Friday, July 10, 2026
Friday, July 10, 2026

Adichunchanagiri Mutt ಶ್ರೀ ಕ್ಷೇತ್ರ ಆದಿಚುಂಚನಗಿರಿ ಮಠದಲ್ಲಿ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರ ಆಯೋಜನೆ

Date:

Adichunchanagiri Mutt ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಿಂದ ಪ್ರತಿ ವರುಷದಂತೆ ಈ ಬಾರಿಯು ಡಿಸೆಂಬರ್ 16 ರಿಂದ 26 ರವರಗೆ 18 ನೇ ರಾಜ್ಯ ಮಟ್ಟದ ಉಚಿತ ಅರ್ಚಕ ತರಬೇತಿ ಶಿಬಿರವನ್ನು ಆಯೋಜಿಸಲಾಗುತ್ತಿದೆ. ಈ ಶಿಬಿರವು ಎಲ್ಲಾ ಜಾತಿ, ಧರ್ಮ ಮತ್ತು ಲಿಂಗಗಳ ಬೇಧವಿಲ್ಲದೆ ಸಂಪೂರ್ಣ ಉಚಿತವಾಗಿ ಜನರಿಗೆ ಕ್ಷೇತ್ರದ ಬಿಜಿಎಸ್ ಸಭಾ ಮಂಟಪದಲ್ಲಿ ನಡೆಯಲಿದೆ ಎಂದು ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿ ಹಾಗೂ ಶಿವಮೊಗ್ಗ ಶಾಖೆಯ ಕಾರ್ಯದರ್ಶಿಗಳು ಆದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ತಿಳಿಸಿದ್ದಾರೆ.
ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ಬಾಲಗಂಗಾಧರನಾಥ ಮಹಾ ಸ್ವಾಮೀಜಿಗಳವರ ಆಶಯದಂತೆ 17 ವರ್ಷಗಳಿಂದ ರಾಜ್ಯ ಮಟ್ಟದ ಅರ್ಚಕ ವೃತ್ತಿ ಶಿಕ್ಷಣ ತರಬೇತಿಯನ್ನು ಆಯೋಜಿಸಿದ್ದು,ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ಆಶಿಸುತ್ತೇವೆ.
ಅಂದು ಶ್ರೀ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಯವರ ಸಾನಿಧ್ಯದಲ್ಲಿ,ಮಠದ ಪ್ರಧಾನ ಕಾರ್ಯದರ್ಶಿ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿ ಹಾಗೂ ಶಾಖಾಮಠಗಳ ಶ್ರೀಗಳು ಪಾಲ್ಗೊಳ್ಳಲಿದ್ದಾರೆ.
ಯಾರು ಭಾಗವಹಿಸಬಹುದು:
14 ರಿಂದ 60 ವರ್ಷದೊಳಗಿನ ಯಾರಾದರೂ ಈ ಶಿಬಿರದಲ್ಲಿ ಭಾಗವಹಿಸಬಹುದು.
ಏನು ಒದಗಿಸಲಾಗುತ್ತದೆ:
ಉಚಿತ ಊಟ ಮತ್ತು ವಸತಿ,ಉಚಿತ ಸಮವಸ್ತ್ರ, ಪೂಜಾ ಪುಸ್ತಕಗಳು ಮತ್ತು ನೋಟ್‌ಬುಕ್‌ಗಳನ್ನು ವಿತರಿಸಲಾಗುವುದು.
ಏನು ತರಬೇಕು:
ತಟ್ಟೆ, ಲೋಟ, ಚಾಪೆ, ದಿಂಬು ಮತ್ತು ಹೊದಿಕೆ, ಉಡುಪು, ದಿನ ನಿತ್ಯ ಬಳಕೆ ವಸ್ತುಗಳು ಮತ್ತು ಲಘು ಹೊದಿಕೆಯನ್ನು ತರಬೇಕು.

Adichunchanagiri Mutt
ಶಿಬಿರದಲ್ಲಿ ಏನು ಕಲಿಸಲಾಗುತ್ತದೆ:
ಪೂಜಾ ವಿಧಾನಗಳು,ಸಂಕಲ್ಪ ಹೇಗೆ ಮಾಡುವುದು,ವೇದ ಮಂತ್ರಗಳನ್ನು ಹೇಗೆ ಪಠಿಸುವುದು,ಗಾಯತ್ರಿ ಮಂತ್ರ, ಧ್ಯಾನ ಶ್ಲೋಕಗಳು, ಪಂಚಾಂಗ (ಹಿಂದೂ ಕ್ಯಾಲೆಂಡರ್) ಅಧ್ಯಯನ, ನುರಿತ ಅಧ್ಯಾಪಕರಿಂದ ಭೋಧನೆ ಮತ್ತು ಉತ್ತಮ ವಾಗ್ಮಿಗಳಿಂದ ಉಪನ್ಯಾಸವಿರುವುದು ವಿಶೇಷ.
ಬಾಕ್ಸ್:
ಮುಖ್ಯ ಅಂಶಗಳು:

ಮೊದಲ ದಿನ ನೋಂದಣಿ ಕಡ್ಡಾಯ,
ಆಧಾರ್ ಕಾರ್ಡ್ ಜೆರಾಕ್ಸ್ ಮತ್ತು ಎರಡು ಪಾಸ್‌ಪೋರ್ಟ್ ಸೈಜ್ ಫೋಟೋಗಳನ್ನು ತರಬೇಕು.
ಪೂರ್ಣ ಕಾಲದಲ್ಲಿ ಶಿಬಿರದಲ್ಲಿ ಭಾಗವಹಿಸಬೇಕು.
ಪೂರ್ಣ ಕಾಲದಲ್ಲಿ ಭಾಗವಹಿಸಿದವರಿಗೆ ಪ್ರಮಾಣಪತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ: 9481492311,9886958585,9448124141,9535601859

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Drinking Water Supplier Shivamogga ಶಿವಮೊಗ್ಗ ಕೆ.ಆರ್. ಜಲಶುದ್ಧೀಕರಣ ಘಟಕ ದುರಸ್ತಿ.: ಕುಡಿಯುವ ನೀರು ಸರಬರಾಜಿನಲ್ಲಿ ಅನಿರ್ದಿಷ್ಟ ಅವಧಿ ವ್ಯತ್ಯಯ.

Drinking Water Supplier Shivamogga ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕದಲ್ಲಿರುವ...

Rotary Shivamogga ಪರಿಸರ ಮಾಲಿನ್ಯದಿಂದಾಗಿ ನಮ್ಮ ಜೀವಿತ ಅವಧಿಕಡಿಮೆಯಾಗುತ್ತಿದೆ- ಡಿ.ಕೆ.ಶೇಷಗಿರಿ.

Rotary Shivamogga ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಆದ್ಯ ಕರ್ತವ್ಯ ಪರಿಸರವನ್ನು ಸರಿಯಾಗಿ ಸಂರಕ್ಷಣೆ...