಮಾಜಿ ಸೈನಿಕರ ಸಂಘದ ಪದಾಧಿಕಾರಿಗಳು, ಮಾಜಿ ಸೈನಿಕರ ಅವಲಂಬಿತರು, ಎನ್‌ಸಿಸಿ ಅಧಿಕಾರಿಗಳು, ಇತರೆ ಅಧಿಕಾರಿಗಳು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DC Shivamogga ಡಿಸೆಂಬರ್ 12 & 13, ಶಿವಮೊಗ್ಗದಲ್ಲಿ ಕಂದಾಯ ಇಲಾಖಾ ನೌಕರರಿಂದ ” ಕಂದಾಯೋತ್ಸವ”- ವಿ.ಅಭಿಷೇಕ್

DC Shivamogga ಒತ್ತಡದಲ್ಲಿ ಕಾರ್ಯನಿರ್ವಹಿಸುವ ಕಂದಾಯ ಇಲಾಖೆಯ ಅಧಿಕಾರಿ-ಸಿಬ್ಬಂಧಿಗಳು ತಮ್ಮ...

MESCOM ಡಿಸೆಂಬರ್ 11 & 12 ಶಿವಮೊಗ್ಗ ನಗರಕ್ಕೆ ಕುಡಿಯುವ ನೀರಿಲ್ಲ, ಒಳ ಮಂಡಳಿ ಪ್ರಕಟಣೆ

MESCOM ಶಿವಮೊಗ್ಗ ನಗರದ ಮಂಡ್ಲಿ ಭಾಗದಲ್ಲಿ ಮೆಸ್ಕಾಂ ತುರ್ತು ನಿರ್ವಹಣಾ ಕಾಮಗಾರಿ...

Department of School Education ಪ್ರೌಢಶಾಲಾ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಗೆ ಸಮಗ್ರ ಚಾಂಪಿಯನ್ ಪಟ್ಟ

Department of School Education ಬೆಂಗಳೂರಿನಲ್ಲಿ ಶಾಲಾ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ...