Bengaluru Metropolitan Transport Corporation ಕರ್ನಾಟಕ ವಿಧಾನಸಭೆಯಿಂದ ಅಂಗೀಕಾರ ರೂಪದಲ್ಲಿರುವ ಬೆಂಗಳೂರ ಮಹಾನಗರ ಭೂಸಾರಿಗೆ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ-2025ಕ್ಕೆ ಪರಿಷತ್ತಿನಲ್ಲಿ ಗುರುವಾರ ಅಂಗೀಕಾರ ದೊರೆಯಿತು.
ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ ಅವರು ವಿಧೇಯಕವನ್ನು ಪರ್ಯಾಲೋಚಿಸಬೇಕೆಂದು ಸದನದಲ್ಲಿ ಮನವಿ ಮಾಡಿದರು.
ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಅಧಿನಿಯಮ, 2022 (2023ರ ಕರ್ನಾಟಕ 2 ಅಧಿನಿಯಮ 6)ರಲ್ಲಿರುವ ಬೆಂಗಳೂರು ಮಹಾನಗರ ಭೂಸಾರಿಗೆ ಪ್ರಾಧಿಕಾರ ಮತ್ತು ಕಾರ್ಯಕಾರಿ ಸಮಿತಿಯನ್ನು ಪರಿಷ್ಕರಿಸಲು, ಮಹಾಪೌರರು, ಬೃಹತ್ Bengaluru Metropolitan Transport Corporation ಬೆಂಗಳೂರು ಮಹಾನಗರ ಪಾಲಿಕೆ ಮತ್ತು ಬಿಬಿಎಂಪಿಯ ಮುಖ್ಯ ಆಯುಕ್ತರು ಮತ್ತು ಗ್ರೇಟರ್ ಬೆಂಗಳೂರು ಆಡಳಿತ ಅಧಿನಿಯಮ, 2024 ಅಧಿನಿಯಮಿತಿಯ ತತ್ಪರಿಣಾಮವಾಗಿ ಗ್ರೇಟರ್ ಬೆಂಗಳೂರು ಪ್ರದೇಶದ ನಗರ ಪಾಲಿಕೆಗಳನ್ನು ಸೇರಿಸಲು, ಈ ಅಧಿನಿಯಮವನ್ನು ತಿದ್ದುಪಡಿ ಮಾಡುವುದು ಅವಶ್ಯಕವೆಂದು ಪರಿಗಣಿಸಿ ವಿಧೇಯಕ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿಗಳು ಸದನಕ್ಕೆ ಮಾಹಿತಿ ನೀಡಿದರು. ಸಭಾಪತಿಗಳು, ವಿಧೇಯಕದ ಅಂಗೀಕಾರಕ್ಕಾಗಿ ಪ್ರಸ್ತಾವವನ್ನು ಧ್ವನಿಮತಕ್ಕೆ ಹಾಕಿದರು. ಪ್ರಸ್ತಾವಕ್ಕೆ ಪರಿಷತ್ತಿನಿಂದ ಅನುಮೋದನೆ ದೊರೆಯಿತು.
