ಶಿವಮೊಗ್ಗ ಹೊಸಮನೆ ನಾಲ್ಕನೇ ತಿರುವಿನ ಲಕ್ಷ್ಮಿ ನರಸಿಂಹಸ್ವಾಮಿ ದೇವಾಲಯದಲ್ಲಿ ದೇವಸ್ಥಾನ ಸಮಿತಿ ವತಿಯಿಂದ ಡಿ. 30ರಂದು ಇಡೀ ದಿನ ವೈಕುಂಠ ಏಕಾದಶಿಯ ವಿಶೇಷ ಪೂಜೆ, ಆರಾಧನೆ, ಭರತನಾಟ್ಯ, ಸಂಗೀತ ಕಾರ್ಯಕ್ರಮ ಸೇರಿದಂತೆ ವಿವಿಧ ಪ್ರಮುಖರ ಧಾರ್ಮಿಕ ಸಭೆ ನಡೆಯಲಿದೆ ಎಂದು ದೇವಸ್ಥಾನ ಸಮಿತಿ ತಿಳಿಸಿದೆ.
ಡಿಸೆಂಬರ್ 30ರ ಮಂಗಳವಾರ ಬೆಳಿಗ್ಗೆ 9:00 ಗಂಟೆಯಿಂದ ಪೂಜಾ ವಿಧಿ ವಿಧಾನ ಆರಂಭಗೊಳ್ಳಲಿದ್ದು, ಮಧ್ಯಾಹ್ನ 12:30 ಕ್ಕೆ ಮಹಾಮಂಗಳಾರತಿ ನಡೆಯಲಿದೆ.
ಸಂಜೆ 6 ರಿಂದ ಸಪ್ತಸ್ವರ ಟ್ರಸ್ಟ್ ನ ಸಂಗೀತ ಕಲಾವಿದರಿಂದ ಸಂಗೀತ ಲಹರಿ ಭಕ್ತಿಗೀತೆಗಳ ಪ್ರಸ್ತುತತೆ ನಡೆಯಲಿದೆ.
ತದನಂತರ ಶ್ರೀ ಲಕ್ಷ್ಮೀ ನರಸಿಂಹ ಸ್ವಾಮಿ ದೇವರ ನವರೂಪದ ಭರತನಾಟ್ಯ ಕಾರ್ಯಕ್ರಮವನ್ನು ಪ್ರತಿಭಾವಂತ ಪುಟಾಣಿ ಕಲಾವಿದರು ನಡೆಸಿಕೊಡಲಿದ್ದಾರೆ.
ಮಧ್ಯಾಹ್ನ ಪೂಜೆಯ ನಂತರ ನಡೆಯಲಿರುವ ಕಾರ್ಯಕ್ರಮದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ. ಎಸ್ ,ಈಶ್ವರಪ್ಪ, ಸಚಿವ ಮಧು ಬಂಗಾರಪ್ಪ, ಸಂಸದ ಬಿ ವೈ ರಾಘವೇಂದ್ರ, ಶಾಸಕರಾದ ಚನ್ನಬಸಪ್ಪ ಡಿಎಸ್ ಅರುಣ್, ರುದ್ರೆಗೌಡ, ಮಂಜುನಾಥಗೌಡ, ಸೂಡಾಧ್ಯಕ್ಷ ಸುಂದರೇಶ್ ಸೇರಿದಂತೆ ವಿವಿಧ ಗಣ್ಯರು ಆಗಮಿಸಿದ್ದಾರೆ.
ಕಾರ್ಯಕ್ರಮಕ್ಕೆ ಸರ್ವರನ್ನು ದೇವಸ್ಥಾನ ಸಮಿತಿಯ ಗೌರವಾಧ್ಯಕ್ಷ ಸುರೇಶ್ ಬಾಳೆಗುಂಡಿ, ಅಧ್ಯಕ್ಷ ಗಣೇಶ್ ಎಲ್, ಉಪಾಧ್ಯಕ್ಷ ಬಸವರಾಜ್ ಎಂ.ಆರ್., ಪ್ರಧಾನ ಕಾರ್ಯದರ್ಶಿ ಹಾಗೂ ಪ್ರಧಾನ ಅರ್ಚಕರಾದ ಶ್ರೀನಿವಾಸ ಮೂರ್ತಿ ಹಾಗೂ ಪದಾಧಿಕಾರಿಗಳು ಸ್ವಾಗತಿಸಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ಮೂಲಕ ಶ್ರೀ ಸ್ವಾಮಿಯ ಕೃಪೆಗೆ ಪಾತ್ರರಾಗಲು ಕೋರಲಾಗಿದೆ.
ಹೊಸಮನೆ ಶ್ರೀನರಸಿಂಹ ದೇಗುಲದಲ್ಲಿ ವೈಕುಂಠ ಏಕಾದಶಿ ವಿಶೇಷ ಪೂಜೆ
Date:
