Thursday, March 19, 2026
Thursday, March 19, 2026

ಶಿವಮೊಗ್ಗದಲ್ಲಿ ಅಮೋಘ ” ನರ್ತನ ಸಂಭ್ರಮ” ಆಯೋಜನೆ

Date:

ಶಿವಮೊಗ್ಗ ನಗರದ ಸರ್ವತೋಮುಖ ಅಭಿವೃದ್ಧಿ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಒಂದು ಸಣ್ಣ ಪ್ರಯತ್ನವನ್ನು ಮಾಡುತ್ತಿರುವ, ವಿವಿಧ ಕ್ಷೇತ್ರಗಳಲ್ಲಿನ ಯುವ ಸಮಾನ ಮನಸ್ಕರ ತಂಡವಾದ ‘ಅನವರತ ಫೌಂಡೇಶನ್’ ವತಿಯಿಂದ ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

:’ನರ್ತನ ಸಂಭ್ರಮ’:
ರಾಷ್ಟ್ರಗಾಯನ ವಂದೇ ಮಾತರಂ’ಗೆ 150ನೇ ವರ್ಷದ ಸಂಭ್ರಮ ಹಾಗೂ ನಮ್ಮ ಹೆಮ್ಮೆಯ ನಾಡಗೀತೆಗೆ 100 ವರ್ಷಗಳು ಸಂದಿರುವ ಸುಸಂದರ್ಭದಲ್ಲಿ ಈ ಐತಿಹಾಸಿಕ ಘಟ್ಟಗಳನ್ನು ಸಂಭ್ರಮದಿಂದ ಆಚರಿಸಲು ನಗರದ ಹೆಸರಾಂತ ನೃತ್ಯ ತಂಡಗಳಿಂದ ‘ನರ್ತನ ಸಂಭ್ರಮ’ ಎಂಬ ವೈಭವದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ.

ನಗರದ ಖ್ಯಾತ ನೃತ್ಯ ಗುರುಗಳ ಮಾರ್ಗದರ್ಶನದಲ್ಲಿ ಬೆಳಗಿದ ಪ್ರತಿಭೆಗಳು ಒಂದೇ ವೇದಿಕೆಯಲ್ಲಿ ತಮ್ಮ ಕಲಾ ಚಾತುರ್ಯವನ್ನು ಪ್ರದರ್ಶಿಸಲಿದ್ದಾರೆ.
ಭಾಗವಹಿಸುವ ತಂಡಗಳು-

  1. ಕಲಾರ್ಪಣ
  2. ನಟನಂ ಬಾಲ ನಾಟ್ಯ ಕೇಂದ್ರ
  3. ಪುಷ್ಪ ಪರ್ಫಾರ್ಮಿಂಗ್ ಆರ್ಟ್ಸ್
  4. ಪೆರುಮಾಳ್ ನೃತ್ಯ ಕಲಾ ಕೇಂದ್ರ
  5. ಮನು ಕಲಾ ಕೇಂದ್ರ
  6. ಮಯೂರಿ ನೃತ್ಯ ಕಲಾ ಕೇಂದ್ರ
  7. ಮಲ್ನಾಡ್ ಜನಪದ ಕಲಾತಂಡ
  8. ಶ್ರೀ ನಟರಾಜ ನೃತ್ಯ ಕಲಾನಿಕೇತನ
  9. ಸಹಚೇತನ ನಾಟ್ಯಾಲಯ

