Thursday, March 19, 2026
Thursday, March 19, 2026

Shimoga News ಮಹಿಳೆಯರ ವ್ಯವಹಾರದ ಅಭಿವೃದ್ಧಿಗೆ ಎಲ್ಲರ ಸಹಕಾರ ಅಗತ್ಯ- ಗಣಪತಿ ಶೆಣೈ.

Date:

Shimoga News ಮಹಿಳೆಯರು ಆರ್ಥಿಕವಾಗಿ ಸದೃಢರಾಗಿ ಆತ್ಮವಿಶ್ವಾಸದಿಂದ ಜೀವನದಲ್ಲಿ ಮುನ್ನಡೆಯಬೇಕು. ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರಿಗೆ ಹೆಚ್ಚಿನ ಪ್ರೋತ್ಸಾಹ ನೀಡುವುದು ಅವಶ್ಯಕ ಎಂದು ಆಭರಣ ಜ್ಯೂವೆಲ್ಲರಿ ಶಿವಮೊಗ್ಗ ಶಾಖೆ ವ್ಯವಸ್ಥಾಪಕ ಗಣಪತಿ ಶೆಣೈ ಹೇಳಿದರು.
ನಗರದ ಪೆಸಿಟ್ ಕಾಲೇಜಿನ ಪ್ರೇರಣ ಸಭಾಂಗಣದಲ್ಲಿ ಎರಡು ದಿನ ಆಯೋಜಿಸಿರುವ ಇನ್ನರ್ ವ್ಹೀಲ್ ಜಿಲ್ಲಾ ಸಮಾವೇಶದಲ್ಲಿ ವ್ಯಾಪಾರ ಮಳಿಗೆ ಹಾಗೂ ಪ್ರದರ್ಶನ ಮಳಿಗೆಗಳ ಉದ್ಘಾಟನೆ ನೆರವೇರಿಸಿ ಮಾತನಾಡಿ, ಮಹಿಳೆಯರು ವ್ಯವಹಾರದಲ್ಲಿ ಅಭಿವೃದ್ಧಿ ಹೊಂದಲು ಎಲ್ಲರ ಸಹಕಾರ ಅಗತ್ಯ ಎಂದು ತಿಳಿಸಿದರು.
ಇನ್ನರ್‌ವ್ಹೀಲ್ ಜಿಲ್ಲಾ ಚೇರ್ಮನ್ ಶಬರಿ ಕಡಿದಾಳ್ ಮಾತನಾಡಿ, ಮಹಿಳೆಯರು ಅಡುಗೆ ಮನೆಗೆ ಸೀಮಿತವಾಗದೆ ಸ್ವಾವಲಂಬಿಗಳಾಗಿ ಬದುಕು ಕಟ್ಟಿಕೊಳ್ಳಬೇಕು. ಸಂಘ ಸಂಸ್ಥೆಗಳಲ್ಲಿ ಪಾಲ್ಗೊಳ್ಳುವುದರ ಜತೆಗೆ ಆರ್ಥಿಕವಾಗಿ ಸಬಲರಾಗಬೇಕು. ಪರಸ್ಪರ ಒಡನಾಟ ಹೆಚ್ಚುತ್ತದೆ. ಅವರ ಪ್ರತಿಭೆ ಅನಾವರಣಗೊಳ್ಳುತ್ತದೆ ಎಂದು ಹೇಳಿದರು.
ಎಂಟು ಜಿಲ್ಲೆಗಳಿಂದ ಮಹಿಳಾ ಉದ್ಯಮಿಗಳು ಆಗಮಿಸಿದ್ದು, ಅವರ ವ್ಯಾಪಾರ ವಹಿವಾಟು ಅತ್ಯುತ್ತಮವಾಗಿ ನಡೆಯುವುದರ ಮುಖಾಂತರ ಅವರಿಗೆ ಪ್ರೋತ್ಸಾಹಿಸಬೇಕು. ನಗರದ ಉದ್ಯಮಿಗಳ ಸಹಕಾರದಿಂದ ಜಿಲ್ಲಾ ಸಮಾವೇಶ ಯಶಸ್ವಿಯಾಗಲಿದೆ ಎಂದು ತಿಳಿಸಿದರು.
Shimoga News ಡಾ. ಕಡಿದಾಳ್ ಗೋಪಾಲ್ ಮಾತನಾಡಿ, ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಸಾಧನೆ ಮಾಡಿದ್ದು, ಸಮಾವೇಶದಲ್ಲಿ 700ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ. ಚಲನಚಿತ್ರ ನಟಿ ಪೂಜಾ ಗಾಂಧಿ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದರು.
ರೋಟರಿ ಮಾಜಿ ಸಹಾಯಕ ಗವರ್ನರ್ ಜಿ.ವಿಜಯಕುಮಾರ್, ಅನೂಪ್, ಅಂಜು ಆದಿಮೂರ್ತಿ, ಬಿಂದು ವಿಜಯ ಕುಮಾರ್, ಕಾರ್ಯದರ್ಶಿ ವೀಣಾ ಹರ್ಷ, ಆಶಾ ಶ್ರೀಕಾಂತ್, ಜಯಂತಿ ವಾಲಿ, ಮಧುರ ಮಹೇಶ್, ಲತಾ ಸೋಮಣ್ಣ, ಶ್ವೇತಾ ಅಶಿತ್, ಮಾಜಿ ಜಿಲ್ಲಾ ಚೇರ್ಮನ್ ವಾರಿಜಾ ಜಗದೀಶ್, ಭಾರತಿ ಚಂದ್ರಶೇಖರ್, ಜ್ಯೋತಿ ಸುಬ್ಬೇಗೌಡ, ಆರ್ ಮನೋಹರ್, ಕಡಿದಾಳ್ ಪ್ರಕಾಶ್ ಹಾಗೂ ಇನ್ನರ್‌ವ್ಹೀಲ್ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...