Wednesday, September 16, 2026
Wednesday, September 16, 2026

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಶಾಲೆಯ ವಿದ್ಯಾರ್ಥಿ ಸಾಧನೆ

Date:

ಶಿವಮೊಗ್ಗ ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 3ನೇ ರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿ ಯಶಸ್ವಿಯಾಗಿ ನಡೆಯಿತು. ಈ ಪಂದ್ಯಾವಳಿಯಲ್ಲಿ ಶಿವಮೊಗ್ಗ ಜಿಲ್ಲೆಯ ನ್ಯಾಷನಲ್ ಪಬ್ಲಿಕ್ ಸ್ಕೂಲ್ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಗಮನಾರ್ಹ ಸಾಧನೆ ಮೆರೆದಿದ್ದಾರೆ.

ವಿದ್ಯಾರ್ಥಿಗಳು ವಿವಿಧ ವಿಭಾಗಗಳಲ್ಲಿ ಸ್ಪರ್ಧಿಸಿ ಒಟ್ಟು 14 ಬಂಗಾರದ ಪದಕಗಳು, 24 ಬೆಳ್ಳಿ ಪದಕಗಳು ಹಾಗೂ 37 ಕಂಚಿನ ಪದಕಗಳನ್ನು ಗಳಿಸಿದ್ದು, ಜೊತೆಗೆ ಸಮಗ್ರ ಪ್ರಶಸ್ತಿಯನ್ನು ಕೂಡ ತಮ್ಮದಾಗಿಸಿಕೊಂಡಿದ್ದಾರೆ.

ಈ ಅತ್ಯುತ್ತಮ ಸಾಧನೆಗಾಗಿ ಶಾಲೆಯ ಪ್ರಾಂಶುಪಾಲರಾದ ನವೀನಾ ಎಂ. ಪೈಸ್, ಶಾಲಾ ಮ್ಯಾನೇಜ್ಮೆಂಟ್, ಶಿಕ್ಷಕ ವೃಂದ ಹಾಗೂ ಪೋಷಕರು ವಿದ್ಯಾರ್ಥಿಗಳಿಗೆ ಹಾರ್ದಿಕ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.

ಈ ಸಂದರ್ಭದಲ್ಲಿ ಕರಾಟೆ ತರಬೇತುದಾರರಾದ ಸೆನ್ಸೈ ಮಂಜುನಾಥ್ ಹಾಗೂ ಸಹ ತರಬೇತಿದಾರರು ವಿದ್ಯಾರ್ಥಿಗಳ ಶಿಸ್ತು, ಪರಿಶ್ರಮ ಮತ್ತು ಸಾಧನೆಯನ್ನು ಶ್ಲಾಘಿಸಿ ಅಭಿನಂದನೆಗಳನ್ನು ಸಲ್ಲಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...