Sunday, August 2, 2026
Sunday, August 2, 2026

B. Y. Raghavendra ಪ್ರಮುಖ ವೃತ್ತಗಳಲ್ಲಿ ಸ್ಕೈವಾಕ್ ಅಂಡರ್ ಪಾಸ್ ನಿರ್ಮಿಸಿ ಜನ ಸಂಚಾರಕ್ಕೆ ಸುರಕ್ಷತೆ ನೀಡಿ- ಸಂಸದ ಬಿ.ವೈ. ರಾಘವೇಂದ್ರ.

Date:

B. Y. Raghavendra ಶಿವಮೊಗ್ಗ ನಗರದಲ್ಲಿ ವಾಹನ ದಟ್ಟಣೆಯಿಂದ ಉಂಟಾಗಿರುವ ಟ್ರಾಫಿಕ್‌ನ್ನು ನಿಯಂತ್ರಿಸಲು ಪ್ರಮುಖ ಸರ್ಕಲ್ ಗಳಲ್ಲಿ ಸ್ಕೈವಾಕ್ ಅಥವಾ ಅಂಡರ್ ಪಾಸ್ ನಿರ್ಮಿಸುವ ಮೂಲಕ ಸಾರ್ವಜನಿಕರು ಸುರಕ್ಷಿತವಾಗಿ ಓಡಾಡಲು ಅನುಕೂಲ ಮಾಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸಂಸದರಾದ ಬಿ.ವೈ. ರಾಘವೇಂದ್ರ ಸೂಚಿಸಿದರು.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನ ಜಿಲ್ಲಾಧಿಕಾರಿಗಳೊಂದಿಗೆ ಏರ್ಪಡಿಸಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಂದೇಶ್ ಮೋಟಾರ್ ಸರ್ಕಲ್, ಸರ್ಕಾರಿ ಮತ್ತು ಖಾಸಗಿ ಬಸ್ ನಿಲ್ದಾಣ, ಆಲ್ಕೊಳ ಸರ್ಕಲ್ ಸೇರಿದಂತೆ ನಗರದ ಅನೇಕ ಸರ್ಕಲ್‌ಗಳು ಮತ್ತು ಮುಖ್ಯ ರಸ್ತೆಗಳಲ್ಲಿ ಹೆಚ್ಚಿನ ವಾಹನ ದಟ್ಟಣೆಯಿಂದ ರಸ್ತೆ ದಾಟಲು ಹಾಗೂ ರಸ್ತೆಯಲ್ಲಿ ಸಂಚರಿಸಲು ಸಾರ್ವಜನಿಕರು ಪರದಾಡುವಂತಾಗಿದೆ.
ಇದರಿಂದ ರಸ್ತೆ ಅಪಘಾತಗಳೂ ಹೆಚ್ಚುತ್ತಿದೆ. ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ಸ್ಕೈವಾಕ್ ಅಥವಾ ಅಂಡರ್ ಪಾಸ್ ನಿರ್ಮಾಣ ಮಾಡಬೇಕು ಎಂದು ತಿಳಿಸಿದರು.

ಈಗಾಗಲೇ ನಗರದಲ್ಲಿ ಶಿವಪ್ಪ ನಾಯಕ ಮತ್ತು ಅಮೀರ್ ಅಹಮದ್ ಸರ್ಕಲ್ ನಲ್ಲಿ ಅಂಡರ್ ಪಾಸ್ ನಿರ್ಮಾಣವಾಗಿದ್ದು, ಮಳೆಗಾಲದಲ್ಲಿ ಪ್ಯಾಸೇಜ್ ನೀರು ಒಳ ಬರುವುದರಿಂದ ಇದನ್ನು ಮುಚ್ಚಲಾಗಿದೆ. ಅದನ್ನು ಕೂಡಲೇ ಪರಿಶೀಲಿಸಿ ಮಳೆಗಾಲ ಹೊರತುಪಡಿಸಿ ಉಳಿದ ದಿನಗಳಲ್ಲಿ ಅಂಡರ್‌ಪಾಸ್‌ಗಳನ್ನು ತೆರೆದು ಸಾರ್ವಜನಿಕರಿಗೆ ಸುಗಮವಾಗಿ ರಸ್ತೆ ದಾಟಲು ಅನುವು ಮಾಡಿಕೊಡಲಾಗುತ್ತದೆ ಎಂದು ತಿಳಿಸಿದರು.