ವಿಶೇಷವಾಗಿ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಕನ್ನಡ ಚಿತ್ರರಂಗದ ಖ್ಯಾತ ನಟಿಯಾದ ಶ್ರೀಮತಿ ತಾರಾ ಅವರು ನೆರವೇರಿಸಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯವಾಹ ಶ್ರೀ ಪಟ್ಟಾಭಿರಾಮ್ ಅವರು ಹಾಗೂ ಬೆಳ್ಳಿ ಮಂಡಲ ಹಾಗೂ ಸಿನಿಮೊಗ ತಂಡದ ಸಂಚಾಲಕರಾದ ಶ್ರೀ ವೈದ್ಯನಾಥ್ ಹೆಚ್.ಯು ಅವರು ಮುಖ್ಯ ಅತಿಥಿಗಳಾಗಿ ಕಾರ್ಯಕ್ರಮದ ಘನತೆಯನ್ನು ಹೆಚ್ಚಿಸುತ್ತಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಮ್ಮ ಫೌಂಡೇಶನ್ ನ ಗೌರವಾಧ್ಯಕ್ಷರು ಹಾಗೂ ನಗರದ ಶಾಸಕರಾದ ಶ್ರೀ ಎಸ್ ಎನ್ ಚನ್ನಬಸಪ್ಪ ಅವರು ವಹಿಸಲಿದ್ದಾರೆ.

ಗೆಜ್ಜೆ ನಾದದ ಲಯಕ್ಕೆ ಸಾಕ್ಷಿಯಾಗಲಿರುವ ಈ ಅಪೂರ್ವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಶಿವಮೊಗ್ಗದ ಕಲಾಭಿಮಾನಿಗಳು ಹಾಗೂ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ‘ಅನವರತ ಫೌಂಡೇಶನ್’ ವಿನಂತಿಸುತ್ತಿದೆ.

ಈ ಮೊದಲು,
ದಿನಾಂಕ 21.01.2026ರ ಬುಧವಾರ ಬೆಳಿಗ್ಗೆ 10.00 ಗಂಟೆಗೆ ನಗರದ ಸುವರ್ಣ ಸಾಂಸ್ಕೃತಿಕ ಭವನದಲ್ಲಿ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗಾಗಿ ಈ ಕೆಳಗಿನ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.

  • ನಮ್ಮ ಮಣ್ಣಿನ ಸೊಗಡನ್ನು ಬಿಂಬಿಸುವ ಜನಪದ ಕಲೆಯ ಆದ್ಯತೆಗಾಗಿ:
    “ಜಾನಪದ ನೃತ್ಯ ಮತ್ತು ಗಾಯನ”
  • ಅಭಿನಯ ಮತ್ತು ಕಲೆಯ ಪ್ರಕಟೀಕರಣಕ್ಕಾಗಿ: ಏಕಪಾತ್ರಾಭಿನಯ ಹಾಗೂ ಚಿತ್ರಕಲಾ ಸ್ಪರ್ಧೆಗಳು.
  • ಆಧುನಿಕ ಸಂವಹನ ಮತ್ತು ಇಂದಿನ ಪೀಳಿಗೆಯ ಆಸಕ್ತಿಯನ್ನು ಗಮನದಲ್ಲಿಟ್ಟುಕೊಂಡು : ‘ಛಾಯಾಗ್ರಹಣ’ (Photography) ಮತ್ತು ‘ರೀಲ್ಸ್’ (Reels) ಸ್ಪರ್ಧೆಗಳನ್ನು ಆಯೋಜಿಸಲಾಗಿದೆ.

ಈ ಸ್ಪರ್ಧೆಗಳಲ್ಲಿನ ಆಸಕ್ತರು ಭಾಗವಹಿಸಲು ಆನ್‌ಲೈನ್ ಮೂಲಕ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದ್ದು, ತಂಡವು ಈಗಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶಿವಮೊಗ್ಗದವರೇ ಆದ, ಖ್ಯಾತ ಸಾಹಿತಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಡಾ।। ಗಜಾನನ ಶರ್ಮ ಅವರು ನೆರವೇರಿಸಲಿದ್ದು, ಅವರೊಂದಿಗೆ ಸಾಮಾಜಿಕ ಕಾರ್ಯಕರ್ತರು, ಸಹ್ಯಾದ್ರಿ ವಾಣಿಜ್ಯ ಕಾಲೇಜ್ ನ ಉಪನ್ಯಾಸಕರಾದ ಶ್ರೀ ಗಿರೀಶ್ ಕಾರಂತ್ ಉಪಸ್ಥಿತರಿರುತ್ತಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರ ಹಾಗೂ ಜಿಲ್ಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರು ಈ ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...