Thursday, March 19, 2026
Thursday, March 19, 2026

S. N. Channabasappa ಶಿವಮೊಗ್ಗ ವಿದ್ಯಾನಗರಸರ್ಕಾರಿ ಶಾಲೆಯ ಸಮಸ್ಯೆಗಳ ಇತ್ಯರ್ಥಕ್ಕೆ ಶಾಸಕ ಚೆನ್ನಿ ಸೂಚನೆ

Date:

S. N. Channabasappa ಶಿವಮೊಗ್ಗ ನಗರದ 14ನೇ ವಾರ್ಡ್ ವ್ಯಾಪ್ತಿಯ ವಿದ್ಯಾನಗರ ಬಡಾವಣೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಅವರು ಇಂದು ಪರಿಶೀಲಿಸಿದರು.

ಬಡಾವಣೆಯ ಪ್ರವೇಶ ದ್ವಾರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಮಹಾದ್ವಾರದ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಕೆಲಸದ ವೇಗ ಹಾಗೂ ಗುಣಮಟ್ಟದ ಬಗ್ಗೆ ಮಾಹಿತಿ ಪಡೆದರು. ಬಳಿಕ ಸ್ಥಳೀಯ ಉದ್ಯಾನವನಕ್ಕೆ ಭೇಟಿ ನೀಡಿ, ಉದ್ಯಾನವನದ ನಿರ್ವಹಣೆ ಹಾಗೂ ಸ್ವಚ್ಛತೆಯಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಸಾರ್ವಜನಿಕ ಗ್ರಂಥಾಲಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಓದುಗರಿಗೆ ಪುಸ್ತಕಗಳ ಲಭ್ಯತೆಯ ಬಗ್ಗೆ ಚರ್ಚಿಸಿದರು.

S. N. Channabasappa ವಿಶೇಷವಾಗಿ ವಿದ್ಯಾನಗರದ ಸರ್ಕಾರಿ ಶಾಲೆಗೆ ಭೇಟಿ ನೀಡಿದ ಅವರು, ಶಾಲೆಯ ಸಮಸ್ಯೆಗಳ ಬಗ್ಗೆ ಮಾಹಿತಿ ಪಡೆದು ಕೂಡಲೇ ಬಗೆಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಶ್ರೀ ಮೋಹನ್ ರೆಡ್ಡಿ, ವಾರ್ಡ್ ನ ಅಧ್ಯಕ್ಷರಾದ ಶ್ರೀ ರಾಜು, ಪ್ರಮುಖರಾದ ಶ್ರೀ ಮೋಹನ್, ಶ್ರೀ ಲಕ್ಷ್ಮಣ್ ಸೇರಿದಂತೆ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...