B. Y. Raghavendra ಶಿವಮೊಗ್ಗದ ಶಾಂತಮ್ಮ ಲೇಔಟ್ ಮಾರ್ಗವಾಗಿ ಚಿತ್ರದುರ್ಗ ಹೋಗುವ ರಸ್ತೆ ಹಾಗೂ ಗುಂಡಪ್ಪ ಶೆಡ್ ರಸ್ತೆಯಲ್ಲಿ ಈಗಾಗಲೇ ಅಂಡರ್‌ಪಾಸ್ ಮಾಡಲು ತೀರ್ಮಾನಿಸಿದ್ದು, ಮರ ಕಡಿತ ಬಾಕಿ ಇದೆ. ಅರಣ್ಯ ಇಲಾಖೆ ಮತ್ತು ರೈಲ್ವೆ ಇಲಾಖೆ ಜಂಟಿ ಸರ್ವೆ ಮಾಡಿ ವರದಿ ನೀಡಿದ ಕೂಡಲೇ ಅಂಡರ್‌ಪಾಸ್ ಕಾಮಗಾರಿ ಕೆಲಸ ಆರಂಭವಾಗುತ್ತದೆ. ಹಾಗೂ ತರೀಕೆರೆ ಬೈ ಪಾಸ್ ಕಾಮಗಾರಿ ಮರ ಕಡಿತ ನಿಂದ ಅರ್ಧಕ್ಕೆ ನಿಂತಿದ್ದು, ಅರಣ್ಯ ಇಲಾಖೆ ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸಿ ಕಾಮಗಾರಿಗೆ ದಾರಿ ಮಾಡಿಕೊಡಬೇಕು ಎಂದು ಸೂಚಿಸಿದರು.

ಕೇಂದ್ರ ಸರ್ಕಾರ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಕಳೆದ ಬಾರಿ ರೂ.3500 ಕೋಟಿ ನೀಡಿತ್ತು. ಆದರೆ ಈ ಬಾರಿ ರೂ.1500 ಕೋಟಿ ಬಿಡುಗಡೆ ಮಾಡಿದೆ. ಆಗುಂಬೆ ಮಾರ್ಗದ ಅಭಿವೃದ್ದಿಗೆ ರೂ.400 ಕೋಟಿ ಬಿಡುಗಡೆ ಆಗಿದೆ. ರಾಜ್ಯ ಸರ್ಕಾರ, ಅಧಿಕಾರಿಗಳು, ಪರಿಸರವಾದಿಗಳು ವರದಿ ನೀಡಿದ ಮೇಲೆ ಆ ಮಾರ್ಗಕ್ಕೆ ಟನಲ್ ಮಾಡುವುದೊ ಅಥವಾ ರಸ್ತೆ ಅಗಲೀಕರಣ ಮಾಡುವುದೊ ಎಂಬುದರ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದರು.

ಶಿವಮೊಗ್ಗದಿಂದ ಶಿಕಾರಿಪುರಕ್ಕೆ ಸಂಚರಿಸಲು ಈಗಾಗಲೇ ರೈಲ್ವೆ ಮಾರ್ಗವನ್ನು ನಿರ್ಮಿಸಲಾಗುತ್ತಿದೆ. ಆದರೆ ಶಿಕಾರಿಪುರ ದಿಂದ ರಾಣೆಬೆನ್ನೂರು ರೈಲ್ವೆ ಮಾರ್ಗ ಮಾಡಲು ಭೂಸ್ವಾಧೀನ ಕುರಿತಾದ ಸಮಸ್ಯೆ ಇದೆ. ಈ ಸಮಸ್ಯೆ ಬಗೆಹರಿಸಲು ರಾಜ್ಯ ಸರ್ಕಾರ ರೂ.45 ಕೋಟಿ ಹಣವನ್ನು ಒಂದು ವಾರದಲ್ಲಿ ಬಿಡುಗಡೆ ಮಾಡುವುದಾಗಿ ತಿಳಿಸಿದ್ದು, ಅದು ಬಂದ ಕೂಡಲೇ ಈ ಕಾರ್ಯ ಮುಂದುವರೆಯುತ್ತದೆ. ಮಾರ್ಚ್ ಒಳಗೆ ಶಿವಮೊಗ್ಗದಿಂದ ಶಿಕಾರಿಪುರ, ಶಿಕಾರಿಪುರದಿಂದ ರಾಣಿಬೆನ್ನೂರು ರೈಲ್ವೆ ಮಾರ್ಗ ಕಾಮಗಾರಿಯನ್ನು ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಸಿಸಿಎಫ್ ಹನುಂತಪ್ಪ, ಎಸ್‌ಪಿ ಬಿ.ನಿಖಿಲ್, ಡಿಸಿಎಫ್ ಅಜ್ಜಯ್ಯ, ಅಪರ ಜಿಲ್ಲಾಧಿಕಾರಿ ವಿ.ಅಭಿಷೇಕ್, ವಿಶೇಷ ಭೂಸ್ವಾಧೀನಾಧಿಕಾರಿ ಸಿದ್ದಲಿಂಗ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತರಾದ ಮಾಯಣ್ಣ ಗೌಡ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...